ದ್ವೇಷ ಭಾಷಣದ ಹಿನ್ನಲೆಯಲ್ಲಿ ನೋಟಿಸ್ ಜಾರಿ
ಪುತ್ತೂರು:- ಪುತ್ತೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಅ.30 ರಂದು ಕಲಂ 35 (3) ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಂತೆ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿರುವುದಾಗಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.
ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಪ್ರಭಾಕರ ಭಟ್ ವಿರುದ್ಧ ಈಶ್ವರಿ ಪದ್ಮುಂಜ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿತ್ತು.



