ಸಿಎಂ ಬದಲಾವಣೆ ಹೈಕಮಾಂಡ್ ನಿರ್ಧರಿಸುತ್ತದೆ.
ಮಂಗಳೂರು:- ಅ.27 ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಇದೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಭಿನ್ನ ಹೇಳಿಕೆ ನೀಡಿದ್ದಾರೆ
ಈತನಕ ನಾನೇ ಐದು ವರ್ಷ ಪೂರೈಸುವೆ ಎಂದು ವಿಶ್ವಾಸದಿಂದ ನುಡಿಯುತ್ತಿದ್ದ ಸಿದ್ದರಾಮಯ್ಯ ಇದೀಗ ಹೈಕಮಾಂಡ್ ನತ್ತ ಬೊಟ್ಟು ಮಾಡಿದ್ದಾರೆ.
ಅವರು ಇಂದು ಮಂಗಳೂರಿನ ವಿಮಾಣ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿವಿಧ ಸಚಿವರ ಹೇಳಿಕೆ ನೀಡುತ್ತಿರುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾ ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ ಆದರೆ ಈ ಬಗ್ಗೆ ಅಂತಿಮ ನಿರ್ಧಾರವನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದರು
ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿಕೆ ನೀಡುವ ಮೂಲಕ ಉಬ್ಬೇರಿಸುವಂತೆ ಮಾಡಿದರು



