ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ
ಮಂಗಳೂರು:-ಅ.27 ಸಮಾಜದಲ್ಲಿ ಒಡಕುಂಟು ಮಾಡಿ ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನ್ಮಾತಕ ಭಾಷಣವನ್ನು ಯಾರು ಮಾಡಿದರೂ ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು
ಕಲ್ಲಡ್ಕ ಪ್ರಭಾಕರ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್.ಐ.ಆರ್ ದಾಖಲಾಗುತ್ತದೆ ಅವರು ಮಹಿಳೆಯರಿಗೆ ಅಗೌರವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ ಎಂದರು



