ಹಲವು ವರ್ಷಗಳಿಂದ ಕಾನ್ ಸ್ಟೇಬಲ್ ಗಳು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಬದಲು ಪಿ ಕ್ಯಾಪ್ ಆಯ್ಕೆ
ಬೆಂಗಳೂರು:- 56 ವರ್ಷಗಳ ಬಳಿಕ ಪೋಲಿಸ್ ಸಿಬ್ಬಂದಿಗೆ ಹೊಸದಾಗಿ ನೀಡಲಾಗುತ್ತಿರುವ ಪಿ ಕ್ಯಾಪ್ ನಲ್ಲಿ ಬದಲಾವಣೆ ಅಷ್ಟೇ ಅಲ್ಲದೇ ದಕ್ಷತೆ ಮೆರೆಯುವ ಮೂಲಕ ವೃತ್ತಿಯಲ್ಲಿ ಬದಲಾವಣೆಯಾಗಬೇಕು ಈ ಮೂಲಕ ಸಮಾಜದಲ್ಲಿ ನಡೆಯುವ ಅಪರಾಧಗಳನ್ನು ಕಡಿಮೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ಹಮ್ಮಿಕೊಂಡಿದ್ದ ಪೋಲಿಸ್ ಸಿಬ್ಬಂದಿಗೆ ಪಿ- ಕ್ಯಾಪ್ ಪರಿಚಯ ಹಾಗೂ ವಿತರಣೆ ಹಾಗೂ ಮಾದಕ ವಸ್ತುಗಳ ವಿರೋಧಿ ಕಾರ್ಯಪಡೆಗೆ ಚಾಲನೆ ನೀಡಿ ಅವರು ಮಾತನಾಡಿದರು
ಹಲವು ವರ್ಷಗಳಿಂದ ಕಾನ್ಸ್ ಸ್ಟೇಬಲ್ ಗಳು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಬದಲು ಪಿ ಕ್ಯಾಪ್ ಆಯ್ಕೆ ಮಾಡಿದ್ದು ನಾನೇ 56 ವರ್ಷಗಳಿಂದ ಇದ್ದ ಕ್ಯಾಪನ್ನು ಇಂದು ಬದಲಾವಣೆ ಮಾಡಿದ್ದೇನೆ ದಕ್ಷತೆಯಿಂದ ಕೆಲಸ ಮಾಡುವ ಮೂಲಕ ಸರ್ಕಾರಕ್ಕೆ ಒಳ್ಳೆಯ ಹೆಸರು ತನ್ನಿ ಕ್ಯಾಪ್ ಬದಲಾವಣೆಯಷ್ಟೇ ಅಲ್ಲದೇ ವೃತ್ತಿಯಲ್ಲಿಯೂ ದಕ್ಷತೆಯಿಂದ ಕಾರ್ಯನಿರ್ವಹಿಸುವ ರೀತಿಯಲ್ಲಿ ಬದಲಾವಣೆ ಕಾಣಬೇಕು ಎಂದರು
ಇಂಡಿಯಾ ಜಸ್ಟೀಸ್ ವರದಿಯಂತೆ ಅತ್ಯುತ್ತಮ ಪೋಲಿಸ್ ಪಡೆಗಳಲ್ಲಿ ಕರ್ನಾಟಕ ಮೂರನೇ ಸ್ಥಾನ ಪಡೆದಿದೆ ಮುಂಬರುವ ದಿನಗಳಲ್ಲಿ ಮೊದಲ ಸ್ಥಾನಕ್ಕೆ ಬರಲು ಶ್ರಮಿಸುವಂತೆಯೂ ಕರೆ ನೀಡಿದರು
ಡ್ರೆಗ್ಸ್ ಮುಕ್ತ ರಾಜ್ಯ ಮಾಡಲು ಮಾದಕ ವಸ್ತುಗಳ ವಿರೋಧಿ ಕಾರ್ಯಪಡೆ ರಚಿಸಲಾಗಿದೆ ಮಂಗಳೂರು ಗಲಭೆಪೀಡಿತ ನಗರವಾಗಿತ್ತು ಪೋಲಿಸ್ ಅಧಿಕಾರಿಗಳನ್ನು ಬದಲಾವಣೆ ಮಾಡಿದ್ದರಿಂದ ನಿಯಂತ್ರಣಕ್ಕೆ ಬಂದಿದೆ ಅಪರಾಧಗಳನ್ನು ತಡೆಗಟ್ಟಿ ಉತ್ತಮ ತನಿಖೆ ಮಾಡಿ ಶಿಕ್ಷೆ ಕೊಡಿಸುವ ಇಚ್ಚಾಶಕ್ತಿ ಹೊಂದಬೇಕು ಪೋಲಿಸರು ಒಳ್ಳೆಯ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರಲಿದೆ ಎಂದರು



