ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಅವರಿಂದ ಉದ್ಘಾಟನೆ-
ನೀರ್ಕಜೆ:- ಕೇಪು ಗ್ರಾಮದ ನೀರ್ಕಜೆಯಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿಯ ಅನುದಾನದಲ್ಲಿ ನಿರ್ಮಿಸಲಾಗಿರುವ ರಿಕ್ಷಾ ತಂಗುದಾಣವನ್ನು ಮತ್ತು ಕೇಪು ಉಳ್ಳಾಲ್ತಿ ದೇವಸ್ಥಾನ ರಸ್ತೆಗೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರೀಜೆಶ್ ಚೌಟ ಅವರ ಅನುದಾನ ರೂ 5 ಲಕ್ಷದಲ್ಲಿ ನಿರ್ಮಾಣವಾಗಿರುವ ಕಾಂಕ್ರೀಟ್ ರಸ್ತೆಯನ್ನು ಮಾನ್ಯ ವಿಧಾನ ಪರಿಷತ್ತಿನ ಶಾಸಕರಾದ ಕಿಶೋರ್ ಕುಮಾರ್ ಬೊಟ್ಯಾಡಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಘವ ಮಣಿಯಾಣಿ, ಉಪಾಧ್ಯಕ್ಷರಾದ ಹೇಮಾವತಿ, ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಹಾಲಿಂಗ ನಾಯ್ಕ ಅಮೈ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀ ದಯಾನಂದ ಶೆಟ್ಟಿ ಉಜಿರೆಮಾರ್, ಉಪಾಧ್ಯಕ್ಷರಾದ ಶ್ರೀ ಹರಿಪ್ರಸಾದ್ ಯಾದವ್, ಸುನಿಲ್ ದಡ್ಡು, ವಿದ್ಯಾದರ್ ಜೈನ್, ಪುಣಚ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ರಾಜೇಶ್ ಬಾಳೆಕಲ್ಲು, ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಯಶಸ್ವಿನಿ ಶಾಸ್ತ್ರಿ, ಶಕ್ತಿ ಕೇಂದ್ರದ ಸಂಚಾಲಕರಾದ ರಾಜೇಶ್ ಕರವೀರ, ಪುಣಚ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಜನಾರ್ಧನ ಭಟ್, ನಿರ್ದೇಶಕರುಗಳಾದ ತಾರನಾಥ ಆಳ್ವ, ಪಾರ್ಟಿಯ ಪ್ರಮುಖರಾದ ರಾಧಾಕೃಷ್ಣ ಶೆಟ್ಟಿ ರಾಮಚಂದ್ರ ಮಣಿಯಾಣಿ, ಪುಷ್ಪಾಕರ ರೈ, ಪಂಚಾಯತ್ ಸದಸ್ಯರಾದ ಪುರುಷೋತ್ತಮ ಗೌಡ, ಜಗಜೀವನ್ ರಾಮ್ ಶೆಟ್ಟಿ, ವಿಶಾಲಕ್ಷೀ , ವನಿತ, ಜಯಶೀಲ, ಧರ್ಮಲತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನುಷಾ , ಪಾರ್ಟಿಯ ಬೂತಿನ ಅಧ್ಯಕ್ಷರು ಕಾರ್ಯಕರ್ತರು ಉಪಸ್ಥಿತರಿದ್ದರು.
ಪಂಚಾಯತ್ ಸದಸ್ಯರಾದ ಚಂದ್ರಶೇಖರ್ ಅವರು ಸ್ವಾಗತಿಸಿದರು ಪಂಚಾಯತ್ ಸದಸ್ಯರಾದ ಸಂತೋಷ್ ಅವರು ಧನ್ಯವಾದಗೈದರು
ಕೇಪು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ಬಾಲಚಂದ್ರ ಕಟ್ಟೆ ಅವರು ಕಾರ್ಯಕ್ರಮ ನಿರೂಪಿಸಿದರು



