ಆರೋಪಿ ವಶಕ್ಕೆ
ಸುಳ್ಯ:-ಫೇಸ್ಬುಕ್ ನಲ್ಲಿ purush acharya ಎಂಬ ಹೆಸರಿನ ಖಾತೆಯಿಂದ ದಸರಾ ಉದ್ಘಾಟನೆ ಮಾಡಿದ ಬಾನು ಮುಸ್ತಾಕ್ ರವರ ಬಗ್ಗೆ ಮತ್ತು ಮುಖ್ಯಮಂತ್ರಿಗಳ ಬಗ್ಗೆ ಅಸಭ್ಯ ಪದಗಳಲ್ಲಿ ನಿಂದಿಸಿ ಪೋಸ್ಟ್ ಮಾಡಿದ ಬಗ್ಗೆ ಸುಳ್ಯ ಪೋಲಿಸ್ ಠಾಣಾ ಅಕ್ರ 112/2025 ಕಲಂ 296,196,354, BNS ರಂತೆ ಪ್ರಕರಣಗಳು ದಾಖಲಾಗಿದೆ.
ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ಘಟಕದ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ನ ಸಹಕಾರದಿಂದ ಸುಳ್ಯ ಪೋಲಿಸರು ಪ್ರಕರಣದ ಆರೋಪಿ ಪುರುಷೋತ್ತಮ ಆಚಾರ್ಯ ಬರಿಮಾರು ಬಂಟ್ವಾಳ ತಾಲೂಕು ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿರುತ್ತದೆ.
ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೋಲಿಸರು ತಿಳಿಸಿದ್ದಾರೆ.



