ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಗೆ ಪೋಲಿಸ್ ಬುಲಾವ್
ಮಂಗಳೂರು:- ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬ ಹಾಕಿದ್ದ ಆಕ್ಷೇಪಾರ್ಹ ಕಮೆಂಟ್ ಅನ್ನು ಶೇರ್ ಮಾಡಿದ ಕಾರಣಕ್ಕೆ ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಅನ್ನು ವಿಚಾರಣೆಗೆ ಪೋಲಿಸ್ ಠಾಣೆಗೆ ಕರೆಸಲಾಗಿದೆ ಎಂದು ಪೋಲಿಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ
ಕದ್ರಿ ಪೋಲಿಸ್ ಠಾಣೆಗೆ ವಿಚಾರಣೆಗೆ ಕರೆಸಲಾಗಿದ್ದು ಶರಣ್ ಪಂಪ್ ವೆಲ್ ಶೇರ್ ಮಾಡಿದ್ದ ಕಮೆಂಟ್ ಈಗಾಗಲೇ ಡಿಲೀಟ್ ಆಗಿದೆ ವಿಕಾಸ್ ಎಂಬಾತ ಹಾಕಿದ್ದ ಕಮೆಂಟ್ ಅನ್ನು ಶರಣ್ ಪಂಪ್ ವೆಲ್ ಶೇರ್ ಮಾಡಿದ್ದರು ಈ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ಕಮೀಷನರ್ ತಿಳಿಸಿದರು



