ಮುಖ್ಯಮಂತ್ರಿ ರೇವಂತ ರೆಡ್ಡಿ ಸರ್ಕಾರದಲ್ಲಿ ಮೊದಲ ಬಾರಿಗೆ ಅಲ್ಪಸಂಖ್ಯಾತ ಸಮುದಾಯದ ನಾಯಕನಿಗೆ ಒಲಿದ ಸಚಿವ ಸ್ಥಾನ
ಹೈದರಾಬಾದ್ :- ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಾಂಗ್ರೆಸ್ ಮುಖಂಡ ಮೊಹಮ್ಮದ್ ಅಜರುದ್ದೀನ್ ಅವರು ತೆಲಂಗಾಣ ಸರ್ಕಾರದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಜಿಷ್ಣುದೇವ್ ವರ್ಮಾ ಅವರು ಅಜರುದ್ದೀನ್ ಅವರಿಗೆ ಪ್ರಮಾಣ ವಚನ ಭೋದಿಸಿದರು ಪ್ರಮಾಣ ವಚನ ಸ್ಬೀಕರಿಸುವ ಮೂಲಕ ಅಜರುದ್ದೀನ್ ಅವರು ರೇವಂತ ರೆಡ್ಡಿ ಸರ್ಕಾರದಲ್ಲಿ ಸಚಿವರಾದ ಅಲ್ಪಸಂಖ್ಯಾತ ಸಮುದಾಯದ ಮೊದಲ ಸಚಿವರೆನಿಸಿದರು.
ಒಂದು ಲಕ್ಷಕ್ಕೂ ಹೆಚ್ಚು ಮುಸ್ಲಿಂ ಮತದಾರರು ಇರುವ ಜುಬಿಲಿ ಹಿಲ್ಸ್ ಕ್ಷೇತ್ರದ ಉಪಚುನಾವಣೆ ನಡೆಯಲಿರುವ ಕಾರಣದಿಂದ ಅಜರುದ್ದೀನ್ ಅವರನ್ನು ಸಂಪುಟಕ್ಕೆ ನೇಮಕ ಮಾಡಲಾಗಿದೆ ಎನ್ನಲಾಗಿದೆ
ಬಿಆರ್ ಎಸ್ ಶಾಸಕ ಮಾಗಂಟಿ ಗೋಪಿನಾಥ್ ಅವರು ಈ ವರ್ಷದ ಜೂನ್ ನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರಿಂದ ಈ ಕ್ಷೇತ್ರ ತೆರವು ಗೊಂಡಿತ್ತು



