ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
ಬೆಂಗಳೂರು:-70ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ನಾಡಿನಾದ್ಯಂತ ಮನೆ ಮಾಡಿದ್ದು ಈ ಹಿನ್ನಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು ಇಂದು ನಾವು ಕನ್ನಡ ರಾಜ್ಯೋತ್ಸವನ್ನು ಆಚರಿಸುತ್ತಿರುವಾಗ ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ ಸಾಹಿತ್ಯ ಕಲೆ ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕ್ರತಿಯನ್ನು ಸಹ ನಾವು ಆಚರಿಸುತ್ತೇವೆ ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾಥಿಸುತ್ತೇನೆಂದು ಹೇಳಿದ್ದಾರೆ



