ಚೊಚ್ಚಲ ಏಕದಿನ ವಿಶ್ವಕಪ್ ಗೆದ್ದ ಮಹಿಳಾ ಪಡೆ ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯ
ಮುಂಬೈ:- ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಭಾರತ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.
2025ರ ಮಹಿಳಾ ವಿಶ್ವಕಪ್ ಫೈನಲ್‌ನಲ್ಲಿ ಅತಿಥೇಯ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದು ಇತಿಹಾಸ ಬರೆದಿದೆ
ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ ಗಳ ಅಂತರದಲ್ಲಿ ಮಣಿಸಿ ಭರ್ಜರಿ ಜಯ ದಾಖಲಿಸಿತು.
ಭಾರತ ನೀಡಿದ್ದ 299 ರನ್ ಗಳ ಬ್ರಹತ್ ಗುರಿಯನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡ 45.3 ಓವರ್ ಗಳಲ್ಲಿ 246 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 52 ರನ್ ಗಳ ಅಂತರದಿಂದ ಭಾರತದ ಎದುರು ಮಂಡಿಯೂರಿತು.



