ಸಿಎಂ ಸಿದ್ದರಾಮಯ್ಯ ಘೋಷಣೆ
ಕನ್ನಡಿಗರ ಭಾಷೆ ಕನ್ನಡಿಗರ ಹಿತವೇ ನಮ್ಮ ಮೊದಲ ಆದ್ಯತೆ
ಬೆಂಗಳೂರು:- ವಾರದಲ್ಲಿ 2 ದಿನ ಮದರಸಗಳಲ್ಲಿ ಕನ್ನಡ ಕಲಿಕೆ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಂಠೀರವ ಕ್ರೀಡಾಂಗಣದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಧ್ವಜಾರೋಹಣ ನೆರವೆರಿಸಿದ ಬಳಿಕ ಮಾತನಾಡಿದ ಸಿಎಂ ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಿಸಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಬ್ದಾರಿಯಾಗಿದೆ ಈ ನಿಟ್ಟಿನಲ್ಲಿ ನಮ್ಮ ಸರ್ಕಾರವು ಕೆಲಸ ಮಾಡುತ್ತಿದೆ ಎಂದರು
ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯಡಿ ಕಲಾವಿದರ ಮಾಸಾಶನ 2000ರೂ ನಿಂದ 2500 ರೂಗೆ ಹೆಚ್ಚಳ ಮಾಡಿದ್ದೇವೆ ಕರ್ನಾಟಕದಲ್ಲಿ ತಯಾರಾಗುವ ಮತ್ತು ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಬಳಕೆ ಕಡ್ಡಾಯಗೊಳಿಸಿದ್ದೇವೆ ರಾಜ್ಯದ ಮದರಾಸಗಳಲ್ಲಿ ವಾರದಲ್ಲಿ 2 ದಿನ ಕನ್ನಡ ಕಲಿಕೆ ಆರಂಭಿಸಲಾಗಿದೆ ಎಂದರು
ಕನ್ನಡ ಭಾಷೆ ಮತ್ತು ಕನ್ಮಡಿಗರ ಹಿತವೇ ನಮ್ಮ ಮೊದಲ ಆದ್ಯತೆ ಎಂದು ಅವರು ತಿಳಿಸಿದರು



