ನಾಳೆ ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವದೂಂದಿಗೆ ಅಂತ್ಯಕ್ರಿಯೆ
ಬಾಗಲಕೋಟೆ:- ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಚಿವ ಹಾಲಿ ಶಾಸಕ ಎಚ್ ವೈ ಮೇಟಿ ಅವರು ಕಾರ್ಡಿಯಾಕ್ ಅರೆಸ್ಟ್ ನಿಂದ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ
ಅನಾರೋಗ್ಯದಿಂದ ಶಾಸಕ ಎಚ್ ವೈ ಮೇಟಿ ಅವರು ಬೆಂಗಳೂರಿನ ಅಪೂಲೊ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು ಇದೀಗ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ
ಕಳೆದ ವಾರವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಅವರು ಮೈಸೂರಿನಿಂದ ನೇರವಾಗಿ ಜಯನಗರ ಖಾಸಗಿ ಆಸ್ಪತ್ರೆಗೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.



