ಸಚಿವ ಸ್ಥಾನಕ್ಕೆ ನಾನು ಯಾವುದೇ ಆಕಾಂಕ್ಷೆ ಇಟ್ಟಿಲ್ಲ ಪಕ್ಷದ ಸಂಘಟನೆಯೇ ನನ್ನ ಮೊದಲ ಆದ್ಯತೆಯಾಗಿದೆ ಪ್ರಸಕ್ತ ನ್ಯೂಸ್ ಜೊತೆ ಮಂಜುನಾಥ್ ಭಂಡಾರಿ ಪ್ರತಿಕ್ರಿಯೆ
ಮಂಗಳೂರು:- ಮಾಧ್ಯಮ ಮತ್ತು ರಾಜಕೀಯ ವಲಯದಲ್ಲಿ ಸದಾ ಸುದ್ದಿಯಲ್ಲಿರುವ ನವೆಂಬರ್ ಕ್ರಾಂತಿ ಮುಖ್ಯಮಂತ್ರಿ ಬದಲಾವಣೆ ಸಚಿವ ಸಂಪುಟ ಬದಲಾವಣೆ ಈ ಬಗ್ಗೆ ಪ್ರಸಕ್ತ ಮಾಧ್ಯಮವು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಮಂಜುನಾಥ್ ಭಂಡಾರಿ ಅವರನ್ನು ಸಂಪರ್ಕಿಸಿದಾಗ ಮುಖ್ಯಮಂತ್ರಿ ಬದಲಾವಣೆ ವಿಚಾರವನ್ನು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯ ಯಾವುದೇ ವಿಚಾರ ಪಕ್ಷದ ವಲಯದಲ್ಲಿ ಚರ್ಚೆ ಆಗಿಲ್ಲ ಈ ಬಗ್ಗೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದರು
ಇನ್ನೂ ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು ಸಚಿವ ಸ್ಥಾನದ ಬಗ್ಗೆ ನಾನೇನು ಆಕಾಂಕ್ಷೆ ಇಟ್ಟುಕೊಂಡಿಲ್ಲ ಕಾಂಗ್ರೆಸ್ ಪಕ್ಷದ ಸಂಘಟನೆಯೇ ನನ್ನ ಮೊದಲ ಆದ್ಯತೆಯಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಮಂಜುನಾಥ್ ಭಂಡಾರಿ ಅವರು ಪ್ರಸಕ್ತ ನ್ಯೂಸ್ ಗೆ ತಿಳಿಸಿದ್ದಾರೆ



