ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್
ಪುತ್ತೂರು ಗ್ರಾಮಾಂತರ ಪೋಲಿಸ್ ಠಾಣೆಗೆ ಹಾಜರು
ಪುತ್ತೂರು:- ಸಾರ್ವಜನಿಕ ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ವಿಚಾರಣೆಗೆ ಬುಧವಾರ ಸಂಜೆ ಹಾಜರಾದರು.
ಪುತ್ತೂರು ಗ್ರಾಮಾಂತರ ಠಾಣೆಯ ತನಿಖಾಧಿಕಾರಿಯ ನೋಟಿಸ್ ಹಿನ್ನೆಲೆ ಪ್ರಭಾಕರ ಭಟ್ ವಿಚಾರಣೆಗೆ ಹಾಜರಾಗಿದ್ದಾರೆ
ಅ.20 ರಂದು ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಾಡಿದ ಭಾಷಣ ಧಾರ್ಮಿಕ ದ್ವೇಷ ಪ್ರಚೋದಿಸುವ ಮಹಿಳೆಯರ ಘನತೆಗೆ ದಕ್ಕೆ ಉಂಟುಮಾಡುವ ಮಾಡುವ ಹಾಗೂ ಸಾರ್ವಜನಿಕ ಶಾಂತಿಗೆ ಅಪಾಯ ಉಂಟು ಮಾಡುವಂತಿತ್ತು.ಎಂದು ಆರೋಪಿಸಿ ಮಹಿಳಾ ಪರ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು
ದೂರಿನಂತೆ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ಅ 25ರಂದು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬಲವಂತದ ಕ್ರಮ ಕೈಗೊಳ್ಳದಂತೆ ನ್ಯಾಯಾಲಯ ಸೂಚಿಸಿರುವ ಹಿನ್ನಲೆ ಹೇಳಿಕೆ ದಾಖಲಿಸಿ ಬಿಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ



