ಅಚ್ಚರಿಯ ಹೇಳಿಕೆ ನೀಡಿದ ಯತ್ನಾಳ್
ಗದಗ:- ಪ್ರಸ್ತುತ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿದರೆ ಒಳ್ಳೆಯದು ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಭಾನುವಾರ ಹೇಳಿದ್ದಾರೆ.
ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ವರದಿಗಳಿಗೆ ಪ್ರತಿಕ್ರಿಯಿಸಿದ ಅವರು ಸಿದ್ದರಾಮಯ್ಯ ಅವರ ಮೌನ ಅವರ ಉದ್ದೇಶಗಳ ಬಗ್ಗೆ ಯಾವುದೇ ಸ್ಪಷ್ಟತೆಗಳಿಲ್ಲ ಸಿಎಂ ರಾಜಣ್ಣ ಅವರ ನಿವಾಸಕ್ಕೆ ಭೇಟಿ ನೀಡಿದ್ದು ರಾಜಣ್ಣ ಅವರ ಬಣ ಡಿಕೆ ಶಿವಕುಮಾರ್ ಅವರ ಮೇಲೆ ಆರೋಪ ಹೊರಿಸುತ್ತಿದೆ ಪಕ್ಷದ ಸದಸ್ಯರಲ್ಲಿ ಸ್ಪಷ್ಟ ಗೊಂದಲವಿದೆ ಪಕ್ಷ ವಿಭಜನೆಯಾಗುವ ಆತಂಕವಿದೆ ಎಂದು ಹೇಳಿದರು



