ಬಂಟ್ವಾಳ ಉಸ್ತುವಾರಿಯಾಗಿ ಜೊಸ್ಪಿನ್ ಡಿಸೋಜ ನೇಮಕ
ಬಂಟ್ವಾಳ:-ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಗ್ರಾಮಾಂತರ ಇದರ ಉಸ್ತುವಾರಿಗಳ ನೇಮಕವಾಗಿದ್ದು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಉಸ್ತುವಾರಿಯಾಗಿ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷೆ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿರುವ ಜೊಸ್ಪಿನ್ ಡಿಸೋಜ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರ ಆದೇಶದ ಮೇರೆಗೆ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಅಲ್ಕಾ ಲಂಬಾ ರವರ ನೇತೃತ್ವದಲ್ಲಿ ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಗ್ರಾಮಾಂತರ ಅಧ್ಯಕ್ಷರಾದ ಶ್ರೀಮತಿ ಉಷಾ ಅಂಚನ್ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.



