ರಾಜ್ಯಾಧ್ಯಕ್ಷರನ್ನು ಭೇಟಿಯಾಗಿ ಅಭಿನಂದಿಸಿದ ಕೆಪಿಸಿಸಿ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀ ಹನೀಫ್ ಬಗ್ಗುಮೂಲೆ ಹಾಗೂ ಕಾಂಗ್ರೆಸ್ ಯುವ ಮುಖಂಡ ಸಿದ್ದೀಕ್ ಸೂರ್ಯ
ಬೆಂಗಳೂರು:-ಕೆಪಿಸಿಸಿ ಮೀನುಗಾರ ವಿಭಾಗದ ರಾಜ್ಯ ಅಧ್ಯಕ್ಷರಾದ ಶ್ರೀ ಮಂಜುನಾಥ ಸುಣಗಾರ ಅವರನ್ನು ಕೆಪಿಸಿಸಿ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀ ಹನೀಫ್ ಬಗ್ಗುಮೂಲೆ ಅವರ ನೇತೃತ್ವದಲ್ಲಿ ಬೆಂಗಳೂರಿನ ಕಚೇರಿಯಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸಾಮಾಜಿಕ ನಾಯಕ ಸಿದ್ದೀಕ್ ಸೂರ್ಯ ಅವರನ್ನು ಮೀನುಗಾರ ವಿಭಾಗದ ರಾಜ್ಯಾಧ್ಯಕ್ಷರಾದ ಶ್ರೀ ಮಂಜುನಾಥ ಸುಣಗಾರ ಅವರು ಅಭಿನಂಧಿಸಿದರು
ಈ ಸಂದರ್ಭದಲ್ಲಿ ಮೀನುಗಾರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಗಾಯತ್ರಿ ಅವರು ಉಪಸ್ಥಿತರಿದ್ದರು



