ಕೇಂದ್ರ ಸರಕಾರದ ವಿರುದ್ಧ ಮಾಜಿ ಸಚಿವ ಬಿ ರಮನಾಥ್ ರೈ ಗರಂ
ಮಂಗಳೂರು:- ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ತಿದ್ದುಪಡಿ ಮಾಡಿ ಹೆಸರು ಅಳಿಸುತ್ತಿರುವುದು ಗೋರ ಅಪರಾಧವಾಗಿದ್ದು ಕೇಂದ್ರ ಸರಕಾರದ ಈ ನಡೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಖಂಡಿಸುವುದಾಗಿ ಮಾಜಿ ಸಚಿವ ಬಿರಮನಾಥ್ ರೈ ಹೇಳಿದ್ದಾರೆ
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಯುಪಿಎ ಆಡಳಿತಾವಧಿಯಲ್ಲಿ ನೀಡಲಾದ ಮಹತ್ತರ ಯೋಜನೆ ಇದಾಗಿದ್ದು ಜಗತ್ತು ಈ ಕಾರ್ಯಕ್ರಮವನ್ನು ಮೆಚ್ಚಿದೆ ಎಂದರು
ಈ ಯೋಜನೆ ಮಂಡಿಸಲಾದ ಸಂದರ್ಭದಲ್ಲಿ ವಿರೋಧಪಕ್ಷಗಳು ಟೀಕೆ ಮಾಡಿದ್ದು ಭ್ರಷ್ಟಾಚಾರ ಕಾರ್ಯಕ್ರಮ ಎಂದು ಹೇಳಿದವು ಮಹತ್ವ ಗಾಂಧಿ ಹೆಸರಿನಲ್ಲಿ ಜಾರಿಗೆ ಬಂದಿದ್ದ ಯೋಜನೆ ಸಮಾಜದ ಬಡ ರೈತ ಕಾರ್ಮಿಕ ವರ್ಗಕ್ಕೆ ಮನೆರೇಗ ಕಾರ್ಯಕ್ರಮದಿಂದ ಅನುಕೂಲವಾಗಿದೆ ಇದೀಗ ಮಹಾತ್ಮಗಾಂಧಿ ಹೆಸರನ್ನು ಕೈಬಿಡುವ ಮೂಲಕ ಅವಮಾನ ಮಾಡಲಾಗಿದೆ
ಈಗಾಗಲೇ ಮಹಾತ್ಮಗಾಂಧಿ ವಿರುದ್ಧ ಸಂಘಪರಿವಾರದ ಶಕ್ತಿಗಳಿಂದ ನಡೆಯುತ್ತಿರುವ ಮಹಾತ್ಮಾ ಗಾಂಧಿ ವಿರುದ್ದದ ಅವಹೇಳನದ ಭಾಗ ಇದಾಗಿದೆ ಎಂದು ಆರೋಪಿಸಿದರು
ಈ ಹಿಂದೆ ಈ ಯೋಜನೆಯಡಿ ವೇತನವನ್ನು ಕೇಂದ್ರ ಸರಕಾರದಿಂದ ಪಾವತಿಸಲಾಗುತ್ತಿತ್ತು ಈಗ ಕೇಂದ್ರ ಶೆ.60% ರಾಜ್ಯ ಶೇ 40% ಪಾಲು ಎಂದು ಹೇಳಿರುವುದು ಈ ಯೋಜನೆಯ ಗಾಂಧೀಜಿ ಹೆಸರು ಬದಲಾವಣೆಯ ಜತೆಗೆ ಯೋಜನೆಯನ್ನು ದುರ್ಬಲಗೊಳಿಸುವ ಯತ್ನವೂ ನಡೆದಿದೆ ಗಾಂಧೀಜಿ ಬಗೆಗಿನ ಬಿಜೆಪಿ ಧೋರಣೆ ಏನೆಂಬುದು ಇದರಿಂದ ಸ್ಪಷ್ಟವಾಗಿದೆ ಎಂದರು



