ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಫೈಲಟ್*
ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಬ್ಬರೂ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ದರಾಗಿರುತ್ತಾರೆ.
ಏಕೆಂದರೆ 2028ರಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಅತ್ಯಂತ ಮುಖ್ಯವಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಚಿನ್ ಪೈಲಟ್ ಹೇಳಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿಯಾಗಿರಲಿ ಅಥವಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿರಲಿ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ದರಾಗಿರುವುದಿಲ್ಲ ಎಂದು ಪಕ್ಷದ ಯಾವ ನಾಯಕರು ಹೇಳಿದ್ದಾರೆ ತಿಳಿಸಿ ಈ ನಿರ್ಧಾರ ರಾಜ್ಯದ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರಿಗೂ ಸ್ವೀಕಾರ್ಹ
ನಾವು ನಮ್ಮ ಭರವಸೆಗಳನ್ನು ಈಡೇರಿಸುತ್ತೇವೆ ಮತ್ತು 2028 ರಲ್ಲಿ ಇನ್ನೂ ಹೆಚ್ಚಿನ ಬಹುಮತದೊಂದಿಗೆ ರಾಜ್ಯವನ್ನು ಮತ್ತೊಮ್ಮೆ ಗೆಲ್ಲಲು ನಾವು ಕೆಲಸ ಮಾಡುತ್ತಿದೆ ಎಂದರು
ಶಿವಕುಮಾರ್ ಸಿಎಂ ಸಿದ್ದರಾಮಯ್ಯ ಅವರನ್ನು ತಮ್ಮ ಅಣ್ಣ ಎಂದು ಕರೆದಾಗ ಸಿದ್ದರಾಮಯ್ಯ ಅವರು ನನ್ನ ಕಿರಿಯ ಸಹೋದರ ಎಂದಾಗ ವಿಷಯ ಇತ್ಯರ್ಥವಾಗುತ್ತದೆ ಎಂದರು
ಎಲ್ಲವನ್ನೂ ಕಾಂಗ್ರೆಸ್ ಹೈಕಮಾಂಡ್ ಗೆ ಬಿಟ್ಟಾಗ ಪಕ್ಷವು ಏನು ಮಾಡಬೇಕೋ ಅದನ್ನು ನಿರ್ಧರಿಸುತ್ತದೆ ಕರ್ನಾಟಕ ಸೇರಿದಂತೆ ದೇಶಾದ್ಯಂತ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದು ನಮ್ಮ ಸಾಮೂಹಿಕ ಉದ್ದೇಶವಾಗಿದೆ ಎಂದರು



