ಮಂಗಳೂರು ಜಿಲ್ಲಾ ಸೆಷನ್ಸ್ ನ್ಯಾಯಾಲಯದಿಂದ ಆದೇಶ
ಗೇರುಕಟ್ಟೆ: ಪೋಕ್ಸೋ ಪ್ರಕರಣದ ಆರೋಪಿಗೆ ಮಂಗಳೂರು ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 140/2025 ರಂತೆ ಬೆಳ್ತಂಗಡಿ ತಾಲೂಕು, ಕಳಿಯ ಗ್ರಾಮದ ನಿವಾಸಿಯಾದ ಮಹಮ್ಮದ್ ಎಂಬವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಜಾಮೀನು ಅರ್ಜಿಯನ್ನು ಪರಿಶೀಲಿಸಿ ವಾದ ಪ್ರತಿವಾದಗಳನ್ನು ಆಲಿಸಿದ ಮಾನ್ಯ ನ್ಯಾಯಾಲಯ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಆರೋಪಿ ಪರವಾಗಿ ಲೆಕ್ಸ್ ವಿಷನ್ ಲಾ ಛೇಂಬರ್ ನ ವಕೀಲರಾದ ನವಾಝ್ ಶರೀಫ್ ಎ ಹಾಗೂ ಇರ್ಷಾದ್ ವಾದಿಸಿದ್ದರು.



