ಸಹಾಯಕ ಆಯುಕ್ತರ ಆದೇಶ
ವಿಟ್ಲ:- ವಿಟ್ಲ ಪೋಲಿಸ್ ಠಾಣಾ ವ್ಯಾಪ್ತಿಯ ಕೇಪು ಗ್ರಾಮದ ಬಡಕೋಡಿ ನಿವಾಸಿ ಗಣೇಶ ಪೂಜಾರಿಯನ್ನು ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಗಡಿಪಾರು ಮಾಡಿ ಆದೇಶ ಮಾಡಲಾಗಿದೆ
ಹಲ್ಲೆ, ದೊಂಬಿ, ಕೊಲೆ ಯತ್ನ, ಜೂಜು ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ಒಟ್ಟು 16 ಅಪರಾಧ ಪ್ರಕರಣಗಳಲ್ಲಿ ಗಣೇಶ ಪೂಜಾರಿ ಆರೋಪಿಯಾಗಿದ್ದಾನೆ.
ವಿಟ್ಲ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಠಾಣಾಧಿಕಾರಿಗಳ ವರದಿಯ ಮೇರೆಗೆ ಮಂಗಳೂರು ಉಪವಿಭಾಗೀಯ ದಂಡಾಧಿಕಾರಿ ಹಾಗೂ ಸಹಾಯಕ ಆಯುಕ್ತರು ಗಡಿಪಾರು ಆದೇಶ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ಹಾಸನ ಆಲೂರು ಪೋಲಿಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡುವ ಬಗ್ಗೆ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ
ಸದ್ರಿ ಆದೇಶದಂತೆ ವಿಟ್ಲ ಪೋಲಿಸರು ಸುರಕ್ಷಿತವಾಗಿ ಆಲೂರು ಪೋಲಿಸ್ ಠಾಣೆಗೆ ವರ್ಗಾಯಿಸಿದ್ದಾರೆ.



