ಐತಿಹಾಸಿಕ ಕಾರ್ಯಕ್ರಮದಲ್ಲಿ 3500 ಕ್ಕಿಂತಲೂ ಮಿಕ್ಕಿದ ಜನಸಾಗರ
ಪುಣಚ:-ರೈ ಎಸ್ಟೇಟ್ ಎಜುಕೇಶನಲ್ &ಚಾರಿಟೇಬಲ್ ಟ್ರಸ್ಟ್ ವತಿಯಿಂದ ಟ್ರೆಸ್ಟ್ ನ ಪ್ರವರ್ತಕ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಅಶೋಕ ಜನಮನ 2025 ಕಾರ್ಯಕ್ರಮದ ಉಡುಗೊರೆ ವಿತರಣೆ ಕಾರ್ಯಕ್ರಮ ಪುಣಚ ಪರಿಯಾಲ್ತಡ್ಕ ಶಾಲಾ ಮೈದಾನದಲ್ಲಿ ಪೆ.15ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಸುಮಾರು 3500 ಕ್ಕಿಂತ ಮಿಕ್ಕಿದ ಜನರು ಭಾಗವಹಿಸಿದರು
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಗ್ರಾಮದ ಇಬ್ಬರನ್ನು ಶಾಸಕರು ವೇದಿಕೆಯಲ್ಲಿ ಸನ್ಮಾನಿಸಿದರು
ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಅಶೋಕ್ ರೈ
ಅಶೋಕ ಜನಮನ ಉಡುಗೊರೆ ವಿತರಿಸುವ ಮುನ್ನ ಶಾಸಕರಾದ ಅಶೋಕ್ ಕುಮಾರ್ ರೈ ಅವರು 2025 ಅ 20 ರಂದು ಅಶೋಕ ಜನಮನ ಕಾರ್ಯಕ್ರಮದಲ್ಲಿ ಜನಸಂದಣಿ ಹಾಗೂ ಮಳೆಯ ಅಡಚಣೆಯಿಂದಾಗಿ ಹಲವಾರು ಮಂದಿ ಉಡುಗೊರೆ ಸಿಗದೇ ವಂಚಿತರಾಗಿದ್ದಾರೆ.ಎಂಬ ವಿಷಾಧವಿದೆ ಈ ನಿಟ್ಟಿನಲ್ಲಿ ಪ್ರತಿ ಗ್ರಾಮ ವ್ಯಾಪ್ತಿಯಲ್ಲಿ ಉಡುಗೊರೆಯನ್ನು ವಿತರಿಸುತ್ತೇನೆ ಎಂದರು
ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್ ಸಂದೋಭೋರ್ಚಿತವಾಗಿ ಮಾತನಾಡಿ ಶುಭ ಹಾರೈಸಿದರು
ವೇದಿಕೆಯಲ್ಲಿ ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಅಳಿಕೆ, ವಿಟ್ಲ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶ್ರೀಧರ ಶೆಟ್ಟಿ ದೇವರಗುಂಡಿ, ರೈ ಎಸ್ಟೇಟ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ, ಸದಸ್ಯರಾದ ರಾಜೇಂದ್ರ ರೈ ಬೈಲುಗುತ್ತು, ಎಂ.ಎಸ್ ಹಮೀದ್ ಮಣಿಲ, ಅಶೋಕ್ ಬೈಲಡ್ಕ , ವಿಟ್ಲ ಬ್ಲಾಕ್ ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷರು ಮಹಾಲಿಂಗ ನಾಯ್ಕ, ವಿಟ್ಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಅಲ್ಬರ್ಟ್ ಡಿಸೋಜ, ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ರಾಮಣ್ಣ ಪಿಲಿಂಜ, ಕೇಪು ಗ್ರಾಮ ಪಂಚಾಯತಿ ಸದಸ್ಯರಾದ ಕರೀಂ ಕುದ್ದುಪದವು, ಪುಣಚ ವಲಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸಂತೋಷ್ ರೈ ಬೈಲುಗುತ್ತು, ಕ್ಸೇವಿಯರ್ ಡಿಸೋಜ, ಪ್ರಧಾನ ಕಾರ್ಯದರ್ಶಿಗಳಾದ ಸಿರಾಜ್ ಮಣಿಲ, ಪ್ರಶಾಂತ್ ಗುಡ್ಡೆಗದ್ದೆ, ಉಪಸ್ಥಿತರಿದ್ದರು
ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಕಾರ್ಯಕ್ರಮ ನಿರೂಪಿಸಿದರು



