ಆಡ್ಯಾರ್‌ನ Barakah International School and College ಸಂಸ್ಥೆಗೆ ಹೆಮ್ಮೆಯ ಕ್ಷಣ ಒಲಿದಿದೆ. ಸಂಸ್ಥೆಯ ಪದವಿ ಕಾಲೇಜಿನ ವಿದ್ಯಾರ್ಥಿನಿ ಐಷಾ ಅವರು Mangalore Universityಯ ಬಿ.ಎ. ವಿಭಾಗದಲ್ಲಿ 5ನೇ ರ‍್ಯಾಂಕ್ ಗಳಿಸುವ ಮೂಲಕ ಸಂಸ್ಥೆಯ ಕೀರ್ತಿಪತಾಕೆಯನ್ನು ಮತ್ತೊಮ್ಮೆ ಎತ್ತಿಹಿಡಿದಿದ್ದಾರೆ.
ಐಷಾ ಅವರು ಅಶ್ರಫ್ ಅಲಿ ಹಾಗೂ ರಮ್ಲತ್ ದಂಪತಿಯ ಪುತ್ರಿಯಾಗಿದ್ದು, ಅಲ್ತಾಫ್ ಉಮರ್ ಅವರ ಪತ್ನಿಯಾಗಿದ್ದಾರೆ. ಈಗಾಗಲೇ ಶ್ರೇಷ್ಠ ಶೈಕ್ಷಣಿಕ ಸಾಧನೆ ಮೆರೆದಿರುವ ಅವರು, ಮಂಗಳೂರು ವಿಶ್ವವಿದ್ಯಾಲಯದಲ್ಲೇ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು(M.A) ಅಭ್ಯಾಸಿಸುತ್ತಿದ್ದಾರೆ. ಅವರ ಪರಿಶ್ರಮ, ನಿಯಮಿತ ಅಧ್ಯಯನ ಹಾಗೂ ಗುರಿ ಸಾಧನೆಗೆ ಹೊಂದಿರುವ ನಿಷ್ಠೆಯೇ ಈ ಸಾಧನೆಗೆ ಬೆನ್ನೆಲುಬಾಗಿದೆ.
ಬರಕಾ ಪದವಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅವಧಿಯಲ್ಲಿಯೇ ಐಷಾ ಅವರು ತಮ್ಮ ಪ್ರತಿಭೆ, ಶಿಸ್ತು ಮತ್ತು ಅಧ್ಯಯನಾಸಕ್ತಿಯಿಂದ ಶಿಕ್ಷಕರ ಮೆಚ್ಚುಗೆ ಗಳಿಸಿದ್ದರು. ವಿಶ್ವವಿದ್ಯಾಲಯ ಮಟ್ಟದಲ್ಲಿ ರ‍್ಯಾಂಕ್ ಗಳಿಸಿರುವುದು ಅವರ ವೈಯಕ್ತಿಕ ಸಾಧನೆಯಷ್ಟೇ ಅಲ್ಲದೆ, ಸಂಸ್ಥೆಯ ಶೈಕ್ಷಣಿಕ ಗುಣಮಟ್ಟಕ್ಕೂ ಸಾಕ್ಷಿಯಾಗಿದೆ.
ಬರಕಾ ಇಂಟರ್‌ನ್ಯಾಷನಲ್ ಶಾಲೆ ಮತ್ತು ಕಾಲೇಜು ಪ್ರೀ-ಕೆ.ಜಿ.ಯಿಂದ ಪದವಿ ಮಟ್ಟದವರೆಗೆ ಸಮಗ್ರ ಶಿಕ್ಷಣವನ್ನು ನೀಡುತ್ತಿದ್ದು, ಪ್ರತೀ ವರ್ಷವೂ ಶೈಕ್ಷಣಿಕ ಹಾಗೂ ಪಾಠ್ಯೇತರ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ರಾಜ್ಯ ಹಾಗೂ ವಿಶ್ವವಿದ್ಯಾಲಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಗುಣಮಟ್ಟದ ಬೋಧನೆ, ಅನುಭವಸಂಪನ್ನ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿ ಕೇಂದ್ರೀಕೃತ ಶಿಕ್ಷಣ ವ್ಯವಸ್ಥೆಯೇ ಸಂಸ್ಥೆಯ ಯಶಸ್ಸಿನ ಮೂಲಾಧಾರವಾಗಿದೆ.
ಐಷಾ ಅವರ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯ ಚೇಯರ್ಮ್ಯಾನ್ ಅಶ್ರಪ್ ಬಜ್ಪೆ, ಪ್ರಾಂಶುಪಾಲರರಾದ ಬಿ.ಎಸ್.ಶರ್ಪುದ್ದೀನ್ , ಉಪನ್ಯಾಸಕರು ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದು, ಭವಿಷ್ಯದಲ್ಲಿಯೂ ಇನ್ನಷ್ಟು ಉನ್ನತ ಸಾಧನೆಗಳತ್ತ ಅವರು ಹೆಜ್ಜೆ ಇಡಲಿ ಎಂದು ಇಸ್ಲಾಮಿಕ್ ವಿಭಾಗದ ಪ್ರಾಂಶುಪಾಲರಾದ ಮಹಮ್ಮದ್ ಹನೀಪ್ ಬೊಳಂತೂರು ಪತ್ರೀಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.



