ರಮನಾಥ್ ರೈ ಅವರನ್ನು ಸೋಲಿಸಿದ್ದು ನೋವು ತರಿಸಿದೆ
ಬಂಟ್ವಾಳ:- 2028ಕ್ಕೆ ನಾವೇ ಅಧಿಕಾರಕ್ಕೆ ಬಂದೇ ಬರ್ತಿವಿ ನಾವು ಅಧಿಕಾರದಲ್ಲಿದ್ದಾಗ ಕಂಬಳಕ್ಕೆ ಏನು ಪ್ರೋತ್ಸಾಹ ನೀಡಬೇಕೋ ಅದಕ್ಕೆ ಪ್ರೋತ್ಸಾಹ ನೀಡುತ್ತೇವೆ ಕಂಬಳಕ್ಕೆ ಹಣಕಾಸಿನ ನೆರವನ್ನೂ ಕೊಡ್ತೇವೆ ರಮನಾಥ್ ರೈ ಅವರನ್ನು ಸೋಲಿಸಿದ್ದು ಬೇಸರ ತಂದಿದೆ ಮುಂದಿನ ಚುನಾವಣೆಯಲ್ಲಿ ರೈ ಅವರೇ ಅಭ್ಯರ್ಥಿಯಾಗ್ತಾರೆ ಅವರನ್ನು ಮತ್ತೆ ಗೆಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ
ಬಂಟ್ವಾಳದ ನಾವೂರು ಕೊಡಿಬೈಲು ಎಂಬಲ್ಲಿ ಮಾಜಿ ಸಚಿವ ಬಿ ರಮನಾಥ್ ರೈ ನೇತೃತ್ವದಲ್ಲಿ ಶನಿವಾರ ನಡೆದ ಮೂಡೂರು ಪಡೂರು ಜೋಡುಕರೆ ಬಂಟ್ವಾಳ ಕಂಬಳದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು
ಬೆಂಜನಪದವಿನಲ್ಲಿ ಹತ್ತು ಕೋಟಿ ರೂ ಮಂಜುರಾಗಿತ್ತು ಅದನ್ನು ಅನುಷ್ಟಾನ ಮಾಡಲು ಸಾಧ್ಯವಾಗಿಲ್ಲ ಮತ್ತೊಮ್ಮೆ ಕ್ರೀಡಾಂಗಣ ನಿರ್ಮಾಣಕ್ಕೆ ನನಗೆ ಅವಕಾಶವನ್ನು ಮಾಡಿಕೊಡಬೇಕು ಎಂದು ಪ್ರಾಸ್ತವಿಕವಾಗಿ ಮಾತನಾಡಿದ ಮಾಜಿ ಸಚಿವ ರಮನಾಥ್ ರೈ ಮನವಿ ಮಾಡಿದರು ಇದಕ್ಕೆ ಸ್ಪಂದಿಸಿದ ಸಿಎಂ ಈ ಬಾರಿ ಕ್ರೀಡಾಂಗಣ ನಿರ್ಮಾಣಕ್ಕೆ ನೆರವು ನೀಡುವುದಾಗಿ ಹೇಳಿದರು
ಕಾರ್ಯಕ್ರಮದಲ್ಲಿ ಹಲವಾರು ಅತಿಥಿ ಗಣ್ಯರು ಉಪಸ್ಥಿತರಿದ್ದರು



