ಬೆಂಗಳೂರು:- ಮೇ 10: ಯೋಜನೆ ಮತ್ತು ಸಾಂಖ್ವಿಕ ಇಲಾಖೆಯ ಸಚಿವ ಡಿ ಸುಧಾಕರ್ ಅವರು ರವಿವಾರ ಬೆಳಗ್ಗಿನ ಜಾವ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಡಿಯಲ್ಲಿರುವ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸುಧಾಕರ್ ಅವರಿಗೆ( 66 ) ವಯಸ್ಸಾಗಿತ್ತು ಒಂದು ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿದ್ದ ಅವರಿಗೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೆಳಗ್ಗೆ 3:15 ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ



