ಬೆಲೆಏರಿಕೆಯು ಜನಸಾಮಾನ್ಯರ ಬದುಕನ್ನು ಅಸ್ತವ್ಯಸ್ತಗೊಳಿಸುತ್ತದೆ.
ಬೆಂಗಳೂರು:-ಮೇ15 ಕೇಂದ್ರ ಸರಕಾರ ಪೆಟ್ರೋಲ್-ಡಿಸೇಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರಕಾರ ಖಂಡಿಸಿ ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕೇಂದ್ರ ಸರಕಾರ ಪೆಟ್ರೋಲ್-ಡಿಸೇಲ್ ದರ ಏರಿಸುವ ನೀರಿಕ್ಷೆ ಇತ್ತು ನೀರಿಕ್ಷೆಯಂತೆಯೇ ಹೆಚ್ಚಿಸಿದ್ದಾರೆ.
ಆದರೆ ಕರ್ನಾಟಕದಲ್ಲಿ ಇತರೆ ರಾಜ್ಯಗಳಿಗಿಂತ ಗಣನೀಯವಾಗಿ ಕಡಿಮೆಯಿರುವ ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಿದ್ದರ ಬಗ್ಗೆ ಬಿಜೆಪಿಯವರು ಟೀಕೆ ಮಾಡಿದ್ದರು ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾದ ನಂತರ ಹಲವು ಬಾರಿ ಪೆಟ್ರೋಲ್-ಡಿಸೇಲ್ ದರಗಳನ್ನು ಹೆಚ್ಚಿಸಿದ್ದಾರೆ ಈ ಬೆಲೆ ಏರಿಕೆ ಜನಸಾಮಾನ್ಯರ ಮೇಲೆ
ವೃತ್ತಿರಿಕ್ತ ಪರಿಣಾಮ ಬೀರಲಿದ್ದು ವಿಶೇಷವಾಗಿ ಕಾರ್ಮಿಕರು ರೈತರು ಬಡವರ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಕೇಂದ್ರ ಸರಕಾರದ ಈ ಬೆಲೆಏರಿಕೆಯ ಕ್ರಮವನ್ನು ರಾಜ್ಯ ಸರಕಾರ ಖಂಡಿಸುವುದಲ್ಲದೇ ಈ ನಿರ್ಣಯವನ್ನು ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸುತ್ತೇವೆ ಎಂದರು



