Author: PrasakthaNews

Kannada news website from coastal Karnataka

ರಾಜ್ಯದ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್ ಎಂ ರೇವಣ್ಣ ಉಪಾಧ್ಯಕ್ಷ ಪುಷ್ಪ ಅಮರನಾಥ್ ಆಗಮನ ಬಿಸಿರೋಡ್:- ಗೃಹಲಕ್ಷ್ಮಿ ಫಲಾನುಭವಿಗಳ ಸ್ವಸಹಾಯ ಸಂಘಗಳ ಉದ್ಘಾಟನಾ ಕಾರ್ಯಕ್ರಮ ಬಿ.ಸಿ .ರೋಡಿನ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಅಕ್ಟೋಬರ್ 28ರಂದು ನಡೆಯಲಿದೆ. ಬಂಟ್ವಾಳ ತಾಲೂಕು ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಶ್ರೀಮತಿ ಜಯಂತಿ ವಿ ಪೂಜಾರಿ ಅವರು ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಈ ಮಾಹಿತಿ ನೀಡಿದರು ಕಾರ್ಯಕ್ರಮದಲ್ಲಿ ರಾಜ್ಯದ ಪಂಚ ಗ್ಯಾರಂಟಿ ಯೋಜನೆ ಪ್ರಾಧಿಕಾರ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶ್ರೀ ಎಚ್ ಎಂ ರೇವಣ್ಣ , ಉಪಾಧ್ಯಕ್ಷರಾದ ಪುಷ್ಪ ಅಮರನಾಥ್ , ಮಾಜಿ ಸಚಿವರಾದ ಬಿ ರಮಾನಾಥ್ ರೈ, ಜಿಲ್ಲಾಧ್ಯಕ್ಷ ಶ್ರೀ ಭರತ್ ಮುಂಡೋಡಿ, ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು ಸುದಿಗೋಷ್ಟಿಯಲ್ಲಿ ಸದಸ್ಯರಾದ ಚಂದ್ರಶೇಖರ ಆಚಾರ್ಯ , ಕೃಷ್ಣಪ್ಪ ಪೂಜಾರಿ ಉಪಸ್ಥಿತರಿದ್ದರು. 527 ಕೋಟಿ ರೂಗಳನ್ನು ಬಂಟ್ವಾಳ ತಾಲೂಕಿನಲ್ಲಿ ಫಲಾನುಭವಿಗಳು ಪಡೆದುಕೊಂಡಿದ್ದಾರೆ.ಎಂದು…

Read More

ದ್ವೇಷ ಭಾಷಣದ ಹಿನ್ನಲೆಯಲ್ಲಿ ನೋಟಿಸ್ ಜಾರಿ ಪುತ್ತೂರು:- ಪುತ್ತೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಅ.30 ರಂದು ಕಲಂ 35 (3) ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಂತೆ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿರುವುದಾಗಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ. ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಪ್ರಭಾಕರ ಭಟ್ ವಿರುದ್ಧ ಈಶ್ವರಿ ಪದ್ಮುಂಜ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿತ್ತು.

Read More

ಸಾಧಕರಿಗೆ ಸನ್ಮಾನ ಕೊಳ್ನಾಡು: ಸಮನ್ವಯ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ ಸಾಲೆತ್ತೂರು, ಕೊಳ್ನಾಡು ಇವರ ಆಶ್ರಯದಲ್ಲಿ ಸ್ಥಳೀಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಕೂಟ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರೂ, ಕೊಳ್ನಾಡು ಗ್ರಾಮದ ಅಭಿವೃದ್ಧಿಯ ಹರಿಕಾರರೂ, ಸಾಲೆತ್ತೂರು ನವಪೇಟೆಯ ನಿರ್ಮಾತೃ ಶ್ರೀ ಕುಳಾಲು ಸುಭಾಷ್ಚಂದ್ರ ಶೆಟ್ಟಿ ಭಾಗವಹಿಸಿ ಪಂದ್ಯಾಕೂಟಕ್ಕೆ ಶುಭಾಶಯ ಕೋರಿದರು. ಮೂರು ಅವಧಿಗಳ ಕಾಲ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದರೂ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ, ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ದಶಕಕ್ಕಿಂತಲೂ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಹಾಗೂ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಪ್ರಮುಖ ಪಾತ್ರವಹಿಸಿ ಪ್ರಸ್ತುತ ಕೆಪಿಸಿಸಿಯ ಪ್ರಧಾನ ಕಾರ್ಯದರ್ಶಿ ಎಂ. ಎಸ್. ಮಹಮ್ಮದ್ ಜನಮನ್ನಣೆ ಗಳಿಸಿರುವ ಹಿನ್ನೆಲೆಯಲ್ಲಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಅಲ್ಲದೆ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ. ರವಿರಾಜ್ ರೈ ಕುಳಾಲು, ಶಿಕ್ಷಣ ಕ್ಷೇತ್ರದಲ್ಲಿ ಸೇವೆ…

Read More

ಸುಪ್ರೀಂಕೋರ್ಟ್ ಮಾರ್ಗದರ್ಶಿ ಸೂತ್ರಗಳಂತೆ ಎಪ್ಐಆರ್ ಮಾಡಬೇಕು ನವೀನ್ ಸೂರಿಂಜೆ ಪುತ್ತೂರು:- ಸಾರ್ವಜನಿಕ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಅವರು ಸಂಪ್ಯ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅ.20 ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಹಿಳೆಯರನ್ನು ಅವಮಾನಿಸಿ ಗರ್ಭಿಣಿ ಮಹಿಳೆಯರನ್ನು ನಿಂದೆನೆ ಮಾಡಿದ್ದಾರೆಂದು ಆರೋಪಿಸಿ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ದೂರು ನೀಡಿದ್ದಾರೆ ಆಚೆ ಮನೆಯಲ್ಲಿ ಒಬ್ಬಳು ಬ್ಯಾರ್ದಿ ಇದ್ದು ಅವಳು 6ನೆಯದ್ದು ಆಗಿ 7ನೇ ಗರ್ಭಿಣಿಯಾಗಿದ್ದಳು ಅವಳಿಗೆ ಯಾರಾದ್ರು ಕೇಳಿದ್ರಾ ನೀನು ನಾಯಿ ಮರಿ ಹಾಕಿದ ಹಾಗೆ ಹಾಕ್ತ ಇದ್ದೀಯಾ ಅಂತ ಕೇಳಿದ್ರಾ ಕೇಳುವ ಧೈರ್ಯವೂ ಇಲ್ಲ ಎರಡನೆಯದಾಗಿ ಅವರು ಹೇಳ್ತಾರೆ ಅದು ಅಲ್ಲಾಹನಿಗೋಸ್ಕರ ನಮ್ಮ ಮಕ್ಕಳು ಅಲ್ಲಾಹನಿಗೋಸ್ಕರ ಅನ್ನುತ್ತಾರೆ ನೀವೇನಾದರೂ ಮಹಾಲಿಂಗೇಶ್ವರನಿಗಾಗಿ ಮಕ್ಕಳು ಮಾಡ್ತೀರಾ ನಮ್ಮ ಜನಸಂಖ್ಯೆ ಜಾಸ್ತಿಯಾಗಬೇಕು ಮಂಗಳೂರು…

Read More

ಗೋಸಾಗಾಟಗಾರ ಮೇಲಿನ ಶೂಟೌಟ್ ಪ್ರಕರಣವನ್ನು ಸರಕಾರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಪುತ್ತೂರು:- ಪುತ್ತೂರಿನ ಈಶ್ವರಮಂಗಲದಲ್ಲಿ ಅಕ್ಟೋಬರ್ 22 ರಂದು ನಡೆದ ಗೋ ಸಾಗಾಟಗಾರನ ಮೇಲಿನ ಶೂಟೌಟ್ ಪ್ರಕರಣದಲ್ಲಿ ಹಲವು ಗೊಂದಲಗಳಿದ್ದು ಈ ಪ್ರಕರಣವನ್ನು ಸರಕಾರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಎಸ್ ಡಿ.ಪಿ.ಐ ಪಕ್ಷ ಒತ್ತಾಯಿಸಿದೆ. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್ ಡಿ.ಪಿ.ಐ ಪಕ್ಷದ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಹಾಸನದ ಸಂತೆಯಿಂದ ಜಾನುವಾರುಗಳನ್ನು ಖರೀದಿಸಿ ಕೇರಳ ಕಡೆಗೆ ಈಚರ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಪೋಲಿಸರು ವಾಹನವನ್ನು ನಿಲ್ಲಿಸಲು ಸೂಚಿಸಿದರೂ ವಾಹನವನ್ನು ನಿಲ್ಲಿಸದೆ ಪೋಲಿಸ್ ವಾಹನಕ್ಕೆ ಡಿಕ್ಕಿ ಹೊಡೆದು ಕೊಲೆಯತ್ನ ನಡೆಸಿದ್ದರು ಎಂದು ಪೋಲಿಸರು ತಮ್ಮ ಹೇಳಿಕೆಯನ್ನು ಈಗಾಗಲೇ ನೀಡಿದ್ದಾರೆ ಆದರೆ ಘಟನಾ ಸ್ಥಳವನ್ನು ಪರಿಶೀಲಿಸಿದ ಎಸ್ ಡಿ.ಪಿ.ಐ ನಿಯೋಗಕ್ಕೆ ಕಂಡ ಮಾಹಿತಿ ಪ್ರಕಾರ ಕಾಲಿಗೆ ಗುಂಡೇಟು ತಾಗಿದಾಗ ಸುರಿದ ರಕ್ತದ ಕಲೆಗಳು ಈಚರ್ ವಾಹನದ ಮುಂಭಾಗದಲ್ಲಿದೆ ಸಾಮಾನ್ಯವಾಗಿ ಪೋಲಿಸರು ಬೆನ್ನಟ್ಟಿದ ಸಂದರ್ಭದಲ್ಲಿ ವಾಹನ ಬಿಟ್ಟು ಹೋಗುವಾಗ…

Read More

ಸಿ.ಎಂ ಪರಿಹಾರ ನಿಧಿಯಿಂದ ನೆರವು ಒದಗಿಸುವೆ ಶಾಸಕ ಅಶೋಕ್ ರೈ ಪುತ್ತೂರು:- ಕಿಡ್ನಿ ವೈಪಲ್ಯದಿಂದ ಬಳಲುತ್ತಿರುವ ಪುಣಚ ಗ್ರಾ.ಪಂ.ಮಾಜಿ ಅಧ್ಯಕ್ಷರೂ ಹಿರಿಯ ಬಿಜೆಪಿ ನಾಯಕರಾದ ರಾಮಕೃಷ್ಣ ಪೂಜಾರಿಯವರು ಶಾಸಕರಾದ ಅಶೋಕ್ ರೈ ಮೂಲಕ ಮುಖ್ಯಮಂತ್ರಿ ಪರಿಹಾರ ನಿಧಿಗೆ ಆಗ್ರಹಿಸಿ ಮನವಿ ಸಲ್ಲಿಸಿದ್ದಾರೆ. ಶನಿವಾರ ಶಾಸಕರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ರಾಮಕೃಷ್ಣ ಪೂಜಾರಿಯವರು ಕಳೆದ ಕೆಲವು ತಿಂಗಳುಗಳಿಂದ ಕಿಡ್ನಿ ವೈಪಲ್ಯದಿಂದ ಬಳಲುತ್ತಿದ್ದು ಚಿಕಿತ್ಸೆಗೆ ಸುಮಾರು 50 ಲಕ್ಷ ರೂ ಖರ್ಚು ತಗಲುತ್ತಿದೆ ಆರ್ಥಿಕ ಸಂಕಷ್ಟದಲ್ಲಿರುವ ನನಗೆ ನನ್ನ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೆರವು ಒದಗಿಸಿಕೊಡುವಂತೆ ಮನವಿ ಮಾಡಿದರು. ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಅಶೋಕ್ ರೈ ಅವರು ಚಿಕಿತ್ಸೆಗೆ ನೆರವು ನೀಡುವುದು ಮಾನವೀಯ ಧರ್ಮ ಇದರಲ್ಲಿ ರಾಜಕೀಯ ಇಲ್ಲ ನಿಮ್ಮ ಮನವಿಯನ್ನು ಮುಖ್ಯಮಂತ್ರಿಗಳ ಬಳಿ ನೀಡಿ ನನ್ನಿಂದ ಸಾಧ್ಯವಾದಷ್ಟು ನೆರವನ್ನು ಪಡೆದುಕೊಂಡು ನಿಮಗೆ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ

Read More

ಅವನತಿಯತ್ತ ಆಮೆಗಳು ಮಂಗಳೂರು:- ಅ.24 ಕರಾವಳಿ ಸವೆತ ಸಮುದ್ರ ಗೋಡೆಗಳ ನಿರ್ಮಾಣ ಮತ್ತು ಬದಲಾಗುತ್ತಿರುವ ಹವಾಮಾನ ಪರಿಸ್ಥಿತಿಗಳು ಕರ್ನಾಟಕದ ಕರಾವಳಿಯ ಸಮುದ್ರ ಆಮೆಗಳ ಜೀವಿತಕ್ಕೆ ಗಂಭೀರ ಅಪಾಯವನ್ನು ಉಂಟುಮಾಡಿವೆ ಎಂದು ಕೇಂದ್ರ ಸಮುದ್ರ ಮೀನುಗಾರಿಕೆ ಸಂಶೋಧನಾ ಸಂಸ್ಥೆ ನಡೆಸಿದ ದೀರ್ಘಕಾಲೀನ ಅಧ್ಯಯನ ವರದಿ ಎಚ್ಚರಿಸಿದೆ. 2013 ರಿಂದ 2023 ರ ವರೆಗೆ ನಡೆದ ದಶಕದ ಸಂಶೋಧನೆ ಪ್ರಕಾರ ಬದಲಾಗುತ್ತಿರುವ ಸಮುದ್ರ ಪರಿಸರ ಮಾನವ ಅತಿಕ್ರಮಣ ಹಾಗೂ ಹವಾಮಾನ ಬದಲಾವಣೆಯ ಪರಿಣಾಮದಿಂದ ಆಮೆಗಳ ಗೂಡುಕಟ್ಟುವ ಸ್ಥಳಗಳು ವೇಗವಾಗಿ ನಾಶವಾಗುತ್ತಿವೆ.ಈ ಅವಧಿಯಲ್ಲಿ ಕರ್ನಾಟಕ ಕರಾವಳಿಯಲ್ಲಿನ ಆಮೇಗಳ ಸಂತಾನೋತ್ಪತ್ತಿ ಪ್ರಮಾಣವು ಗಂಭೀರವಾಗಿ ಕುಸಿದಿರುವುದು ವರದಿಯಿಂದ ಸ್ಪಷ್ಟವಾಗಿದೆ. ಸಿಎಂಎಫ್ ಆರ್ ಐ ಮಂಗಳೂರಿನ ವಿಜ್ಞಾನಿ ಡಾ ಬಿಂದು ಸುಲೋಚನನ್ ಅವರ ನೇತೃತ್ವದಲ್ಲಿ ನಡೆದ ಈ ಸಂಶೋಧನೆ ಕ್ಷೇತ್ರ ಅಧ್ಯಯನಗಳು ಸಮುದ್ರ ಉತ್ಪಾದಕತೆಯ ಮೌಲ್ಯಮಾಪನಗಳು ನೀರಿನ ಗುಣಮಟ್ಟದ ಮೇಲ್ವಿಚಾರಣೆ ಹಡಗು ಸಂಚಾರದ ನಕ್ಷೆ ಹಾಗೂ ಸಾಂಪ್ರದಾಯಿಕ ಪರಿಸರ ಸಮೀಕ್ಷೆಗಳನ್ನು ಒಳಗೊಂಡಿತ್ತು. 2013 ರಿಂದ…

Read More

ನಾಲ್ವರ ಬಂಧನ – ಮಂಗಳೂರು:- ಸುರತ್ಕಲ್ ಪೋಲಿಸ್ ಠಾಣಾ ವ್ಯಾಪ್ತಿಯ ಕಾನದ ಬಳಿಯಲ್ಲಿ ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ದಸ್ತಗಿರಿ ಮಾಡಿ ಪ್ರಕರಣವನ್ನು ಪೋಲಿಸರು ಭೇದಿಸಿದ್ದಾರೆ. ಅ.23 ರಂದು ರಾತ್ರಿ ಸುಮಾರು 10:30 ಗಂಟೆಗೆ ಸುರತ್ಕಲ್ ಕಾನ ಬಳಿಯ ದೀಪಕ್ ಬಾರ್ ಬಳಿಯಲ್ಲಿ ಕ್ಷುಲಕ ಕಾರಣಕ್ಕಾಗಿ ಹಸನ್ ಮುಕ್ಷಿತ್ ಮತ್ತು ನಿಝಾಂ ಎಂಬ ಯುವಕರಿಬ್ಬರಿಗೆ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗುರುರಾಜ್ ಆಚಾರಿ, ಅಲೆಕ್ಸ್ ಸಂತೋಷ್, ನಿತಿನ್ ಮತ್ತು ಸುಶಾಂತ್ ಸೇರಿಕೊಂಡು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ್ದು ಈ ಪೈಕಿ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಾದ ಸುಶಾಂತ್ ಕೆವಿ ಅಲೆಕ್ಸ್ ನಿತಿನ್ ಮತ್ತು ಆರೋಪಿಗಳಿಗೆ ಆಶ್ರಯ ಕೊಟ್ಟ ಅರುಣ್ ಶೆಟ್ಟಿ( 56) ಎಂಬವರನ್ನು ವಶಕ್ಕೆ ಪಡೆದುಕೊಳ್ಳಲಾಗಿರುತ್ತದೆ. ಈ ಪೈಕಿ ಈ ಪ್ರಕರಣದಲ್ಲಿ ಭಾಗಿಯಾದ ಪ್ರಮುಖ ಆರೋಪಿ ಗುರುರಾಜ್ ಆಚಾರಿ ಹಾಗೂ ಆರೋಪಿಗಳಿಗೆ ಅರುಣ್ ಶೆಟ್ಟಿಯೊಂದಿಗೆ ಆಶ್ರಯ ನೀಡಿದ ಅಶೋಕ್ ಎಂಬಾತನು ತಲೆಮರೆಸಿಕೊಂಡಿದ್ದು ಪತ್ತೆ…

Read More

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ ಹುಬ್ಬಳ್ಳಿ :- ರಾಷ್ಟ್ರಪತಿ , ಪ್ರಧಾನಮಂತ್ರಿ ಅವರ ಕುರಿತು ಏಕವಚನದಲ್ಲಿ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕ ಜೀವನದ ಘನತೆ ಕಾಪಡಿಕೊಳ್ಳಬೇಕಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸೋನಿಯಾ ಗಾಂಧಿ ಕುರಿತು ಸಿದ್ದರಾಮಯ್ಯ ಏಕವಚನದಲ್ಲಿ ಮಾತನಾಡಲಿ ನೋಡೋಣ ಆನಂತರ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಇರುವುದಿಲ್ಲ ಎಂದರು ಸಂಸದ ತೇಜಸ್ವಿ ಸೂರ್ಯ ಅವರ ಬಗ್ಗೆಯೂ ಸಿದ್ದರಾಮಯ್ಯ ಕೀಳಾಗಿ ಮಾತನಾಡಿದ್ದಾರೆ ಅದಕ್ಕಿಂತ ಕೆಟ್ಟದಾಗಿ ಟೀಕೆ ಮಾಡಲು ನಮಗೂ ಬರುತ್ತೆ ಆದರೆ ಅಂತಹ ಸಂಸ್ಕೃತಿ ನಮ್ಮದಲ್ಲ ಕೈಲಾಗದವರು ಮೈ ಪರಚಿಕೊಂಡಂತೆ ಕುಣಿಯಲಾಗದವರು ನೆಲ ಡೊಂಕು ಎನ್ನುವ ಪರಿಸ್ಥಿತಿ ಸಿದ್ದರಾಮಯ್ಯ ಅವರದ್ದು ಎಂದು ಹೇಳಿದರು ದೇಶದಲ್ಲಿ ಉದ್ಯೋಗ ಸೃಷ್ಟಿ ಆಗುತ್ತಿದ್ದರು ರಾಜ್ಯಕ್ಕೆ ಸಮರ್ಪಕವಾಗಿ ತೆರಿಗೆ ಪಾಲು ನೀಡಿದರು ಕಾಂಗ್ರೆಸ್ನವರು ಸುಳ್ಳು ಹೇಳುತ್ತಿದ್ದಾರೆ ನಿಜವಾಗಿ ಅವರಿಗೆ ಉದ್ಯೋಗವಿಲ್ಲ ರಾಜಕೀಯವಾಗಿ ನಿರುದ್ಯೋಗಿಗಳು ಎಂದು ಅವರು ಟೀಕಿಸಿದರು …

Read More

ಇಬ್ಬರ ವಿರುದ್ಧ ಪ್ರಕರಣ ದಾಖಲು ಮಂಗಳೂರು:- ಪಟಾಕಿ ಅಂಗಡಿಗಳಿಗೆ ಅಲ್ಲಿದ್ದವರಿಗೆ ಬೆದರಿಕೆ ಹಾಕಿ ಸುಲಿಗೆ ಮಾಡಿರುವ ಆರೋಪದಲ್ಲಿ ಇಬ್ಬರ ವಿರುದ್ಧ ಬಜ್ಪೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸುರತ್ಕಲ್ ಮಂಗಳಪೇಟೆಯ ಫಾಝಿಲ್ ಕೊಲೆ ಆರೋಪಿ ರೌಡಿಶೀಟರ್ ಪ್ರಶಾಂತ್ ಯಾನೆ ಪಚ್ಚು ಮತ್ತು ಅಶ್ವಿತ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳು ಬಜ್ಪೆಯ ಪಟಾಕಿ ಮಾರಾಟ ಮಳಿಗೆಗಳಿಗೆ ತೆರಳಿ ನಾವು ಹಣ ಕೊಡುವುದಿಲ್ಲ ಆದರೆ ಪಟಾಕಿ ಕೊಡಲೇಬೇಕು ಎಂದು ಬೆದರಿಸಿ ಸುಲಿಗೆ ಮಾಡಿದ್ದಾರೆ. ಈ ಘಟನೆ ಅಕ್ಟೋಬರ್ 22ರಂದು ನಡೆದಿದ್ದು ಪಟಾಕಿ ಅಂಗಡಿಗಳ ಮಾಲಕರು ಹೆದರಿ ಪೊಲೀಸ್ ದೂರು ನೀಡಲು ಹಿಂದೇಟು ಹಾಕಿದ್ದರು. ಇತ್ತೀಚಿಗೆ ವಿಚಾರ ತಿಳಿದು ಪೊಲೀಸರು ರಕ್ಷಣೆ ನೀಡುವ ಭರವಸೆ ನೀಡಿದ ಬಳಿಕ ಪಟಾಕಿ ಅಂಗಡಿಯೊಂದರ ಮಾಲಕ ದಾಮೋದರ ಎಂಬವರು ಬಜ್ಪೆ ಪೊಲೀಸ್ ಠಾಣೆಯಲ್ಲಿ ಗುರುವಾರ ರಾತ್ರಿ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೋಲಿಸರು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಶೋಧ…

Read More