Subscribe to Updates
Get the latest creative news from FooBar about art, design and business.
Author: PrasakthaNews
ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸಾಲೆತ್ತೂರು:- ಸಮನ್ವಯ ಆರ್ಟ್ಸ್ ಸ್ಪೋರ್ಟ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರು ಇದರ ಆಶ್ರಯದಲ್ಲಿ ಅ.25-10-2025 ಶನಿವಾರ ಹೊನಲು- ಬೆಳಕಿನ ಸ್ಥಳೀಯ ಮಟ್ಟದ ವಾಲಿಬಾಲ್ ಪಂದ್ಯಾಟ ನಡೆಯಲಿದೆ ಎಂದು ಕಾರ್ಯಕ್ರಮದ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆಯುವ ತಂಡಕ್ಕೆ 10025 ಹಾಗೂ ಬಹುಮಾನ ನೀಡಲಾಗುವುದು. ದ್ವೀತಿಯ ಸ್ಥಾನ ಪಡೆಯುವ ತಂಡಕ್ಕೆ 7025 ಮತ್ತು ಬಹುಮಾನ ನೀಡಿ ಗೌರವಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕಾರ್ಯಕ್ರಮದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಲಿದೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಾದ ಶ್ರೀ ಎಂ.ಎಸ್ ಮಹಮ್ಮದ್, ಡಾ.ರವಿರಾಜ್ ರೈ ಕುಲಾಲು, ಶ್ರೀಮತಿ ಲತಾ ಸಿ ರೈ, ಅಧ್ಯಾಪಕರು ಕಾಡುಮಠ ಶಾಲೆ ಇವರುಗಳಿಗೆ ಗೌರವ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮ ಅ.25 ಶನಿವಾರ ಸಾಯಂಕಾಲ 3:30 ಕ್ಕೆ ಆರಂಭವಾಗಲಿದೆ. ಉದ್ಘಾಟನೆಯನ್ನು ಕೊಳ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಶ್ರಫ್ ಕೆ…
ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ಸ್ಥಾಪಕಾಧ್ಯಕ್ಷರಾದ ಶ್ರೀ ಸಂದೇಶ್ ಶೆಟ್ಟಿಯವರ ಸಂಯೋಜಕತ್ವದಲ್ಲಿ ಕಾರ್ಯಕ್ರಮ ಆಯೋಜನೆ ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ವತಿಯಿಂದ ವಿಟ್ಲ ಪಡ್ನೂರು ಗ್ರಾಮದ ಎಲ್ಲಾ ಅಂಗನವಾಡಿ ಕೇಂದ್ರಗಳ ಬಾಲವಿಕಾಸ ಸಮಿತಿ, ಸ್ತ್ರೀ ಶಕ್ತಿ ಸಂಘ ಹಾಗೂ ಸಂಜೀವಿನಿ ಒಕ್ಕೂಟಗಳನ್ನು ಸೇರಿಸಿಕೊಂಡು ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ ಸಂದೇಶ್ ಶೆಟ್ಟಿಯವರ ಸಂಯೋಜಕತ್ವದಲ್ಲಿ ಗ್ರಾಮೀಣ ಮಟ್ಟದ ಮಹಿಳೆಯರಿಗಾಗಿ ಮಹಿಳಾ ಭಾವೈಕ್ಯತಾ ಕ್ರೀಡಾಕೂಟ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಕಡಂಬು ಇಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಲಯನ್ಸ್ ಜಿಲ್ಲೆ 317d ಜಿಲ್ಲಾ ರಾಜ್ಯಪಾಲರಾದ ಅರವಿಂದ್ ಶೆಣೈ ಕುಡ್ಪಿ ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭವನ್ನು ನುಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ಅಧ್ಯಕ್ಷೆ ಶ್ವೇತಾ ರವಿಕುಮಾರ್ ಅವರ ವಹಿಸಿದ್ದರು. ಮಾಜಿ ಸಚಿವ ಬಿ ರಮಾನಾಥ ರೈ ಅವರು ಆಗಮಿಸಿ ಶುಭ ಹಾರೈಸಿದರು. …
ತೇಜಸ್ವಿಯಾದವ್ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದ ಮಹಾಘಟಬಂಧನ್ ಪಾಟ್ನ:- ಬಿಹಾರದ ವಿಪಕ್ಷ ಮಹಾಘಟಬಂಧನ್ ಮೈತ್ರಿಕೂಟವು ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮಾಡುವ ಬಗ್ಗೆ ಗುರುವಾರ ನಡೆದ ಮಹತ್ವದ ಸಭೆಯಲ್ಲಿ ಮೈತ್ರಿಕೂಟದ ಘಟಕ ಪಕ್ಷಗಳು ತೇಜಸ್ವಿ ಅವರ ನಾಯಕತ್ವವನ್ನು ಅನುಮೋದಿಸಿದ್ದು ಅವರ ಉಮೇದುವಾರಿಕೆಯನ್ನು ಅಧಿಕೃತವಾಗಿ ಘೋಷಿಸಲಾಗಿದೆ ಪಾಟ್ನಾದಲ್ಲಿ ಗುರುವಾರ ನಡೆದ ಬಹು ನಿರೀಕ್ಷಿತ ಮಹಾಘಟಬಂಧನ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ನಾಯಕತ್ವದ ಘೋಷಣೆ ಮಾಡಲಾಗಿದೆ ತೇಜಸ್ವಿಯವರ ನಾಯಕತ್ವದಲ್ಲಿ ಮೈತ್ರಿಕೂಟವು ಚಲೋ ಬಿಹಾರ ಬದಲೇ ಬಿಹಾರ ಎಂಬ ಘೋಷಣೆಯೊಂದಿಗೆ ಪ್ರಚಾರ ಮಾಡಲು ತೀರ್ಮಾನ ಕೈಗೊಂಡಿದೆ ವಿಧಾನ ಸಭೆಯ 243 ಸ್ಥಾನಗಳಲ್ಲಿ ಆರ್ಜೆಡಿ 143 ಮತ್ತು ಕಾಂಗ್ರೆಸ್ 61 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ ಆದರೆ ಎರಡು ಪಕ್ಷಗಳು ಕನಿಷ್ಠ ಐದು ಕ್ಷೇತ್ರಗಳಲ್ಲಿ ಸ್ನೇಹಪರ ಹೋರಾಟವನ್ನೂ ಮಾಡುತ್ತಿರುವುದು ಗೊಂದಲಕ್ಕೆ ಸಾಕ್ಷಿಯಾಗಿದೆ ಜಾತಿ ಲೆಕ್ಕಾಚಾರವನ್ನು ಮಾಡಿ ಹೊಸ ರಣತಂತ್ರ ಮಾಡಿದ ವಿಪಕ್ಷ ಮೈತ್ರಿಕೂಟ ಮಹಾಘಟಬಂಧನ್ ಉಪಮುಖ್ಯಮಂತ್ರಿ ಅಭ್ಯರ್ಥಿಯಾಗಿ ವಿಕಾಸ ಶೀಲಾ ಇನ್ಸಾನ್ ಪಕ್ಷದ ವಿಐಪಿ ಮುಖ್ಯಸ್ಥ…
ಸುಳ್ಳು ಪ್ರಚಾರ ಮಾಡುವವರ ವಿರುದ್ಧ ಸೂಕ್ತ ಕ್ರಮ- ಪುತ್ತೂರು;: ಅ.22 ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದ ಜಾನುವಾರುಗಳ ಸಾಗಾಣಿಕೆ ಪ್ರಕರಣದ ವೇಳೆ ಒಟ್ಟು 12 ಜಾನುವಾರುಗಳಲ್ಲಿ ಒಂದು ಜಾನುವಾರು ಸತ್ತಿರುವುದಾಗಿ ಪೋಲಿಸರು ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಈ ವಿಷಯವನ್ನು ಗಮನಿಸಿ ಪೋಲಿಸರಿಗೆ ಮಾಹಿತಿ ನೀಡಿದ್ದು ಎತ್ತುಗಳನ್ನು ವಾಹನದಿಂದ ಇಳಿಸಲು ಅನುಮತಿ ಕೋರಿದ್ದಾರೆ ಜಾನುವಾರುಗಳ ಇನ್ನಷ್ಟು ಸಾವು ತಪ್ಪಿಸಲು ನಾವು ಸ್ಥಳೀಯರ ಸಹಕಾರ ಪಡೆದಿದ್ದೇವೆ ಎಂದು ಪೋಲಿಸರು ತಿಳಿಸಿದ್ದಾರೆ ಅರುಣ್ ಕುಮಾರ್ ಪುತ್ತಿಲ ಅವರ ಕೈಯಲ್ಲಿದ್ದ ಕತ್ತಿ ಸಮೀಪದ ಮನೆಯೂಂದರಿಂದ ತರಲಾಗಿದ್ದು ಅದು ಘಟನೆ ನಡೆದ ಸ್ಣಳದ ಎದುರಿನ ಮುಸ್ಲಿಂ ಕುಟುಂಬದ ಮನೆಯಿಂದ ನೀಡಲಾಗಿದ್ದು ಎತ್ತುಗಳನ್ನು ಬಿಗಿಯಾಗಿ ಕಟ್ಟಿ ಹಾಕಿದ್ದ ಹಗ್ಗಗಳನ್ನು ಕತ್ತರಿಸಿ ರಕ್ಷಿಸಲು ಅದು ಬಳಸಲ್ಪಟ್ಟಿದೆ. ಪೋಲಿಸರ ಪ್ರಕಾರ ಇಂತಹ ಸಂದರ್ಭಗಳಲ್ಲಿ ಸ್ಥಳೀಯರು ಸಹಾಯ ನೀಡುವುದು ಸಾಮಾನ್ಯವಾಗಿದೆ. ಉದಾಹರಣೆಗೆ ರೋಗಿಗಳನ್ನು ಸ್ಥಳಾಂತರಿಸುವುದು ಶವಗಳನ್ನು ಸಾಗಿಸುವುದು ವಾಹನಗಳನ್ನು ತೆರವುಗೊಳಿಸುವುದು…
ಶ್ರೀ ಶೈಲ ಗ್ಯಾಸ್ ಎಜೆನ್ಸಿ ಮಾಲೀಕರಾದ ಚರಿಷ್ಮಾ ರೈ ಇವರಿಂದ ವಿಜೇತರಿಗೆ ಪ್ರಶಸ್ತಿ ಪ್ರಧಾನ ವಿಟ್ಲ:- ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ವತಿಯಿಂದ ವಿಟ್ಲಪಡ್ನೂರು ಗ್ರಾಮದ ಎಲ್ಲಾ ಅಂಗನವಾಡಿ ಕೇಂದ್ರಗಳ ಬಾಲವಿಕಾಶ ಸಮಿತಿ ಸ್ತ್ರೀಶಕ್ತಿ ಸಂಘ ಹಾಗೂ ಸಂಜೀವಿನಿ ಒಕ್ಕೂಟಗಳನ್ನು ಸೇರಿಸಿಕೊಂಡು ಗ್ರಾಮೀಣ ಮಟ್ಟದ ಮಹಿಳೆಯರಿಗಾಗಿ ಮಹಿಳಾ ಭಾವ್ಯೆಕ್ಯತಾ ಕ್ರೀಡಾಕೂಟ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಕಡಂಬು ಇಲ್ಲಿ ನಡೆಯಿತು. ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾಜಿ ಸಚಿವರಾದ ಬಿ ರಮಾನಾಥ್ ರೈ ಅವರ ಸುಪುತ್ರಿ ಶ್ರೀ ಶೈಲ ಗ್ಯಾಸ್ ಎಜೆನ್ಸಿ ಮಾಲೀಕರಾದ ಕು.ಚರಿಷ್ಮಾ ರೈ ಅವರು ಆಗಮಿಸಿ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಿದರು ಈ ಸಂದರ್ಭದಲ್ಲಿ ವಿವಿಧ ಗಣ್ಯರು ಉಪಸ್ಥಿತರಿದ್ದರು ಕಾರ್ಯಕ್ರಮದ ಸಂಯೋಜಕರು ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ಸ್ಥಾಪಕಾಧ್ಯಕ್ಷರು ಆಗಿರುವ ಶ್ರೀ ಸಂದೇಶ್ ಶೆಟ್ಟಿ ಬಿಕ್ನಾಜೆ ಕಾರ್ಯಕ್ರಮ ಸಂಘಟಿಸಿದರು.
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಜನಪ್ರಿಯತೆ ಅರಗಿಸಿಕೊಳ್ಳಲು ಸಾಧ್ಯವಾಗದೇ ಸುಳ್ಳು ಹೇಳಿಕೆ ಬೆಂಗಳೂರು:- ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ತಪ್ಪು ನಿರ್ಧಾರಗಳಿಂದ ಆರ್ಥಿಕ ಸ್ಥಿತಿ ಹಳ್ಳ ಹಿಡಿಸಿರುವ ಸಿಎಂ ಸಿದ್ದರಾಮಯ್ಯನವರು ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಜನಪ್ರಿಯತೆ ಅರಗಿಸಿಕೊಳ್ಳಲು ಸಾಧ್ಯವಾಗದೆ ಸುಳ್ಳು ಹೇಳಿಕೆ ನೀಡುವ ಮೂಲಕ ಹತಾಶೆ ವ್ಯಕ್ತಪಡಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ| ಬ್ರಿಜೇಶ್ ಚೌಟ ಹೇಳಿದ್ದಾರೆ. ಪುತ್ತೂರಿಗೆ ಅ.20 ರಂದು ಭೇಟಿ ನೀಡಿದ್ದ ಸಿದ್ದರಾಮಯ್ಯನವರು ಕರ್ನಾಟಕ ಸೇರಿ ಇಡೀ ದೇಶದ ಜನರಿಗೆ ಅನುಕೂಲ ತಂದಿರುವ ಜಿಎಸ್ ಟಿ ತೆರಿಗೆ ಇಳಿಕೆ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಚೌಟ ಅವರು ತೀವ್ರವಾಗಿ ಖಂಡಿಸಿದ್ದಾರೆ. ಸಿದ್ದರಾಮಯ್ಯನವರು ಈ ಹತಾಶೆಯ ಹೇಳಿಕೆ ಕೈಲಾಗದವನು ಮೈ ಪರಚಿಕೊಂಡ ಎನ್ನುವಂತಿದೆ. ಅವರ 15,000 ಕೋಟಿ ರೂ ಕರ್ನಾಟಕಕ್ಕೆ ನಷ್ಟ ಎಂಬ ಹೇಳಿಕೆಗೆ ಯಾವುದೇ ಆಧಾರವಿಲ್ಲ ತಮ್ಮ ಸರ್ಕಾರದ ಆರ್ಥಿಕ ಆಧೋಗತಿಯನ್ನು ಮುಚ್ಚಿ ಹಾಕುವುದಕ್ಕೆ ಪದೇಪದೇ ಮೋದಿ ಸರ್ಕಾರದ ಮೇಲೆ ಗೂಬೆಕೂರಿಸುವ ಅತ್ಯಂತ ಕೀಳು…
ಶಿಕ್ಷಣ ಸಂಸ್ಕ್ರತಿ ಜತೆಗಿರಲಿ ವಜ್ರದೇಹಿ ಶ್ರೀ ಪುತ್ತೂರು:- ಅ.21 ಮನುಷ್ಯನ ಜೀವನದಲ್ಲಿ ಸಂಸ್ಕ್ರತಿ ಎಂಬುದು ಅವಿಭಾಜ್ಯ ಅಂಗ ಸಂಸ್ಕ್ರತಿ ಸಂಸಾರದ ಜೊತೆಗೆ ಶಿಕ್ಷಣ ಸಾಗಬೇಕು ವಿದ್ಯೆಯಿಂದ ವಿನಯ ವಿನಯಂದಿನ ಭಾತೃತ್ವ ಹಾಗೂ ಬಾತೃತ್ವದಿಂದ ಧನ ಗಳಿಸಬಹುದು ಆದರೆ ಸುಖವೂ ಧನ ಅಥವಾ ಸಂಪತ್ತನ್ನು ಹೇಗೆ ಬಳಸುತ್ತೇವೆ ಎಂಬುವುದರಿಂದ ಪ್ರಾಪ್ತವಾಗುತ್ತದೆ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು. ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಾರದಾ ಪೂಜೆ ಮತ್ತು ಆಯುಧ ಪೂಜೆ ಕಾರ್ಯಕ್ರಮದಲ್ಲಿ ಅವರು ಆಶರ್ವಚನ ನೀಡಿದರು ಅಧ್ಯಕ್ಷತೆ ವಹಿಸಿದ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಜಯಂತ್ ನಡುಬೈಲ್ ಮಾತನಾಡಿ ಎಲ್ಲರಿಗೂ ಉದ್ಯೋಗಾವಕಾಶ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಪದವಿ ಶಿಕ್ಷಣದೂಂದಿಗೆ ವೃತ್ತಿಪರ ಕೋರ್ಸ್ ಆರಂಭಿಸಿದ್ದೇವೆ ನಮ್ಮ ಸಂಸ್ಥೆಯಲ್ಲಿ ಪ್ರತಿಯೊಂದು ಹಬ್ಬ ಹರಿದಿನಗಳನ್ನು ಆಚರಿಸುತ್ತಿರುವುದು ಸಂಪ್ರದಾಯವಾಗಿದೆ ಎಂದರು ಪ್ರಾಂಶುಪಾಲ ಸಂಪತ್ ಕೆ ಪಕ್ಕಳ ಮಾತನಾಡಿದರು ಕಾಲೇಜಿನ ಆಡಳಿತ ನಿರ್ದೇಶಕಿ ಕಲಾವತಿ…
ಆರೋಪಿ ಅಬ್ದುಲ್ಲ ಮೂಲತ ಕೇರಳದ ಕಾಸರಗೋಡಿನವನು- ಪುತ್ತೂರು;- ಆರೋಪಿ ಅಬ್ದುಲ್ಲಾ( 40) ವರ್ಷ ಐಚರ್ ವಾಹನದಲ್ಲಿ 10 ಜಾನುವಾರುಗಳನ್ನು ಸಾಗಿಸುತ್ತಿದ್ದನು ಆತನೆ ಚಾಲಕನಾಗಿದ್ದು ಇನ್ನೊಬ್ಬ ಆರೋಪಿಯು ವಾಹನದಲ್ಲಿದ್ದ ವಾಹನವನ್ನು ನಿಲ್ಲಿಸಲು ಪೋಲಿಸರು ಸೂಚಿಸಿದಾಗ ಆತನು ನಿಲ್ಲಿಸದೆ ಇದ್ದು ಪೋಲಿಸರು ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದ್ದರು ಆರೋಪಿಯು ಪೋಲಿಸ್ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿರುತ್ತಾನೆ. ಆಗ ಪಿಎಸ್ಐ ರವರು ಎರಡು ಸುತ್ತು ಗುಂಡುಗಳನ್ನು ಫೈಯರ್ ಮಾಡಿದ್ದಾರೆ. ಒಂದನ್ನು ಐಚರ್ ವಾಹನದ ಮೇಲೆ ಹಾಗೂ ಮತ್ತೊಂದು ಆರೋಪಿಯ ಕಾಲಿಗೆ ಬಿದ್ದಿರುತ್ತದೆ. ಘಟನೆಯ ಸಮಯದಲ್ಲಿ ಇನ್ನೊಬ್ಬ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ. ಆರೋಪಿ ಅಬ್ದುಲ್ಲ ಮೂಲತ ಕೇರಳದ ಕಾಸರಗೋಡಿನವನು ಆರೋಪಿಯನ್ನು ಚಿಕಿತ್ಸೆ ಬಗ್ಗೆ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿದೆ. ಈತನ ಮೇಲೆ ಈ ಹಿಂದೆ ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ 33/2025 ಗೋ ಹತ್ಯೆ ಕಾಯ್ದೆಯಡಿಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಎಂದು ಪೋಲಿಸರು ತಿಳಿಸಿದ್ದಾರೆ.
ಫ್ರೆಂಡ್ಸ್ ವಿಟ್ಲ ತಂಡದ ಮುರಳೀಧರ ಮತ್ತು ತಂಡದಿಂದ ಕಾರ್ಯಾಚರಣೆ ವಿಟ್ಲ:- ಕಾಶಿಮಠ ನಿವಾಸಿಯೊರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿಟ್ಲ ಕಾಶಿಮಠ ನಿವಾಸಿ ರಾಮಕ್ಕ (79) ಆತ್ಮಹತ್ಯೆ ಮಾಡಿಕೊಂಡವರು ಫ್ರೆಂಡ್ಸ್ ವಿಟ್ಲ ತಂಡದ ಮುರಳೀಧರ ಮತ್ತು ತಂಡ ಮೃತ ದೇಹವನ್ನು ಮೇಲಕ್ಕೆ ಎತ್ತಿದರು ಸ್ಥಳಕ್ಕೆ ವಿಟ್ಲ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಮೃತರು ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ
ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಮಾಜಿ ಶಾಸಕ ಸಂಜೀವ ಮಠಂದೂರು ಪುತ್ತೂರು:- ಅ.20 ರಂದು ಅಶೋಕ ಜನಮನ ಕಾರ್ಯಕ್ರಮದಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದವರ ಪೈಕಿ ಇಬ್ಬರು ಮಹಿಳೆಯರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಡಬ ಕೋಟೆಗುಡ್ಡೆಯ ನಿವಾಸಿ ಬಾಲಕೃಷ್ಣ ಅವರ ಪತ್ನಿ ಲೀಲಾವತಿ( 53) ಮೊಮ್ಮಕ್ಕಳೊಂದಿಗೆ ಬಂದಿದ್ದ ಬೆಳ್ಳಾರೆ ನಿವಾಸಿ ಭೀಪಾತಿಮಾ (60) ಅವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆಸ್ಪತ್ರೆಗೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ಮಾಡಿ ಆಸ್ಪತ್ರೆಯಲ್ಲಿ ದಾಖಲಾದ ಮಹಿಳೆಯರಿಬ್ಬರ ಆರೋಗ್ಯ ವಿಚಾರಿಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್ ನಗರಸಭೆಯ ಸದಸ್ಯ ದೀಕ್ಷಾ ಪೈ ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು


