Subscribe to Updates
Get the latest creative news from FooBar about art, design and business.
Author: PrasakthaNews
ಯಾರು ಬೆದರಿಕೆ ಕರೆ ಮಾಡಿದ್ದಾರೆ ಎಲ್ಲಿಂದ ಬಂದಿದೆ ಎಂಬುದನ್ನು ತನಿಖೆ ಮಾಡುತ್ತೇವೆ. ಬೆಂಗಳೂರು:- ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಬೆದರಿಕೆ ಕರೆಗಳು ಬಂದಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ.ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಾರು ಬೆದರಿಕೆ ಕರೆ ಮಾಡಿದ್ದಾರೆ ಎಲ್ಲಿಂದ ಬಂದಿದೆ ಎಂಬುದನ್ನು ತನಿಖೆ ಮಾಡುತ್ತೇವೆ ಆರೆಸ್ಸೆಸ್ ವಿಚಾರದಲ್ಲಿ ಸಚಿವರು ತಮ್ಮ ಅಭಿಪ್ರಾಯವನ್ನು ಹೇಳಿರಬಹುದು ಆ ಬಗ್ಗೆ ಸರಕಾರ ತೀರ್ಮಾನ ಮಾಡುತ್ತದೆ ಅದಕ್ಕೆ ಅವರಿಗೆ ಬೆದರಿಕೆ ಹಾಕುವುದು ಸರಿಯಲ್ಲ ಎಲ್ಲವನ್ನೂ ಪರಿಶೀಲನೆ ಮಾಡುವುದಕ್ಕೆ ಸೂಚಿಸಿದ್ದೇನೆ ಎಂದು ಹೇಳಿದರು ಸರಕಾರ ಬಂದು ಎರಡೂವರೆ ವರ್ಷ ಕಳೆದಿದೆ ಎಲ್ಲರೂ ಚೆನ್ನಾಗಿ ಕೆಲಸ ಮಾಡಬೇಕು ಎಂದು ಮಾತನಾಡಿದ್ದೇವೆ ರಾಜಕೀಯ ವಿಚಾರಗಳನ್ನು ಚರ್ಚೆ ಮಾಡಿಲ್ಲ ಎಂದರು ಯಾದಗಿರಿ ಎಎಸ್ಐ ಕಿಡ್ನಾಪ್ ಮಾಡಿ ಹಲ್ಲೆ ಮಾಡಿದ್ದಾರೆಂಬ ಮಾಜಿ ಸಚಿವ ರಾಜುಗೌಡ ಆರೋಪದ ಕುರಿತು ಪ್ರತಿಕ್ರಿಯಿಸಿ ಈ ಬಗ್ಗೆ ವರದಿ ನೀಡುವಂತೆ ಕಾನೂನು ಸುವ್ಯವಸ್ಥೆ…
ಸ್ಥಳಕ್ಕೆ ಬಂಟ್ವಾಳ ಕಂದಾಯ ಅಧಿಕಾರಿಗಳ ಭೇಟಿ ಬಂಟ್ವಾಳ:- ಮನೆಯೊಂದರ ಗೋಡೆಯ ಮೇಲೆ ಬಂಡೆಕಲ್ಲು ಬಿದ್ದು ಹಾನಿಯಾದ ಘಟನೆ ಅ.12ರಂದು ಆದಿತ್ಯವಾರ ರಾತ್ರಿ ವೇಳೆ ನಡೆದಿದೆ. ಆದಿತ್ಯವಾರ ರಾತ್ರಿ ಸುರಿದ ಮಿಂಚು ಸಿಡಿಲು ಮಳೆಗೆ ಅಮ್ಟಾಡಿ ಗ್ರಾಮದ ಪಡಾಮಕಿಲಮಾರ್ ಎಂಬಲ್ಲಿ ರವೀಂದ್ರ ಎಂಬವರ ವಾಸ್ಥವ್ಯದ ಮನೆಯ ಹಿಂಬದಿಯಲ್ಲಿನ ಗುಡ್ಡದಿಂದ ಬಂಡೆಕಲ್ಲು ಒಡೆದು ಉರುಳಿ ಬಿದ್ದಿದೆ. ಮಣ್ಣಿನ ಗೋಡೆಯ ಮನೆಯಾಗಿರುವುದರಿಂದ ಗೋಡೆಗೆ ಹಾನಿಯಾಗಿದೆ. ಸ್ಥಳಕ್ಕೆ ಬಂಟ್ವಾಳ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಹರ್ಯಾಣ ಸರ್ಕಾರದ ವಿರುದ್ದ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕಿಡಿ ಚಂಡೀಗಢ :- ಹರ್ಯಾಣದ ದಲಿತ ಪೋಲಿಸ್ ಅಧಿಕಾರಿ ವೈ ಪೂರನ್ ಕುಮಾರ್ ಸಾವಿಗೆ ಸಂಬಂಧಿಸಿ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಮತ್ತು ಹರ್ಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿಯನ್ನು ಒತ್ತಾಯಿಸಿದ್ದಾರೆ. ಐಪಿಎಸ್ ಅಧಿಕಾರಿ ಪೂರನ್ ಕುಮಾರ್ ಕುಟುಂಬವನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಘಟನೆಯು ಎಲ್ಲಾ ದಲಿತ ಕುಟುಂಬಗಳನ್ನು ಭಾದಿಸುತ್ತದೆ ಎಂದು ಹೇಳಿದರು. ಪೂರನ್ ರ ಮನೋಸ್ಥೈರ್ಯವನ್ನು ನಾಶಪಡಿಸುವ ಮತ್ತು ಅವರ ವೃತ್ತಿ ಜೀವನಕ್ಕೆ ಹಾನಿ ಮಾಡುವ ಉದ್ದೇಶದಿಂದ ಅವರ ವಿರುದ್ಧ ವ್ಯವಸ್ಥಿತ ತಾರತಮ್ಯ ಮಾಡಲಾಗಿತ್ತು ಎಂದು ರಾಹುಲ್ ಗಾಂಧಿ ಆರೋಪಿಸಿದರು. ಅವರು ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಚಂಡೀಗಢ ಸೆಕ್ಟರ್ 24ರಲ್ಲಿರುವ ಪೂರನ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.…
ಠಾಣೆ ಎದುರು ದಲಿತ ಸಮುದಾಯದವರಿಂದ ಪ್ರತಿಭಟನೆ ಕೊಪ್ಪಳ:- ಸಮಸ್ಯೆ ಹೇಳಲು ಠಾಣೆಗೆ ಬಂದ ದಲಿತ ಸಮುದಾಯದ ಯುವಕನ ಮೇಲೆ ಕುಕನೂರು ಪಿಎಸ್ ಐ ಗುರುರಾಜ್ ಅವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು ಹಲ್ಲೆ ನಡೆಸಿದ ಪಿಎಸ್ಐ ಅವರನ್ನು ಅಮಾನತು ಮಾಡಲು ಆಗ್ರಹಿಸಿ ಕುಕನೂರು ಪೋಲಿಸ್ ಠಾಣೆಯ ಎದುರು ದಲಿತ ಸಮುದಾಯದವರು ಜಮಾಹಿಸಿ ಪ್ರತಿಭಟನೆ ನಡೆಸಿದ್ದಾರೆ. ಗಾಳೆಪ್ಪ ಹಿರೇಮನಿ ಎಂಬವರು ತಮ್ಮ ಸಂಬಂಧಿಕರ ಸಮಸ್ಯೆಯನ್ನು ಹೇಳಿ ನ್ಯಾಯ ಕೊಡಿಸಿ ಎಂದು ಕೇಳಿದ್ದಕ್ಕೆ ಪಿಎಸ್ಐ ಅವರು ಕೊರಳ ಪಟ್ಟಿ ಹಿಡಿದು ನೀವು ಮಾದಿಗರು ಐದು ನೂರು ರೂಪಾಯಿಗೆ ಚಿಲ್ಲರೆ ಕೆಲಸ ಮಾಡುತ್ತೀರಿ ನಿಮ್ಮಿಂದ ನಾನು ಕೆಲಸ ಕಲಿಯುವ ಅಗತ್ಯ ಇಲ್ಲ ಎಂದು ಅವರು ಆರೋಪಿಸಿದ್ದಾರೆ. ನನಗೆ ಮನ ಬಂದಂತೆ ಹೊಡೆದಿದ್ದಾರೆ ಇದರಿಂದ ನನ್ನ ತಲೆ ಮತ್ತು ಕೈಗೆ ಗಾಯಗಳಾಗಿವೆ ನನಗೆ ನ್ಯಾಯಬೇಕೆಂದು ಗಾಳೆಪ್ಪ ಅವರು ಆಗ್ರಹಿಸಿದ್ದಾರೆ
ಬಿಹಾರದಲ್ಲಿ ರಾಹುಲ್ ಗಾಂಧಿ, ತೇಜಸ್ವಿಯಾದವ್ ನಿರ್ಣಾಯಕ ಪಾತ್ರ ಪಾಟ್ನ:- ಹಲವು ನಾಟಕೀಯ ಬೆಳವಣಿಗೆಗಳ ಬಳಿಕ ಬಿಹಾರ ವಿಧಾನ ಸಭಾ ಚುನಾವಣೆಗೆ ವಿರೋಧ ಪಕ್ಷಗಳ ಮಹಾಮೈತ್ರಿಕೂಟದ ಪಕ್ಷಗಳು ಸೀಟು ಹಂಚಿಕೆ ಬಗ್ಗೆ ಅಂತಿಮ ಒಪ್ಪಂದಕ್ಕೆ ಬಂದಿದ್ದು 144 ಸ್ಥಾನಗಳಿಗೆ ಪಟ್ಟುಹಿಡಿದಿದ್ದ ಆರ್ಜೆಡಿ ಅಂತಿಮವಾಗಿ 135 ಸ್ಥಾನಗಳಿಗೆ ಒಪ್ಪಿಕೊಂಡಿದೆ. 70 ಸ್ಥಾನಗಳ ಮೇಲೆ ಕಣ್ಣಿಟ್ಟಿದ್ದ ಕಾಂಗ್ರೆಸ್ 61 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಉನ್ನತಮೂಲಗಳಿಂದ ತಿಳಿದು ಬಂದಿದೆ. ಒಟ್ಟು 243 ಸದಸ್ಯಬಲದ ಬಿಹಾರ ವಿಧಾನಸಭೆಯಲ್ಲಿ ಎಡಪಂಥೀಯ ಪಕ್ಷಗಳು 29-31 ಸ್ಥಾನಗಳನ್ನು ಪಡೆಯಲಿದ್ದು ಮತ್ತು ಮುಕೇಶ್ ಸಾಹ್ನಿಯವರ ವಿಕಾಸಶೀಲ ಇಸಾನ್ ಪಕ್ಷ 16 ಸ್ಥಾನಗಳಲ್ಲಿ ಹುರಿಯಾಳುಗಳನ್ನು ಕಣಕ್ಕೆ ಇಳಿಸಲಿದೆ. ಜತೆಗೆ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಲು ಕೂಡ ಪಕ್ಷಗಳು ಇಪ್ಪಿಕೊಂಡಿವೆ. ಆದರೆ ಯಾವುದೇ ಉಪಮುಖ್ಯಮಂತ್ರಿ ಹೆಸರಿಸುತ್ತಾರೆಯೇ ಇನ್ನೂ ಸ್ಪಷ್ಟವಾಗಿಲ್ಲ. ಖಚಿತವಾಗಿ ಗೆಲುವಿನ ಸಾಧ್ಯತೆ ಇದೆ ಎನ್ನಲಾದ 70 ಸ್ಥಾನಗಳಿಗೆ ಕಾಂಗ್ರೆಸ್ ಪಟ್ಟು ಹಿಡಿದಿತ್ತು ಈ ಹಿನ್ನಲೆಯಲ್ಲಿ ತೇಜಸ್ವಿಯಾದವ್ ಅವರನ್ನು ಸಿಎಂ…
ಆರೆಸ್ಸೆಸ್ ನಿಷೇಧಿಸುವ ಬಗ್ಗೆ ಸಿಎಂ ಗೆ ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ಬೆನ್ನಲ್ಲೆ ತವರು ಜಿಲ್ಲೆ ಕಲಬುರಗಿಯಲ್ಲಿ ಆರೆಸ್ಸೆಸ್ ಬೈಠಕ್ ಬೆಂಗಳೂರು:- ಆರೆಸ್ಸೆಸ್ ಶಾಖೆಗಳ ಮೇಲೆ ನಿರ್ಬಂಧ ವಿಧಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ರಾಜ್ಯಾದ್ಯಂತ ಸುದ್ದಿಯಾಗುತ್ತಿದೆ ಈ ಬೆನ್ನಲ್ಲೇ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲಿ ಅದರಲ್ಲೂ ಕಾಂಗ್ರೆಸ್ ಶಾಸಕರ ಶಾಲೆಯಲ್ಲೇ ಆರೆಸ್ಸೆಸ್ ಶಾಖೆ ನಡೆಸಿರುವ ಸುದ್ದಿ ಎಲ್ಲಡೆ ವೈರಲ್ ಆಗುತ್ತಿದೆ. ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕರ್ನಾಟಕದಲ್ಲಿ ಆರೆಸ್ಸೆಸ್ ನಿಷೇಧಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಶಾಸಕ ಎಂವೈ ಪಾಟೀಲ್ ಒಡೆತನದ ಮಹಾಂತ್ವೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಅನುದಾನಿತ ಶಾಲೆಯಲ್ಲಿ ಆರೆಸ್ಸೆಸ್ ಬೈಠಕ್ ನಡೆದಿದೆ. ಅಷ್ಟೇ ಅಲ್ಲದೇ ಶಾಲೆಯ ಆವರಣದಲ್ಲಿ ಆರೆಸ್ಸೆಸ್ ಪಥಸಂಚಲನ ಬೌದ್ದಿಕ ಕಾರ್ಯಕ್ರಮ ಕೂಡ ನಡೆದಿದೆ
ಚಿತ್ರರಂಗವನ್ನು ಬಿಟ್ಟು ಮಂತ್ರಿಯಾಗಬೇಕು ಎಂದು ನಾನು ಯಾವತ್ತೂ ಭಾವಿಸಿರಲಿಲ್ಲ ಕಣ್ಣೂರು:- ಕೇಂದ್ರ ಸಚಿವ ಸುರೇಶ್ ಗೋಪಿ ಅವರು ತಮ್ಮ ಸ್ಥಾನವನ್ನು ತೂರೆಯುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ನೂತನವಾಗಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಸದಸ್ಯ ಸಿ ಸದಾನಂದನ್ ಮಾಸ್ಟರ್ ಅವರನ್ನು ತಮ್ಮ ಸ್ಥಾನಕ್ಕೆ ನೇಮಕ ಮಾಡಬೇಕೆಂಬ ಶಿಪಾರಸ್ಸುನ್ನು ಅವರು ಭಾನುವಾರ ಮುಂದಿಟ್ಟರು. ಸುರೇಶ್ ಗೋಪಿ ಅವರು ಪೆಟ್ರೋಲಿಯಂ ಮತ್ತು ಪ್ರವಾಸೋದ್ಯಮ ಖಾತೆಯ ರಾಜ್ಯ ಖಾತೆ ಸಚಿವರಾಗಿದ್ದರೆ. ಇಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ನನ್ನನ್ನು ತೆಗೆದ ಮೇಲೆ ಸದಾನಂದನ್ ಅವರನ್ನು ಸಚಿವರನ್ನಾಗಿ ನೇಮಕ ಮಾಡಬೇಕು ಇದು ಕೇರಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಯವಾಗಲಿದೆ ಎಂದು ನಾನು ನಂಬುತ್ತೇನೆ ಎಂದರು ಸಭೆಯಲ್ಲಿ ಸದಾನಂದನ್ ಅವರು ಭಾಗಿಯಾಗಿದ್ದರು. ಚಿತ್ರರಂಗವನ್ನು ಬಿಟ್ಟು ಮಂತ್ರಿಯಾಗಬೇಕು ಎಂದು ನಾನು ಯಾವತ್ತೂ ಭಾವಿಸಿರಲಿಲ್ಲ ಸದಾನಂದನ್ ಅವರ ಸಂಸದ ಕಚೇರಿಯು ಶೀಘ್ರವೇ ಸಚಿವರ ಕಚೇರಿಯಾಗಿ ಬದಲಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದೂ ಗೋಪಿ ಅವರು ಹೇಳಿದರು.
ಆರೋಪಿಗಳಾದ ಬಶೀರ್, ಸಫಿಯಾ ಇತರ ಆರೋಪಿಗಳ ವಿರುದ್ಧ ದೂರು ದಾಖಲು ವಿಟ್ಲ:- ಹುಡುಗಿ ನೋಡುವ ವಿಚಾರದಲ್ಲಿ ಪೋಟೋ ವಿಡಿಯೋ ತೆಗೆದು ಬೆದರಿಕೆ ಒಡ್ಡಿರುವ ಬಗ್ಗೆ ವಿಟ್ಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇರಳ ನಿವಾಸಿ ಮಹಮ್ಮದ್ ಅಶ್ರಫ್ ತಾವರಕಡನ್( 53) ಎಂಬವರು ಸೌದಿಯಲ್ಲಿ ಉದ್ಯೋಗದಲ್ಲಿದ್ದಾರೆ. 2024 ರ ಸೆಪ್ಟೆಂಬರ್ ನಲ್ಲಿ ಮದುವೆಯ ಸಲುವಾಗಿ ಮಂಗಳೂರಿಗೆ ಬಂದಿದ್ದು ಅಲ್ಲಿಗೆ ಕರೆಸಿದ ಬಶೀರ್ , ಸಫಿಯಾ ಮತ್ತು ಇತರ ಆರೋಪಿತರು ಅವರನ್ನು ಹೆಣ್ಣು ನೋಡುವ ನೆಪದಲ್ಲಿ ಪೋಟೋ ವಿಡಿಯೋ ತೆಗೆದು ನಂತರ ಅವುಗಳನ್ನು ಲೀಕ್ ಮಾಡುವುದಾಗಿ ಬೆದರಿಸಿ 44.80 ಲಕ್ಷ ರೂಪಾಯಿ ಹಣ ವಂಚಿಸಿದ್ದಾರೆ. ಎಂದು ಪಿರಿಯಾದಿದಾರರು ನೀಡಿದ ದೂರಿನಂತೆ ವಿಟ್ಲ ಪೋಲಿಸ್ ಠಾಣೆಯಲ್ಲಿ ಅ.ಕ್ರ: 145/2025 ಕಲಂ: 318(4) 308(2) 115(2) 351(2), r/w 3(5) BNS -2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಜಿಲ್ಲೆಯಲ್ಲಿ ನಡೆಯುತ್ತಿರುವ ಅಪರಾಧವನ್ನು ಮಟ್ಟ ಹಾಕುವಲ್ಲಿ ಯಶಸ್ವಿಯಾಗುತ್ತಿರುವ ಪೋಲಿಸ್ ಇಲಾಖೆ ಬಂಟ್ವಾಳ:- ಕಳೆದ ಕೆಲವು ದಿನಗಳ ಹಿಂದೆ ಬೊಲೆರೂ ವಾಹನದಲ್ಲಿ ಗಾಂಜಾ ಸಾಗಿಸುವಾಗ ಅಬಕಾರಿ ಅಧಿಕಾರಿಗಳಿಂದ ತಪ್ಪಿಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಅವರು ಬೈಕ್ ನಲ್ಲಿ ಗಾಂಜಾ ಮಾರಾಟ ಮಾಡಲು ತೆರಳುತ್ತಿದ್ದ ವೇಳೆ ಪೋಲಿಸರು ಬಂಧಿಸಿದ್ದಾರೆ. ಇದರೊಂದಿಗೆ ಗಾಂಜಾ ಸಾಗಟ ಪ್ರಕರಣದಲ್ಲಿ ಮತ್ತೊಬ್ಬರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಪರಂಗಿಪೇಟೆಯ ಮೊಹಮ್ಮದ್ ಅಜರುದ್ದೀನ್ ಮತ್ತು ಅಮ್ಮೆಮಾರ್ ನ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 10 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 8 ರಂದು ಬಂಟ್ವಾಳ ನಗರ ಠಾಣಾ ಪಿಎಐ ಸಂದೀಪ್ ಕುಮಾರ್ ಶೆಟ್ಟಿ ಅವರು ಗಸ್ತು ತಿರುಗುತ್ತಿದ್ದಾಗ ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ ಅರುಣ್ ಕೆ ಹೆಚ್ಚುವರಿ ಎಸ್ ಪಿ ಅನಿಲ್ ಕುಮಾರ್ ಬೂಮರೆಡ್ಡಿ ಮಾರ್ಗದರ್ಶನದಲ್ಲಿ ಬಂಟ್ವಾಳ ಡಿವೈಎಸ್ ಪಿ ಎಸ್ ವಿಜಯಪ್ರಸಾದ್ ಅವರ…
ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ್ದನ್ನು ವಿರೋಧಿಸಿ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಗೋಪಿನಾಥನ್ ಹೊಸದಿಲ್ಲಿ:- ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ ಆರು ವರ್ಷಗಳ ನಂತರ ಕಣ್ಣನ್ ಗೋಪಿನಾಥನ್ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಕಣ್ಣನ್ ಗೋಪಿನಾಥನ್ ದೇಶದ ದೀನದಲಿತರ ಮತ್ತು ದುರ್ಬಲ ಜನರ ಬಗ್ಗೆ ಕಾಳಜಿಯನ್ನು ಹೊಂದಿರುವ ಮತ್ತು ಯಾವಾಗಲೂ ನ್ಯಾಯ ಮತ್ತು ಏಕತೆಗಾಗಿ ಹೋರಾಡುವ ಧೈರ್ಯಶಾಲಿ ಅಧಿಕಾರಿಗಳಲ್ಲಿ ಒಬ್ಬರು ಎಂದು ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಹೇಳಿದ್ದಾರೆ. ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದ್ದನ್ನು ವಿರೋಧಿಸಿ ಕಣ್ಣನ್ ಗೋಪಿನಾಥನ್ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದರು ಭಾರತೀಯ ಆಡಳಿತ ಸೇವೆಯಿಂದ ನಿವೃತ್ತಿ ಹೊಂದಿದ ಆರು ವರ್ಷಗಳ ನಂತರ ಕಣ್ಣನ್ ಗೋಪಿನಾಥನ್ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.


