Subscribe to Updates
Get the latest creative news from FooBar about art, design and business.
Author: PrasakthaNews
ಪತ್ನಿ ಸಫಿಯ ಅವರಿಗೆ ಸಾಥ್ ನೀಡಿ ಪತಿ ಮುಹಮ್ಮದ್ ನೌಫಲ್ ವಿಟ್ಲ:- ಶಿಕ್ಷಣ ಎಂಬುದು ವಿಕಸನದ ಅತ್ಯಂತ ಮುಖ್ಯವಾದ ಘಟ್ಟವಾಗಿದೆ. ಮುಸ್ಲಿಂ ಹೆಣ್ಣುಮಕ್ಕಳು ಅನೇಕರು ಶಿಕ್ಷಣದಲ್ಲಿ ಮುಂದೆ ಇದ್ದರೂ ಮದುವೆಯ ನಂತರ ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗದ ಅನೇಕ ಹೆಣ್ಣು ಮಕ್ಕಳನ್ನು ನಾವು ಕಾಣಬಹುದಾಗಿದೆ. ಹೀಗಿರುವಲ್ಲಿ ಪುತ್ತೂರು ತಾಲೂಕಿನ ಗ್ರಾಮೀಣ ಪ್ರದೇಶದ ಹೆಣ್ಣುಮಗಳೊಬ್ಬಳು ಶಿಕ್ಷಣ ಪಡೆಯಲು ನಡೆದು ಬಂದ ದಾರಿಯು ಆಶ್ಚರ್ಯಕರವಾಗಿದೆ. ತನ್ನ ಬಾಲ್ಯದಲ್ಲೇ ತನಗೆ ಬುದ್ದಿ ಶಕ್ತಿ ಬರುವ ಮೊದಲೇ ತಂದೆಯನ್ನು ಕಳೆದುಕೊಂಡಿರುವ ಈಕೆಯ ಹೆಸರು ಸಫಿಯ ತಂದೆ ಧಾರ್ಮಿಕ ಕ್ಷೇತ್ರದಲ್ಲಿ ಗುರುಗಳಾಗಿದ್ದು ತನ್ನ ಅಣ್ಣ ತಂದೆಯ ಆದರ್ಶದಂತೆ ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಕಷ್ಟದ ಸಮಯದಲ್ಲಿ ಪಿಯುಸಿ ಶಿಕ್ಷಣವನ್ನು ಪೂರೈಸಿದ ಸಂದರ್ಭದಲ್ಲಿ ಉತ್ತಮ ಸಂಬಂಧವನ್ನು ಮನೆಗೆ ಹುಡುಕಿಕೊಂಡು ಮನೆಗೆ ಬಂದಾಗ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿ ಮನೆಯವರ ಆಶಯದಂತೆ ಉದ್ಯಮಿ ಮಹಮ್ಮದ್ ನೌಫಲ್ ಎಂಬುವರ ಜೊತೆ ವಿವಾಹವಾಗುತ್ತಾರೆ. ನಂತರ ಒಂದು ಮಗುವಿಗೆ ಜನ್ಮ ನೀಡಿ ಸುಖ ಸಂಸಾರಾದಲ್ಲಿ…
ಪತ್ನಿ ಸಫಿಯ ಅವರಿಗೆ ಸಾಥ್ ನೀಡಿ ಪತಿ ಮುಹಮ್ಮದ್ ನೌಫಲ್ ವಿಟ್ಲ:- ಶಿಕ್ಷಣ ಎಂಬುದು ವಿಕಸನದ ಅತ್ಯಂತ ಮುಖ್ಯವಾದ ಘಟ್ಟವಾಗಿದೆ. ಮುಸ್ಲಿಂ ಹೆಣ್ಣುಮಕ್ಕಳು ಅನೇಕರು ಶಿಕ್ಷಣದಲ್ಲಿ ಮುಂದೆ ಇದ್ದರೂ ಮದುವೆಯ ನಂತರ ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗದ ಅನೇಕ ಹೆಣ್ಣು ಮಕ್ಕಳನ್ನು ನಾವು ಕಾಣಬಹುದಾಗಿದೆ. ಹೀಗಿರುವಲ್ಲಿ ಪುತ್ತೂರು ತಾಲೂಕಿನ ಗ್ರಾಮೀಣ ಪ್ರದೇಶದ ಹೆಣ್ಣುಮಗಳೊಬ್ಬಳು ಶಿಕ್ಷಣ ಪಡೆಯಲು ನಡೆದು ಬಂದ ದಾರಿಯು ಆಶ್ಚರ್ಯಕರವಾಗಿದೆ. ತನ್ನ ಬಾಲ್ಯದಲ್ಲೇ ತನಗೆ ಬುದ್ದಿ ಶಕ್ತಿ ಬರುವ ಮೊದಲೇ ತಂದೆಯನ್ನು ಕಳೆದುಕೊಂಡಿರುವ ಈಕೆಯ ಹೆಸರು ಸಫಿಯ ತಂದೆ ಧಾರ್ಮಿಕ ಕ್ಷೇತ್ರದಲ್ಲಿ ಗುರುಗಳಾಗಿದ್ದು ತನ್ನ ಅಣ್ಣ ತಂದೆಯ ಆದರ್ಶದಂತೆ ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಕಷ್ಟದ ಸಮಯದಲ್ಲಿ ಪಿಯುಸಿ ಶಿಕ್ಷಣವನ್ನು ಪೂರೈಸಿದ ಸಂದರ್ಭದಲ್ಲಿ ಉತ್ತಮ ಸಂಬಂಧವನ್ನು ಮನೆಗೆ ಹುಡುಕಿಕೊಂಡು ಮನೆಗೆ ಬಂದಾಗ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿ ಮನೆಯವರ ಆಶಯದಂತೆ ಉದ್ಯಮಿ ಮಹಮ್ಮದ್ ನೌಫಲ್ ಎಂಬುವರ ಜೊತೆ ವಿವಾಹವಾಗುತ್ತಾರೆ. ನಂತರ ಒಂದು ಮಗುವಿಗೆ ಜನ್ಮ ನೀಡಿ ಸುಖ ಸಂಸಾರಾದಲ್ಲಿ…
ಪ್ರಮುಖ ಪ್ರಕರಣಗಳಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ ಕೊನೆಗೂ ನ್ಯಾಯಲಕ್ಕೆ ಶರಣು ಬಂಟ್ವಾಳ:- ಬಂಟ್ವಾಳ ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 2017 ರಲ್ಲಿ ಕಲಾಯಿ ಅಶ್ರಫ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಅ.ಕ್ರ 169/2017 500:143 147 148 447 448 302 120( ಬಿ) 201 ಜೊತೆಗೆ 149 ಐಪಿಸಿ ಪ್ರಕರಣದಲ್ಲಿ ನ್ಯಾಯಲಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೆಲ್ ಅ.10 ರಂದು ಮಂಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಕ್ಕೆ ಹಾಜರಾಗಿದ್ದು ನ್ಯಾಯಾಲವು ಆರೋಪಿಗೆ 25- 10- 2025 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.. ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 54/2025 ಕಲಂ 103 109 118(1) 190 191(1) 118(2) 191( 2) 191(3) ಬಿಎನ್ ಎಸ್ ರಂತೆ ಪ್ರಕರಣ ದಾಖಲಾಗಿದ್ದು ಈ ಪ್ರಕರಣದ ಎ 1 ಆರೋಪಿ ಭರತ್ ಕುಮ್ಡೆಲ್ ಪ್ರಕರಣ ದಾಖಲಾದ ದಿನದಿಂದಲೇ ತಲೆಮರೆಸಿಕೊಂಡಿದ್ದು ಈತನ ಮೇಲೆ ಈಗಾಗಲೇ ಹಲವು ಪ್ರಕರಣ…
ಆದೇಶ ಹಿಂಪಡೆದ ಸರಕಾರ ಪಿಐಎಲ್ ಇತ್ಯರ್ಥ ಬೆಂಗಳೂರು:- ಮುಸ್ಲಿಮರ ವಿವಾಹ ನೋಂದಣಿ ಹಾಗೂ ಮುಸ್ಲಿಂ ದಂಪತಿಗೆ ವಿವಾಹ ನೋಂದಣಿ ಪ್ರಮಾಣ ಪತ್ರ ವಿತರಿಸುವ ಅಧಿಕಾರವನ್ನು ಕರ್ನಾಟಕ ರಾಜ್ಯ ವಕ್ಪ್ ಮಂಡಳಿಗೆ ನೀಡಿ 2023 ರ ಆಗಸ್ಟ್ 30 ರಂದು ಹೊರಡಿಸಲಾಗಿದ್ದ ಆದೇಶವನ್ನು ಹಿಂಪಡೆದಿರುವುದಾಗಿ ರಾಜ್ಯ ಸರ್ಕಾರ ಹೈಕೋರ್ಟಿಗೆ ಮಾಹಿತಿ ನೀಡಿದೆ. ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಬೆಂಗಳೂರಿನ ಆಲಂ ಪಾಷಾ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಸರಕಾರ ಪರ ವಕೀಲರು ನ್ಯಾಯಲಕ್ಕೆ ಪ್ರಮಾಣಪತ್ರ ಸಲ್ಲಿಸಿ ಮುಸ್ಲಿಂ ಸಮುದಾಯದ ವಿವಾಹ ನೋಂದಣಿ ಹಾಗೂ ವಿವಾಹಿತ ಮುಸ್ಲಿಂ ದಂಪತಿಗೆ ವಿವಾಹ ಪ್ರಮಾಣಪತ್ರ ನೀಡುವ ಅಧಿಕಾರವನ್ನು ರಾಜ್ಯ ವಕ್ಪ್ ಮಂಡಳಿಗೆ ನೀಡಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿಯ ಮೂಲಕ ರಾಜ್ಯ…
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೆ ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಅಡ್ಡಿ ಆರೋಪ ಬೆಂಗಳೂರು:- ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೆ ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಅಡ್ಡಿಪಡಿಸುತ್ತಿದ್ದಾರೆಂದು ಆರೋಪಿಸಿ ಇದೇ 10 ರಂದು ಅವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೋರಾಟ ಸಮಿತಿ ತಿಳಿಸಿದೆ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಮಿತಿ ರಾಜ್ಯ ಸಂಚಾಲಕ ಬಸವರಾಜ ಕೌತಳ ಎಚ್ ಎನ್ ನಾಗಮೋಹನ ದಾಸ್ ಆಯೋಗವು ಪರಿಶಿಷ್ಟ ಜಾತಿಗಳನ್ನು ಐದು ಪ್ರವರ್ಗ ಗಳನ್ನಾಗಿ ಮಾಡಿ ಒಳ ಮೀಸಲಾತಿ ಸಂಬಂಧ ಏಳು ಶಿಪಾರಸ್ಸುಗಳನ್ನು ಮಾಡಿತ್ತು ಆದರೆ ಸರ್ಕಾರ ಮೂರು ಪ್ರವರ್ಗಗಳಾನ್ನಾಗಿ ವಿಂಗಡಿಸಿ ಪ್ರವರ್ಗ ಎ’ಗೆ’ ಶೇಕಡಾ 6 ಪ್ರವರ್ಗ ಬಿ ಗೆ ಶೇ 6 ಹಾಗೂ ಪ್ರವರ್ಗ ಸಿ ಗೆ ಶೇ 5 ರಷ್ಟು ಒಳ ಮೀಸಲಾತಿ ಹಂಚಿಕೆ ಮಾಡಿದೆ ಆದರೆ ಇದುವರೆಗೂ ಜಾರಿಗೊಳಿಸಿಲ್ಲ ಎಂದು…
ಆನ್ ಲೈನ್ ಮೂಲಕ ಅರ್ಜಿ ಕರೆಯುವ ಪ್ರಕ್ರಿಯೆಗೆ ಸರ್ಕಾರದಿಂದ ಬ್ರೇಕ್ ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆನ್ ಲೈನ್ ಮೂಲಕ ಅರ್ಜಿ ಕರೆಯುವ ಪ್ರಕ್ರಿಯೆಯನ್ನು ಕೈ ಬೀಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಮತ್ತು ಹಿಂದುಳಿದ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಪ್ರಶಸ್ತಿಗೆ ಅರ್ಹ ವ್ಯಕ್ತಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಚಿಸಲಾಗುವ ಸಲಹಾ ಸಮಿತಿ ಹಾಗೂ ಉನ್ನತ ಆಯ್ಕೆ ಸಮಿತಿಗಳು ಅಂತಿಮಗೊಳಿಸಲಿದೆ ಈ ವರ್ಷ 70 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಈಗಾಗಲೇ ಇಲಾಖೆಗೆ ಸಲ್ಲಿಕೆಯಾಗಿರುವ ಸ್ವಯಂ ಅರ್ಜಿಗಳನ್ನು ಸಹ ಪ್ರಶಸ್ತಿ ಸಲಹಾ ಸಮಿತಿ ಮುಂದೆ ಮಂಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ
ಸಹಿ ಅಭಿಯಾನಕ್ಕೆ ಚಾಲನೆ ನೀಡಿದ ದ.ಕ. ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಉಷಾ ಅಂಚನ್ ವಿಟ್ಲ:- ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಗುತ್ತುರವರ ಅಧ್ಯಕ್ಷತೆಯಲ್ಲಿ ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ ಹಾಗೂ ದೇಶದಲ್ಲಿ ನಡೆಯತ್ತಿರುವ ಮತ ಗಳ್ಳತನ ವಿರೋಧಿಸಿ ಸಹಿ ಅಭಿಯಾನಕ್ಕೆ ಚಾಲನೆ ಕಾರ್ಯಕ್ರಮ ಇಂದು ವಿಟ್ಲ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಮತಗಳ್ಳತನ ವಿರೋಧಿಸಿ ಸಹಿ ಅಭಿಯಾನಕ್ಕೆ ದ.ಕ ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್ ರವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮುಹಮ್ಮದ್,ದ ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಉಸ್ತುವಾರಿ ಗೀತಾ ಸುವರ್ಣ, ದ.ಕ ಗ್ರಾಮೀಣ ಮಹಿಳಾ ಕಾಂಗ್ರೆಸ್ ಉಸ್ತುವಾರಿ ನಮಿತಾ ಡಿ ರಾವ್.ದ ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಮಾನಾಥ್ ವಿಟ್ಲ ಸೇರಿದಂತೆ ಹಿರಿಯ ಕಾಂಗ್ರೆಸ್ ಮುಖಂಡರು,ಮುಂಚೂಣಿ ಘಟಕದ ಅಧ್ಯಕ್ಷರುಗಳು,ವಲಯ ಅಧ್ಯಕ್ಷರುಗಳು,ಬೂತ್ ಅಧ್ಯಕ್ಷಗಳು,ಪಟ್ಟಣ ಪಂಚಾಯತ್ ಸದಸ್ಯರುಗಳು,ಗ್ರಾಮ ಪಂಚಾಯಿತಿ ಸದಸ್ಯರುಗಳು,ನಾಮನಿರ್ದೇಶೀತ ಸದಸ್ಯರುಗಳು…
ಅನ್ನಭಾಗ್ಯ ಅಕ್ಕಿಯ ಅಕ್ರಮ ಸಾಗಟ ಕಳ್ಳತನಕ್ಕೆ ಬ್ರೇಕ್ ಹಾಕಲು ಸರ್ಕಾರದ ತೀರ್ಮಾನ ಬೆಂಗಳೂರು:- ಅನ್ನಭಾಗ್ಯ ಯೋಜನೆಯಡಿ ಎಎವೈ ಮತ್ತು ಪಿಎಚ್ ಎಚ್ ಪಡಿತರ ಫಲಾನುಭವಿಗಳಿಗೆ ಇನ್ನು ಮುಂದೆ 5 ಕೆ.ಜಿ ಅಕ್ಕಿ ಇಂದಿರಾ ಆಹಾರ ಕಿಟ್ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇಂದಿರಾ ಕಿಟ್ ನಲ್ಲಿ 2 ಕೆಜಿ ತೊಗರಿ ಬೇಳೆ, 1ಲೀಟರ್ ಅಡುಗೆ ಎಣ್ಣೆ, 1 ಕೆ.ಜಿ ಸಕ್ಕರೆ, ಹಾಗೂ 1 ಕೆ.ಜಿ ಉಪ್ಪು ಇರಲಿದೆ. 5 ಕೆ.ಜಿ ಅಕ್ಕಿ ಬದಲಿಗೆ ಆಹಾರ ಕಿಟ್ ನೀಡಲು ತೀರ್ಮಾನಿಸಲಾಗಿದೆ. ಅನ್ನಭಾಗ್ಯ ಅಕ್ಕಿಯ ಅಕ್ರಮ ಸಾಗಾಟ ಕಳ್ಳತನ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಆಹಾರ ಕಿಟ್ ನೀಡಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಹೆಚ್ಚುವರಿ ಅಕ್ಕಿ ನೀಡಲು ಆಯವ್ಯಯದಲ್ಲಿ ಹಂಚಿಕೆ ಮಾಡಿರುವ 6,426 ಕೋಟಿ ರೂ ಅನುದಾನದಲ್ಲಿ 6119.52 ಕೋಟಿ ರೂ ವೆಚ್ಚದಲ್ಲಿ ಇಂದಿರಾ ಆಹಾರ…
ಬಿಹಾರದ ಜನತೆಗೆ ತೇಜಸ್ವಿ ಯಾದವ್ ಭರವಸೆ ಪಾಟ್ನ:- ಬಿಹಾರದಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಒಬ್ಬರಿಗೆ ಸರಕಾರಿ ನೌಕರಿ ನೀಡಲಾಗುವುದು ಎಂದು ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಘೋಷಿಸಿದ್ದಾರೆ. ಈ ಭರವಸೆ ಈಡೇರಿಸಲು ಸರಕಾರ ಅಧಿಕಾರಕ್ಕೆ ಬಂದ 20 ದಿನಗಳಲ್ಲಿ ಶಾಸನ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ತೇಜಸ್ಬಿ ಯಾದವ್ ನಿರುದ್ಯೋಗ ಅತ್ಯಂತ ದೊಡ್ಡ ಸಮಸ್ಯೆ ಎಂಬ ಸಂಗತಿಯನ್ನು ಈ ನಾಚಿಕೇಡು ಸರಕಾರ 20 ವರ್ಷ ಆದರೂ ಅರ್ಥ ಮಾಡಿಕೊಳ್ಳಲೇ ಇಲ್ಲ ಒಂದು ವೇಳೆ ವಿರೋಧ ಪಕ್ಷಗಳ ಮೈತ್ರಿಕೂಟ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಒಬ್ಬರಿಗೆ ಸರಕಾರಿ ನೌಕರಿ ನೀಡಲಾಗುವುದು ಎಂದು ಹೇಳಿದ್ದಾರೆ. ಎನ್ ಡಿಎ ಮೈತ್ರಿಕೂಟದ ಪಾಲುದಾರ ಪಕ್ಷಗಳಾದ ಜೆಡಿಯು ಹಾಗೂ ಬಿಜೆಪಿ ಉದ್ಯೋಗಳ ಭರವಸೆ ನೀಡಿಲ್ಲ ಬದಲಿಗೆ ನಿರುದ್ಯೋಗ ಭತ್ಯೆಯ ಭರವಸೆ ನೀಡಿದೆ ಆದರೆ ಹೊಸ ಶಾಸನದ ಮೂಲಕ ಬಿಹಾರದಲ್ಲಿ ಸರಕಾರಿ…
ಮಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ಮಂಗಳೂರು:- ರಾಜ್ಯದ ಸರ್ಕಾರಿ ಶಾಲೆಗಳಿಗೆ 13,000 ಶಿಕ್ಷಕರು ಹಾಗೂ ಅನುದಾನಿತ ಶಾಲೆಗಳಿಗೆ ಸುಮಾರು 5,500 ಶಿಕ್ಷಕರು ಸೇರಿದಂತೆ 18,500 ಕ್ಕೂ ಅಧಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗಳ ಸಿದ್ದತೆ ನಡೆಯುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಹಿಂದಿನ ಸರ್ಕಾರದ ಅವಧಿಯಲ್ಲಿ ಕೇವಲ 4,700 ಶಿಕ್ಷಕರ ನೇಮಕಾತಿ ನಡೆದಿತ್ತು ತಾನು ಶಿಕ್ಷಣ ಸಚಿವನಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಈಗಾಗಲೇ 13,000 ಶಿಕ್ಷಕರ ನೇಮಕಾತಿ ನಡೆದದ್ದು ಮತ್ತೆ 18,500 ಶಿಕ್ಷಕರ ನೇಮಕಾತಿಗೆ ಸಿದ್ದತೆ ನಡೆದಿದೆ ಎಂದರು ಪರಿಶಿಷ್ಟ ಜಾತಿಯಲ್ಲಿನ ಒಳ ಮೀಸಲಾತಿ ಕುರಿತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ವರದಿ ಹಿನ್ನಲೆಯಲ್ಲಿ ನೇಮಕಾತಿ ಪ್ರಕ್ರಿಯಲ್ಲಿ ವಿಳಂಭವಾಗಿದೆ ಎಂದು ಅವರು ತಿಳಿಸಿದರು ಎಲ್ ಕೆಜಿಯಿಂದ 12ನೇ ತರಗತಿವರೆಗೆ ಕೆಪಿಎಸ್ ಮಾದರಿಯಡಿ ಶೇ 80 ರಷ್ಟು ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೆರಿಸಲಾಗಿದೆ. ಈ ಶಾಲೆಗಳಲ್ಲಿ ಫಲಿತಾಂಶದ ಗುಣಮಟ್ಟವನ್ನು…


