Subscribe to Updates
Get the latest creative news from FooBar about art, design and business.
Author: PrasakthaNews
ಒಂದು ಗ್ರಾಂ ಚಿನ್ನಕ್ಕೆ ಬೆಲೆ ಎಷ್ಟು ಗೊತ್ತಾ ಹೊಸದಿಲ್ಲಿ:- ದಿಲ್ಲಿಯ ಚಿನಿವಾರ ಪೇಟೆಯಲ್ಲಿ ಮಂಗಳವಾರ ಚಿನ್ನದ ಬೆಲೆಯನ್ನು ಮತ್ತೊಮ್ಮೆ ಏರಿಕೆ ಕಂಡು ಬಂದಿದ್ದು 24 ಕ್ಯಾರಟ್ ಚಿನ್ನದ ದರ ಪ್ರತಿ ಗ್ರಾಂ ಗೆ 125 ರೂ ನಷ್ಟು ಏರಿಕೆ ಕಂಡು 12202 ರೂಗೆ ತಲುಪಿತು ಇದೇ ರೀತಿ 22 ಕ್ಯಾರಟ್ ಚಿನ್ನದ ದರ ಪ್ರತಿ ಗ್ರಾಂ ಗೆ 115 ರೂ ನಷ್ಟು ಏರಿಕೆ ಕಂಡು 11185ರೂ ತಲುಪಿದರೆ 18 ಕ್ಯಾರಟ್ ಚಿನ್ನದ ದರ ಪ್ರತಿ ಗ್ರಾಂ ಗೆ 94 ,ರೂ ನಷ್ಟು ಏರಿಕೆ ಕಂಡು 9152 ರೂ ಗೆ ತಲುಪಿದೆ ಅಮೇರಿಕ ಸರಕಾರ ಸ್ಥಗಿತಗೊಳ್ಳುವ ಗಂಭೀರ ಅಪಾರ ಹಾಗೂ ಭಾರತದಲ್ಲಿನ ಹಬ್ಬದ ಖ್ರುತುವಿನ ಬೇಡಿಕೆ ಹಿನ್ನಲೆಯಲ್ಲಿ ಹೂಡಿಕೆದಾರರ ಸ್ವರ್ಗ ಎಂದೇ ಪರಿಗಣಿಸಲಾಗಿರುವ ಚಿನ್ನಕ್ಕಾಗಿನ ಬೇಡಿಕೆಯಲ್ಲಿ ಏರಿಕೆಯಾಗಿದೆ ಈ ಹಿನ್ನಲೆಯಲ್ಲಿ ಎಲ್ಲಾ ಬಗೆಯ ಪರಿಶುದ್ಧತೆಯ ಚಿನ್ನದ ದರದಲ್ಲಿ ಗಮನಾರ್ಹ ಏರಿಕೆ ಕಂಡು ಬಂದಿತು ದೇಶದ ಇನ್ನಿತರ ಪ್ರಮುಖ ಚಿನಿವಾರ…
ಅಧಿಕಾರಿಗಳು ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ ಬಂಟ್ವಾಳ:- ಕನ್ಯಾನ ರಸ್ತೆಯು ತೀರಾ ಹದಗೆಟ್ಟು ಹೋಗಿದ್ದು ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ಶವದ ಆಕೃತಿ ರಚಿಸಿ ರಸ್ತೆಯಲ್ಲಿ ಇಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಜೇಶ್ವರ, ಸುಬ್ರಮಣ್ಯ ರಾಜ್ಯ ಹೆದ್ದಾರಿಯಲ್ಲಿ ಬೈರಿಕಟ್ಟೆ ಎಂಬಲ್ಲಿ ರಸ್ತೆ ಸಂಪೂರ್ಣವಾಗಿ ಹೊಂಡ ಗುಂಡಿಗಳಿಂದ ಕೂಡಿದೆ ವಿಟ್ಲದಿಂದ ಕನ್ಯಾನ ಬಾಯಾರು ಉಪ್ಪಳ ಆನೆಕಲ್ಲು ಮಂಜೇಶ್ವರ ಕಡೆಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಹದಗೆಟ್ಟ ಪರಿಣಾಮ ವಾಹನ ಸಂಚಾರ ದುಸ್ಥರವಾಗಿದೆ. ಪ್ರತಿನಿತ್ಯ ನೂರಾರು ವಾಹನಗಳು ಸಂಚರಿಸುತ್ತಿರುವ ಈ ರಸ್ತೆಯ ಒಂದು ಬದಿಗೆ ಕೆಲವು ವರ್ಷಗಳ ಹಿಂದೆ ಅಳವಡಿಸಲಾಗಿದ್ದ ಇಂಟರ್ ಲಾಕ್ ಈಗ ಕಿತ್ತು ಹೋಗಿದೆ. ವಾಹನ ಬಿಟ್ಟು ಪಾದಚಾರಿಗಳಿಗೂ ನಡೆದಾಡಲೂ ತೊಂದರೆಯಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ ಈಗಾಗಲೇ ಆಕ್ರೋಶಗೊಂಡ ಸಾರ್ವಜನಿಕರು ಶವದ ಆಕ್ರತಿ ರಚಿಸಿ ಈ ರಸ್ತೆ ಕಾಮಗಾರಿಗೆ ಸಂಬಂಧಪಟ್ಟ ಅಧಿಕಾರಿಗಳು ಎಂಜಿನಿಯರ್ ಗಳು ಗುತ್ತಿಗೆದಾರರು ಮಲಗಿದ್ದಾರೆ ಯಾರು ತೊಂದರೆ ಕೊಡಬಾರದು ಎಂದು ಬರೆಯಲಾದ ಬೋರ್ಡ್ ಅಳವಡಿಸಿದ್ದಾರೆ.
ಮಾಜಿ ಪ್ರಧಾನಿ ಎಚ್ ಡಿ ದೇವೆಗೌಡ ಆಸ್ಪತ್ರೆಗೆ ದಾಖಲು ಬೆಂಗಳೂರು:- ಮಾಜಿ ಪ್ರಧಾನಿ ಜೆಡಿಎಸ್ ಮುಖ್ಯಸ್ಥ ಎಚ್ ಡಿ ದೇವೆಗೌಡ ಅವರನ್ನು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಳಿಜ್ವರ ಮತ್ತು ಮೂತ್ರದ ಸೋಂಕಿನ ಕಾರಣದಿಂದ ದೇವೆಗೌಡ ಅವರ ಆರೋಗ್ಯದಲ್ಲಿ ಏರಪೇರಾಗಿದ್ದು ಅವರನ್ನು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜ್ಯದಲ್ಲಿ ಇನ್ನೂ ಮುಕ್ತಾಯಗೊಳ್ಳದ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆ ಬೆಂಗಳೂರು:- ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಇಂದು ಸಮೀಕ್ಷೆ ಮುಕ್ತಾಯಗೊಳ್ಳಬೇಕಿತ್ತು ಆದರೆ ಸಮೀಕ್ಷೆ ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಅಕ್ಟೋಬರ್ 18 ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆಯನ್ನು ನೀಡಲು ಸಿಎಂ ಸಿದ್ದರಾಮಯ್ಯ ನೇತ್ರತ್ವದಲ್ಲಿ ನಡೆದಂತಹ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಇಂದು ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತ್ರತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಸದಸ್ಯರು ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು ಜಾತಿಗಣತಿ ಸಮೀಕ್ಷೆ ಮುಕ್ತಾಯವಾಗದ ಹಿನ್ನಲೆಯಲ್ಲಿ ರಾಜ್ಯದ ಶಾಲೆಗಳಿಗೆ ರಜೆಯನ್ನು ಮುಂದುವರೆಸಲು ನಿರ್ಧರಿಸಲಾಯಿತು ಅದರಂತೆ ಅಕ್ಟೋಬರ್ 18 ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆಯನ್ನು ನೀಡಲು ನಿರ್ಧರಿಸಲಾಗಿದೆ. ಶಿಕ್ಷಕರನ್ನು ಸಮೀಕ್ಷೆಗೆ ಸಂಪೂರ್ಣವಾಗಿ ಬಳಸಿಕೊಳ್ಳಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಶಾಲೆಗಳಿಗೆ ನೀಡಲಾಗಿದ್ದ ದಸರಾ ರಜೆಯನ್ನು ವಿಸ್ತರಣೆ ಮಾಡಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.
ನ್ಯಾಯಮೂರ್ತಿ ಗವಾಯಿ ಅವರು ತೋರಿದ ಶಾಂತತೆಯನ್ನು ಮೆಚ್ಚಿದ ಪ್ರಧಾನಿ ನವದೆಹಲಿ:- ಭಾರತದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಮೇಲೆ ಶೂ ಎಸೆತ ಘಟನೆ ದೇಶಾದ್ಯಂತ ತೀವ್ರ ಚರ್ಚೆ ಹಾಗೂ ಆಕ್ರೋಶಕ್ಕೆ ಕಾರಣವಾಗಿರುವಂತೆಯೇ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಧ್ವನಿಗೊಡಿಸಿದ್ದಾರೆ. ಈ ಘಟನೆ ಹಿನ್ನಲೆಯಲ್ಲಿ ಬಿ ಆರ್ ಗವಾಯಿ ಜೊತೆಗೆ ಮಾತನಾಡಿರುವುದಾಗಿ ಪ್ರಧಾನಿ ತಿಳಿಸಿದ್ದಾರೆ. ಸುಪ್ರೀಂಕೋರ್ಟ್ ನಲ್ಲಿ ಇಂದು ಬೆಳಿಗ್ಗೆ ನಡೆದ ಘಟನೆ ಎಲ್ಲಾ ಭಾರತೀಯರನ್ನು ಕೇರಳಿಸಿದೆ ನಮ್ಮ ಸಮಾಜದಲ್ಲಿ ಇಂತಹ ಖಂಡನೀಯ ಕ್ರತ್ಯಗಳು ನಡೆಯುತ್ತಿರುವುದು ಸಂಪೂರ್ಣ ಖಂಡನೀಯವಾಗಿದ್ದು ಎಂದರು ಇಂತಹ ಪರಿಸ್ಥಿತಿಯಲ್ಲಿ ನ್ಯಾಯಮೂರ್ತಿ ಗವಾಯಿ ಅವರು ತೋರಿದ ಶಾಂತತೆಯನ್ನು ನಾನು ಮೆಚ್ಚಿದ್ದೇನೆ.ಇದು ನ್ಯಾಯದ ಮೌಲ್ಯಗಳಿಗೆ ಮತ್ತು ನಮ್ಮ ಸಂವಿಧಾನದ ಆತ್ಮವನ್ನು ಬಲಪಡಿಸುವ ಅವರ ಬದ್ಧತೆಯನ್ನು ಎತ್ತಿ ತೋರಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ
ಸಂವಿಧಾನದ ಮೇಲಿನ ದಾಳಿಯಾಗಿದೆ ಸೋನಿಯಾ ಗಾಂಧಿ ಹೇಳಿಕೆ ನವದೆಹಲಿ:- ಭಾರತದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲಿನ ಶೂ ಎಸೆತ ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಈ ಮಧ್ಯೆ ಇದು ಕೇವಲ ಅವರ ಮೇಲಿನ ದಾಳಿಯಷ್ಟೇ ಅಲ್ಲ ಸಂವಿಧಾನದ ಮೇಲಿನ ದಾಳಿಯಾಗಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ಹೇಳಿದ್ದಾರೆ ಭಾರತದ ಗೌರವಾನ್ವಿತ ಮುಖ್ಯ ನ್ಯಾಯಾಧೀಶರ ಮೇಲಿನ ದಾಳಿಯನ್ನು ಸುಪ್ರೀಂಕೋರ್ಟ್ ನಲ್ಲೆ ಖಂಡಿಸಲು ಯಾವುದೇ ಪದಗಳು ಸಾಕಾಗುವುದಿಲ್ಲ ಇದು ಅವರ ಮೇಲಿನ ಹಲ್ಲೆ ಮಾತ್ರವಲ್ಲ ನಮ್ಮ ಸಂವಿಧಾನದ ಮೇಲಿನ ಹಲ್ಲೆಯಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಗವಾಯಿ ಅವರು ತುಂಬಾ ಕರುಣಾಮಯಿಯಾಗಿದ್ದಾರೆ ಆದರೆ ರಾಷ್ಟ್ರವು ತೀವ್ರ ದುಃಖ ಮತ್ತು ಆಕ್ರೋಶದ ಭಾವನೆಯೊಂದಿಗೆ ಒಗ್ಗಟ್ಟಿನಿಂದ ಅವರೊಂದಿಗೆ ಒಗ್ಗಟ್ಟಿನಿಂದ ನಿಲ್ಲಬೇಕು ಎಂದು ಅವರು ಕರೆ ನೀಡಿದ್ದಾರೆ
ಕಾರ್ಮಿಕ ಸಚಿವ ಸಂತೋಷ್ ಲಾಡ್ ಆಗಮನ- ಬಂಟ್ವಾಳ:- ದೇಶಾದ್ಯಂತ ನಡೆದ ಮತಗಳ್ಳತನದ ವಿರುದ್ಧ ದ.ಕ.ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಇಬ್ರಾಹಿಂ ನವಾಜ್ ಅವರ ನೇತೃತ್ವದಲ್ಲಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಯುವ ಮೂಲಕ ರಾಹುಲ್ ಗಾಂಧಿಯವರ ಕೈಯನ್ನು ಬಲಪಡಿಸುವ ಕಾರ್ಯಕ್ರಮವನ್ನು ಮಾಡಿಕೊಂಡು ಬಂದಿದೆ. ಜಿಲ್ಲಾ ಯುವ ಕಾಂಗ್ರೆಸ್ ಪಕ್ಷದ ಆದೇಶದಂತೆ ಯುವ ಕಾಂಗ್ರೆಸ್ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವತಿಯಿಂದ ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಇದರ ಸಂಯಕ್ತ ಆಶ್ರಯದಲ್ಲಿ ಅಕ್ಟೋಬರ್ 10 ಶುಕ್ರವಾರ ದಿವಸ ಸಂಜೆ 5:30 ಕ್ಕೆ ಬಿಸಿರೋಡ್ ನಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕರ್ನಾಟಕ ಘನ ಸರ್ಕಾರದ ಕಾರ್ಮಿಕ ಸಚಿವ ಶ್ರೀ ಸಂತೋಷ್ ಲಾಡ್ ಭಾಗವಹಿಸಲಿದ್ದಾರೆ. ಕರ್ನಾಟಕ ಸರಕಾರದ ಮಾಜಿ ಸಚಿವ ಬಿ ರಮಾನಾಥ್ ರೈ , ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಇಬ್ರಾಹಿಂ ನವಾಝ್…
ದ.ಕ.ಗ್ರಾಮೀಣ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪ್ರಬಲ ನಾಯಕ ಎಂ.ಎಸ್ ಮಹಮ್ಮದ್ ಆಯ್ಕೆ ಸಾಧ್ಯತೆ*! ಮಂಗಳೂರು:-ದ.ಕ.ಜಿಲ್ಲಾ ಕಾಂಗ್ರೆಸ್ ಗೆ ಶೀಘ್ರದಲ್ಲೇ ನೂತನ ಅಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯಲಿದ್ದು ಅದಕ್ಕಾಗಿ ಮುಖಂಡರ ಮಧ್ಯೆ ಲಾಭಿ ಜೋರಾಗಿದೆ.ಇದೇ ಮೊದಲ ಭಾರಿಗೆ ನಗರ ಮತ್ತು ಗ್ರಾಮೀಣ ಅಧ್ಯಕ್ಷ ಎನ್ನುವ ಅಧಿಕಾರ ವಿಕೇಂದ್ರೀಕರಣದ ಸೂತ್ರ ಜಾರಿಯಾಗುವ ಸಾಧ್ಯತೆ ಇದ್ದು ಇದು ಆಕಾಂಕ್ಷಿಗಳ ಪಟ್ಟಿಯನ್ನು ಇನ್ನಷ್ಟು ಉದ್ದಗೊಳಿಸಿದೆ.ಮುಖ್ಯವಾಗಿ ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ಇದೇ ಮೊದಲ ಭಾರಿಗೆ ಎಐಸಿಸಿ ಎಂಟ್ರಿ ನೀಡಲಿದೆ. ಸುದೀರ್ಘ 8 ವರ್ಷ 4 ತಿಂಗಳಿನಿಂದ ಅಧ್ಯಕ್ಷರಾಗಿರುವ ಕೆ ಹರೀಶ್ ಕುಮಾರ್ ಇತ್ತೀಚೆಗಷ್ಟೇ ಮೆಸ್ಕಾಂ ಅಧ್ಯಕ್ಷರಾಗಿ ನೇಮಕ ಆಗಿರುವುದರಿಂದ ತಿಂಗಳೂಳಗೆ ನೂತನ ಅಧ್ಯಕ್ಷರ ಆಯ್ಕೆ ನಡೆಯುವ ನೀರಿಕ್ಷೆಯಿದೆ. ಅಖಾಡಕ್ಕಿಳಿದ ಎಐಸಿಸಿಇದುವರೆಗೆ ಸ್ಥಳೀಯ ನಾಯಕರ ಒಲವಿನಂತೆ ಕೆಪಿಸಿಸಿ ಮಟ್ಟದಲ್ಲಿ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತಿತ್ತು ಆದರೆ ಇದೇ ಮೊದಲ ಭಾರಿಗೆ ಜಿಲ್ಲಾ ನಾಯಕತ್ವ ಆಯ್ಜೆಗೆ ಎಐಸಿಸಿ ಆಸಕ್ತಿ ವಹಿಸಿದೆಕರಾವಳಿಯಲ್ಲಿ ನೆಲಕಚ್ಚಿರುವ ಕಾಂಗ್ರೆಸ್ ಗೆ ಮರುಜೀವ ತುಂಬುವ ಅಭ್ಯರ್ಥಿ ಆಯ್ಕೆ ಮಾಡಬೇಕು ಎಂಬ ಹಿನ್ನಲೆಯಲ್ಲಿ ಎಐಸಿಸಿ ಉಸ್ತುವಾರಿಯಲ್ಲಿ…
ಮಾಜಿ ಸಚಿವ ಬಿ ರಮಾನಾಥ್ ರೈ, ವಿನಯಕುಮಾರ್ ಸೊರಕೆ ಭಾಗಿ ಮಂಗಳೂರು:- ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಎಂ.ಎ ಗಪೂರ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ಮಂಗಳೂರಿನ ಕುದ್ಮಲ್ ರಂಗರಾವ್ ಮಿನಿ ಪುರಭವನದಲ್ಲಿ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ಎಂ.ಎ ಗಪೂರ್ ಅವರು ತಲಪಾಡಿಯಿಂದ ಕಾರವಾರದವರೆಗಿನ 350 ಕಿ ಮೀಟರ್ ವ್ಯಾಪ್ತಿಯ ಕರಾವಳಿಯ ಅಭಿವೃದ್ಧಿಗೆ ಪೂರಕವಾಗಿ ತನಗೆ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುವುದಾಗಿ ಹೇಳಿದರು. ರಾಜ್ಯ ಸರ್ಕಾರವು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಅಭಿವೃದ್ಧಿ ಮಂಡಳಿಯಾಗಿ ಶಾಸನ ಮಾಡಿ ಅಧಿಕಾರ ನೀಡಿದೆ ಇದೀಗ ಅಗತ್ಯ ನೀತಿ ನಿಯಮಗಳ ಜಾರಿಯೊಂದಿಗೆ ಮಂಡಳಿ ಕಾರ್ಯ ನಿರ್ವಹಿಸಲಿದೆ ಕರಾವಳಿ ಜಿಲ್ಲೆಗೆ ಹಿಂದಿನ ಎಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಹಾಲಿ ಸಚಿವರ ಮಾರ್ಗದರ್ಶನ ಸಲಹೆಯೊಂದಿಗೆ ಮಾಸ್ಟರ್ ಪ್ಲ್ಯಾನ್ ರೂಪಿಸಿಕೊಂಡು ಕರಾವಳಿಯ ಅಭಿವೃದ್ಧಿಗೆ ಪೂರಕವಾಗಿ ಕಾರ್ಯ ನಿರ್ವಹಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ ರಮಾನಾಥ್…
ಎರಡು ಹಂತಗಳಲ್ಲಿ ಮತದಾನ ಹೊಸದಿಲ್ಲಿ:- ಬಿಹಾರ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟವಾಗಿದ್ದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ ಈ ಕುರಿತು ದಿಲ್ಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಮುಖ್ಯ ಆಯುಕ್ತ ಜ್ಜಾನೇಶ್ ಕುಮಾರ್ ಬಿಹಾರ ವಿಧಾನಸಭೆಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ ನವೆಂಬರ್ 6 ರಂದು ಮೊದಲ ಹಂತದ ಮತದಾನ ಮತ್ತು ನವೆಂಬರ್ 11 ರಂದು ಎರಡನೇ ಹಂತದ ಮತದಾನ ನಡೆಯಲಿದೆ ನವೆಂಬರ್ 14 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ತಿಳಿಸಿದ್ದಾರೆ.


