Subscribe to Updates
Get the latest creative news from FooBar about art, design and business.
Author: PrasakthaNews
ಮಾಜಿ ಸಚಿವ ಬಿ ರಮಾನಾಥ್ ರೈ, ವಿನಯಕುಮಾರ್ ಸೊರಕೆ ಭಾಗಿ ಮಂಗಳೂರು:- ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಎಂ.ಎ ಗಪೂರ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ಮಂಗಳೂರಿನ ಕುದ್ಮಲ್ ರಂಗರಾವ್ ಮಿನಿ ಪುರಭವನದಲ್ಲಿ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ಎಂ.ಎ ಗಪೂರ್ ಅವರು ತಲಪಾಡಿಯಿಂದ ಕಾರವಾರದವರೆಗಿನ 350 ಕಿ ಮೀಟರ್ ವ್ಯಾಪ್ತಿಯ ಕರಾವಳಿಯ ಅಭಿವೃದ್ಧಿಗೆ ಪೂರಕವಾಗಿ ತನಗೆ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುವುದಾಗಿ ಹೇಳಿದರು. ರಾಜ್ಯ ಸರ್ಕಾರವು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಅಭಿವೃದ್ಧಿ ಮಂಡಳಿಯಾಗಿ ಶಾಸನ ಮಾಡಿ ಅಧಿಕಾರ ನೀಡಿದೆ ಇದೀಗ ಅಗತ್ಯ ನೀತಿ ನಿಯಮಗಳ ಜಾರಿಯೊಂದಿಗೆ ಮಂಡಳಿ ಕಾರ್ಯ ನಿರ್ವಹಿಸಲಿದೆ ಕರಾವಳಿ ಜಿಲ್ಲೆಗೆ ಹಿಂದಿನ ಎಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಹಾಲಿ ಸಚಿವರ ಮಾರ್ಗದರ್ಶನ ಸಲಹೆಯೊಂದಿಗೆ ಮಾಸ್ಟರ್ ಪ್ಲ್ಯಾನ್ ರೂಪಿಸಿಕೊಂಡು ಕರಾವಳಿಯ ಅಭಿವೃದ್ಧಿಗೆ ಪೂರಕವಾಗಿ ಕಾರ್ಯ ನಿರ್ವಹಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ ರಮಾನಾಥ್…
ಎರಡು ಹಂತಗಳಲ್ಲಿ ಮತದಾನ ಹೊಸದಿಲ್ಲಿ:- ಬಿಹಾರ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟವಾಗಿದ್ದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ ಈ ಕುರಿತು ದಿಲ್ಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಮುಖ್ಯ ಆಯುಕ್ತ ಜ್ಜಾನೇಶ್ ಕುಮಾರ್ ಬಿಹಾರ ವಿಧಾನಸಭೆಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ ನವೆಂಬರ್ 6 ರಂದು ಮೊದಲ ಹಂತದ ಮತದಾನ ಮತ್ತು ನವೆಂಬರ್ 11 ರಂದು ಎರಡನೇ ಹಂತದ ಮತದಾನ ನಡೆಯಲಿದೆ ನವೆಂಬರ್ 14 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ಶ್ರೀ ನರೇಂದ್ರ ಮೋದಿ, ರಾಹುಲ್ ಗಾಂಧಿಗೆ ಅಗ್ನಿಪರೀಕ್ಷೆ ನವದೆಹಲಿ:- ಬಿಹಾರ ವಿಧಾನ ಸಭಾ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗವು ಇಂದು ( ಅ.6 ) ಸಂಜೆ ಪ್ರಕಟಿಸಲಿದೆ. ಚುನಾವಣಾ ಆಯೋಗವು ಬಿಹಾರದಲ್ಲಿ ಎರಡು ದಿನಗಳ ಕಾಲ ಪರಿಶೀಲನೆ ನಡೆಸಿ ಮುಕ್ತ ನ್ಯಾಯಸಮ್ಮತ ಮತ್ತು ಸುಗಮ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು ರಾಜಕೀಯ ಪಕ್ಷಗಳು ಮತ್ತು ಜಾರಿ ಸಂಸ್ಥೆಗಳೊಂದಿಗೆ ಸಭೆ ನಡೆಸಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ. 243 ಸದಸ್ಯ ಬಲದ ರಾಜ್ಯ ವಿಧಾನಸಭೆಯ ಅವಧಿ ನವೆಂಬರ್ 22 ರಂದು ಕೊನೆಗೊಳ್ಳುತ್ತದೆ. ಮುಂಬರುವ ಚುನಾವಣೆಯು ಮುಖ್ಯಮಂತ್ರಿ ನಿತೀಶ್ ಕುಮಾರ್ ರೆಡ್ಡಿ ನೇತ್ರತ್ವದ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಎನ್.ಡಿ.ಎ ಮತ್ತು ರಾಷ್ಟ್ರೀಯ ಜನತಾ ದಳದ ಆರ್ ಜೆಡಿ ತೇಜಸ್ವಿಯಾದವ್ ನೇತ್ರತ್ವದ ಮಹಾಘಟಬಂಧನ್ ನಡುವಿನ ನೇರ ಸ್ಪರ್ಧೆಯ ನೀರಿಕ್ಷೆಯಿದೆ..
ಸುಳ್ಳು ಸುದ್ದಿ ಹರಡಿಸಿದ VTV vitla ಇದರ ವಿರುದ್ದ ಉಪ್ಪಿನಂಗಡಿ ಪೋಲಿಸ್ ಠಾಣಾಧಿಕಾರಿಗೆ ದೂರು ನೀಡಿದ ಅಬ್ದುಲ್ ಖಾದರ್ ಆದರ್ಶ ನಗರಪುತ್ತೂರು:- ಶಾಸಕರ ಕಚೇರಿಗೆ ನಿರಂತರವಾಗಿ ಬರುತ್ತಿದ್ದ ನೆಕ್ಕಿಲಾಡಿ ಆದರ್ಶ ನಗರ ನಿವಾಸಿ ಖಾದರ್ ಎಂಬಾತ ಮಹಿಳೆಯೊಬ್ಬರಿಂದ ಕ್ರೆಡಿಟ್ ಕಾರ್ಡ್ ಪಡೆದು 40 ಸಾವಿರ ವಂಚನೆ ಮತ್ತು ಖಾದರ್ ಅವರಿಗೆ ಗೂಸಾ ಎನ್ನುವ ಸುಳ್ಳು ಸುದ್ದಿಯೊಂದು VTV vitla news ಎನ್ನುವ ವೆಬ್ ಸೈಟ್ ನಲ್ಲಿ ಪ್ರಕಟಗೊಂಡಿದ್ದು ಇದರ ವಿರುದ್ದ ದೂರುದಾರ ಅಬ್ದುಲ್ ಖಾದರ್ ಅವರು ಉಪ್ಪಿನಂಗಡಿ ಪೋಲಿಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ VTV vitla ಎನ್ನುವ ನ್ಯೂಸ್ ವಿಭಾಗದವರು ಅನಗತ್ಯವಾಗಿ ಸುಳ್ಳು ಸುದ್ದಿಯನ್ನು ಪ್ರಕಟಿಸುವ ಮೂಲಕ ನನ್ನ ವಿರುದ್ದ ಸಮಾಜದ ಜನರಲ್ಲಿ ಅಪನಂಬಿಕೆ ಮೂಡಿಸುವ ಕೆಲಸವನ್ನು ಮಾಡಿದ್ದಾರೆ ಮತ್ತು ಪುತ್ತೂರಿನ ಜನಪ್ರಿಯ ಶಾಸಕರು ಮತ್ತು ಕಚೇರಿಯನ್ನು ಎಳೆದು ತರುವ ವ್ಯವಸ್ಥೆ ಪಿತೂರಿ ಮಾಡಿರುತ್ತಾರೆ ಈ ನಿಟ್ಟಿನಲ್ಲಿ ವೆಬ್ ಸೈಟ್ ನ್ಯೂಸ್ ಇವರನ್ನು ಪತ್ತೆಹಚ್ಚಿ ಇವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಮತ್ತು…
ಪೊಳಲಿಯಲ್ಲಿ ಬಸ್ಸನ್ನು ಸ್ವಾಗತಿಸಿದ ಬಂಟ್ವಾಳ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ :- ಮಂಗಳೂರು- ಪೊಳಲಿಗೆ ನೂತನವಾಗಿ ಪ್ರಾರಂಭಗೊಂಡ ಕೆ.ಎಸ್ ಆರ್ ಟಿಸಿ ಬಸ್ಸನ್ನು ಪೊಳಲಿಯಲ್ಲಿ ಬಂಟ್ವಾಳ ತಾಲೂಕಿನ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಜಯಂತಿ ವಿ ಪೂಜಾರಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಇವರ ನೇತ್ರತ್ವದಲ್ಲಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ- ಕರಿಯಂಗಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಧಾ ಲೊಕೇಶ್ , ಉಪಾಧ್ಯಕ್ಷ ರಾಜ್ ಕೋಟ್ಯಾನ್, ಕರಿಯಂಗಳ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಹಾಸ, ಅಮ್ಮುಂಜೆ ವಲಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ AH ಸಲಾಂ ಕಲಾಯಿ, ಗ್ರಾಮ ಪಂಚಾಯತಿ ಸದಸ್ಯರಾದ ವಿನಾ ಆಚಾರ್ಯ, ಲಕ್ಷೀಶ್ ಶೆಟ್ಟಿ, ಕಾಂಗ್ರೆಸ್ ಮುಖಂಡ ಹರಿಪ್ರಸಾದ್, ಅಹ್ಮದ್ ಬಶೀರ್, ಪ್ರೇಮನಾಥ್ , ಅಬ್ಬಾಸ್ ಮೊದಲಾದವರು ಉಪಸ್ಥಿತರಿದ್ದರು.
ರಾಜ್ ಘಾಟ್ ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪನಮನ* ನವದೆಹಲಿ:- ನವದೆಹಲಿಯ ರಾಜ್ ಘಾಟ್ ನಲ್ಲಿರುವ ಮಹಾತ್ಮ ಗಾಂಧೀಜಿಯವರ ಸಮಾಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗಣ್ಯರು ಪುಷ್ಪನಮನ ಸಲ್ಲಿಸಿದರು ಇದಕ್ಕೂ ಮುನ್ನ ಸಾಮಾಜಿಕ ಜಾಲತಾಣದ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಮೋದಿಯವರು ಗಾಂಧಿ ಜಯಂತಿಯು ಬಾಪು ಅವರ ಅಸಾಧಾರಣ ಜೀವನಕ್ಕೆ ಗೌರವ ಸಲ್ಲಿಸುವುದಾಗಿದೆ ಅವರ ಆದರ್ಶಗಳು ಮಾನವ ಇತಿಹಾಸದ ಹಾದಿಯನ್ನು ಪರಿವರ್ತಿಸಿದವು ಧೈರ್ಯ ಮತ್ತು ಸರಳತೆಗೆ ಹೇಗೆ ದೊಡ್ಡ ಬದಲಾವಣೆಯ ಸಾಧನಗಳಾಗಬಹುದು ಎಂಬುದನ್ನು ಅವರು ತೋರಿಸಿಕೊಟ್ಟರು ಸೇವೆ ಮತ್ತು ಕರುಣೆ ಜನರನ್ನು ಸಬಲೀಕರಣ ಗೊಳಿಸುವ ಅಗತ್ಯ ಸಾಧನ ಎಂದು ನಂಬಿದ್ದರು ವಿಕಸಿತ ಭಾರತವನ್ನು ನಿರ್ಮಿಸುವ ನಮ್ಮ ಅನ್ವೇಷಣೆಯಲ್ಲಿ ನಾವು ಅವರ ಮಾರ್ಗವನ್ನು ಅನುಸರಿಸುತ್ತೇವೆಂದು ಹೇಳಿದರು ಮತ್ತೊಂದು ಪೋಸ್ಟ್ ನಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ನೆನೆದು ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದಂದು ಗೌರವ್ಯೂಹ ನಮನಗಳನ್ನು ತಿಳಿಸಿದ್ದಾರೆ
ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ ಜಿ.ಪರಮೇಶ್ವರ-* ತುಮಕೂರು:-ಮುಖ್ಯಮಂತ್ರಿ ಸಿದ್ದರಾಮಯ್ಯ 5 ವರ್ಷಗಳ ಅವಧಿಗೆ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುತ್ತಾರೆ ಸದ್ಯ ಸುದ್ದಿಯಾಗಿರುವಂತೆ ರಾಜ್ಯದಲ್ಲಿ ಯಾವುದೇ ರಾಜಕೀಯ ಕ್ರಾಂತಿಯಾಗುವುದಿಲ್ಲ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಗೃಹ ಸಚಿವ ಪರಮೇಶ್ವರ್ ಅವರು ಗುರುವಾರ ಹೇಳಿದ್ದಾರೆ. ಬದಲಾವಣೆ ಆಗುತ್ತದೆ ಎಂದು ಯಾರು ಹೇಳಿದರು ನೀವು ವರದಿಗಾರ ಹೇಳಿದಂತೆ ಅದು ವದಂತಿ ಸಿದ್ದರಾಮಯ್ಯ ಸದ್ಯ ಮುಖ್ಯಮಂತ್ರಿಯಾಗಿದ್ದಾರೆ ಮತ್ತು ಅವರು ಮುಖ್ಯಮಂತ್ರಿಯಾಗಿಯೇ ಇರುತ್ತಾರೆ ಅವರು ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಭಾವಿಸುತ್ತೇವೆ ಅವರೇ ಸಿದ್ದರಾಮಯ್ಯ ಅದನ್ನು ಹೇಳಿದ್ದಾರೆ ಎಂದು ಪರಮೇಶ್ವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಬದ್ದನಾಗಿರುತ್ತೇನೆ ಎಂದು ಸಿದ್ದರಾಮಯ್ಯ ಸ್ವತಃ ಹೇಳಿದ್ದಾರೆ ಯಾವುದೇ ಕ್ರಾಂತಿ ಇರುವುದಿಲ್ಲ ಎಲ್ಲವೂ ಶಾಂತಿಯುತವಾಗಿರುತ್ತದೆ ಎಂದು ಅವರು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. ತುಮಕೂರು:-ಮುಖ್ಯಮಂತ್ರಿ ಸಿದ್ದರಾಮಯ್ಯ 5 ವರ್ಷಗಳ ಅವಧಿಗೆ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುತ್ತಾರೆ ಸದ್ಯ ಸುದ್ದಿಯಾಗಿರುವಂತೆ ರಾಜ್ಯದಲ್ಲಿ ಯಾವುದೇ ರಾಜಕೀಯ ಕ್ರಾಂತಿಯಾಗುವುದಿಲ್ಲ ಹಿರಿಯ ಕಾಂಗ್ರೆಸ್ ನಾಯಕ ಮತ್ತು…
ಬಿಜೆಪಿ ಮತ್ತು ಸಂಘಪರಿವಾರದ ವಿರುದ್ದ ಸಿದ್ದರಾಮಯ್ಯ ಆಕ್ರೋಶಬೆಂ ಗಳೂರು:- ಬಿಜೆಪಿ ಮತ್ತು ಸಂಘಪರಿವಾರದ ವಿರುದ್ದ ನಿರಂತರ ಧ್ವನಿಯೆತ್ತುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಎದೆಗೆ ಗುಂಡು ಹೊಡೆಯುತ್ತೇವೆ ಹುಷಾರ್ ಎಂದು ಬಿಜೆಪಿ ವಕ್ತಾರರೊಬ್ಬರು ಬಹಿರಂಗವಾಗಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು ನೋಡಿದರೆ ಹೇಳಿಕೆಯ ಬಗ್ಗೆ ಅವರಿಗೂ ಸಮ್ಮತಿ ಇದೆಯೇ ಎಂಬ ಪ್ರಶ್ನೆ ಸಹಜವಾಗಿ ಎಲ್ಲರಲ್ಲೂ ಮೂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಸಂಘಪರಿವಾರದ ದುರುಳರಿಂದ ಪ್ರಾಣ ಕಳೆದುಕೊಂಡವರು ಒಬ್ಬರಾ? ಇಬ್ಬರಾ? ಮಹಾತ್ಮಾ ಗಾಂಧಿಯವರಿಂದ ಆರಂಭಗೊಂಡ ಈ ಹತ್ಯಾ ಸರಣಿ ಗೋವಿಂದ ಪನ್ಸಾರೆ ನರೇಂದ್ರ ದಾಬೋಲ್ಕರ್ ಎಂ.ಎಂ ಕಲಬುರ್ಗಿ ಗೌರಿ ಲಂಕೇಶ್ ಹೀಗೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ ಇವರೆಲ್ಲರ ಕೊಲೆಗಾರರಿಗೂ ತಮಗೂ ಸಂಬಂಧವಿಲ್ಲವೆಂದು ಹೇಳಿ ಸಂಘಪರಿವಾರದ ನಾಯಕರು ಸುಲಭದಲ್ಲಿ ತಲೆತೊಳೆದುಕೊಂಡರೂ ಅವರ ಕೈಗಳಿಗಂಟಿದ ರಕ್ತದ ಕಲೆಗಳನ್ನು ತೊಳೆಯಲಾಗಲಿಲ್ಲ ಎಂದು ವಾಗ್ದಳಿ ನಡೆಸಿದ್ದಾರೆ. ಈ ಹಿಂದೆ…
ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಖರ್ಗೆ ಬೆಂಗಳೂರು:- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಮಲ್ಲಿಕಾರ್ಜುನ ಖರ್ಗೆ ನಿನ್ನೆ ರೆಗ್ಯುಲರ್ ಚಕಪ್ ಗೆ ಆಸ್ಪತ್ರೆಗೆ ತೆರಳಿದ್ದರು ಕೆಲ ಆರೋಗ್ಯ ತಪಾಸಣೆ ಬಳಿಕ ನಿನ್ನೆ ರಾತ್ರಿಯಿಂದ ಆಸ್ಪತ್ರೆಯಲ್ಲಿ ಖರ್ಗೆ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ ಬಿಹಾರ ಚುನಾವಣೆ ಸರಣಿ ಪ್ರವಾಸದ ಓಡಾಟ ಹೆಚ್ಚಿದ ಹಿನ್ನೆಲೆ ಇದರಿಂದ ಆಯಾಸಗೊಂಡಿದ್ದರು ಎನ್ನಲಾಗುತ್ತಿದೆ ಅನಾರೋಗ್ಯದ ಕಾರಣದಿಂದ ಉಸಿರಾಟದ ಸಮಸ್ಯೆ ಉಂಟಾಗಿದೆ ಎಂದು ರದಿಯಾಗಿದೆ
ಕುದ್ರೋಳಿ ದಸರಾ , ಪಿಲಿ ನಲಿಕೆ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು:- ಕರ್ನಾಟಕ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಯಾಗಿರುವ ಶ್ರೀ ಡಿಕೆ ಶಿವಕುಮಾರ್ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ ಅಪರಾಹ್ನ 2.55 ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಡಿಸಿಎಂ 3.45 ಕ್ಕೆ ಕುದ್ರೋಳಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು ಬಳಿಕ ಸಂಜೆ 5 ಗಂಟೆಗೆ ನಗರದ ಮಂಗಳಾ ಸ್ಟೇಡಿಯಂನಲ್ಲಿ ಮಿಥುನ್ ರೈ ನೇತ್ರತ್ವದಲ್ಲಿ ನಡೆಯುವ ಪಿಲಿನಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ರಾತ್ರಿ 7.15 ಕ್ಕೆ ಬೆಂಗಳೂರು ನಿರ್ಗಮಿಸುವವರು ಎಂದು ಪ್ರಕಟಣೆ ತಿಳಿಸಿದೆ


