Subscribe to Updates
Get the latest creative news from FooBar about art, design and business.
Author: PrasakthaNews
ಕರಾವಳಿ ಜಿಲ್ಲೆಯ ಕಾಂಗ್ರೆಸ್ ಪ್ರಬಲ ನಾಯಕ ಎಂ.ಎಸ್ ಮಹಮ್ಮದ್ ಅವರಿಗೆ ತಪ್ಪಿದ ಅವಕಾಶ, ಜಿಲ್ಲೆಯಲ್ಲಿ ಭುಗಿಲೆದ್ದ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ-ಮಂಗಳೂರು:- ಕರ್ನಾಟಕ ಸರಕಾರದ ನಿಗಮ ಮಂಡಳಿಯ ವಿವಿಧ ಅಧ್ಯಕ್ಷರ ಆಯ್ಕೆ ನಡೆದಿದ್ದು ವಿಶೇಷವಾಗಿ ಕರಾವಳಿ ಜಿಲ್ಲೆಗೆ 5 ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ದೊರಕಿದ್ದು ಈ ಮಧ್ಯೆ ಕಾಂಗ್ರೆಸ್ ಪಕ್ಷದ ಪ್ರಬಲ ನಾಯಕ ದಿನದ 24 ಗಂಟೆಯು ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ಮಾಡುವ ಪ್ರಾಮಣಿಕ ಪಕ್ಷ ಸಂಘಟಕ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್ ಅವರಿಗೆ ನಿಗಮ ಮಂಡಳಿಯಲ್ಲಿ ಅವಕಾಶ ನೀಡದಿರುವುದರ ಬಗ್ಗೆ ಕರಾವಳಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಎಂ.ಎಸ್ ಮಹಮ್ಮದ್ ಅವರು ಸಣ್ಣ ವಯಸ್ಸಿನಲ್ಲಿ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಪ್ರವೇಶಿಸಿ ದ.ಕ.ಜಿಲ್ಲೆಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ವಿಟ್ಲ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ದ.ಕ.ಜಿಲ್ಲೆಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ದ.ಕ.ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ ಸತತ 3 ಭಾರಿ ಜಿಲ್ಲಾ…
ವಿಟ್ಲ- ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೋಲಿಸರು ಬಂಧಿಸಿರುವ ಘಟನೆ ವಿಟ್ಲ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೆ 22 ರಂದು ದೂರುದಾರರು ಮನೆಯಿಂದ ಕೆಲಸಕ್ಕೆ ಹೋಗಿದ್ದ ಸಮಯ ಮನೆಯಲ್ಲಿದ್ದ ಅಪ್ರಾಪ್ತ ವಯಸ್ಸಿನ ಮಗಳಿಗೆ ಬಂಟ್ವಾಳ ತಾಲೂಕಿನ ನಾರಾಯಣ (42ವ) ಎಂಬಾತ ಲೈಂಗಿಕ ಕಿರುಕುಳ ನೀಡಿರುವ ಕುರಿತು ನೀಡಿರುವ ದೂರಿಗೆ ಸಂಬಂಧಿಸಿದಂತೆ ವಿಟ್ಲ ಪೋಲಿಸ್ ಠಾಣೆಯಲ್ಲಿ ದಿನಾಂಕ 22-09- 2025 ರಂದು ಅಕ್ರ 133/2025 ಕಲಂ 7,8 POSCSO Act 2012 ಮತ್ತು 329( 4) 75 BNS -2023 ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ
ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ!ಮಂಗಳೂರು:- ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಭದ್ರಕೋಟೆ ಎಂದೇ ಗುರುತಿಸಿಲ್ಪಡುತ್ತಿದ್ದ ಕರಾವಳಿ ಜಿಲ್ಲೆ ಕಳೆದ ಕೆಲವು ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಾಗಿ ಗುರುತಿಸಿದೆಇದಕ್ಕೆ ಕಾರಣ ಹುಡುಕಿಕೊಂಡು ಹೋದರೆ ಹಲವಾರು ಕಾರಣಗಳು ಇವೆ ಎಂಬುದು ವಾಸ್ತವಕೇಂದ್ರದ ಮಾಜಿ ಸಚಿವರಾದ ಬಿ ಜರ್ನಾಧನ ಪೂಜಾರಿ, ಆಸ್ಕರ್ ಪೇರ್ನಾಂಡಿಸ್, ಮಾಜಿ ಸಚಿವರಾದ ಬಿ ರಮಾನಾಥ್ ರೈ, ವಿನಯಕುಮಾರ್ ಸೊರಕೆ, ಆಭಯಚಂದ್ರ ಜೈನ್ ಇವರು ಶಾಸಕರಾಗಿ ಸಚಿವರಾಗಿದ್ದ ಸಮಯದಲ್ಲಿ ಕರಾವಳಿಯಲ್ಲಿ ಕಾಂಗ್ರೆಸ್ ಭದ್ರವಾಗಿ ಅಧಿಕಾರದಲ್ಲಿ ಇರುವ ಮೂಲಕ ಬಲಿಷ್ಟವಾಗಿತ್ತು.ಯಾವಾಗ ಇವರು ಕರಾವಳಿ ಜಿಲ್ಲೆಯಲ್ಲಿ ಸೋತರೂ ಆವಾಗಿಂದ ಈವರೆಗೆ ಕರಾವಳಿ ಜಿಲ್ಲೆಯಲ್ಲಿ ಕಾಂಗ್ರೆಸ್ ಸಾಧನೆ ಅಷ್ಟಕಷ್ಟೇ ಎಂಬುದು ಕಾಂಗ್ರೆಸ್ ಕಾರ್ಯಕರ್ತರ ಬೇಸರಕ್ಕೆ ಕಾರಣವಾಗಿದೆ.ಕರಾವಳಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಕೆಲಸ ಮಾಡಿದ ದಿ. ಬ್ಲೇಸಿಯಸ್ ಡಿಸೋಜ , ಮಾಜಿ ಸಚಿವ ಬಿ ರಮಾನಾಥ್ ರೈ ಇವರ ಅವಧಿಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಟವಾಗಿತ್ತು ಎಂಬುದು ಸತ್ಯವಾಗಿದೆ.ರಮಾನಾಥ್ ರೈ ಅವರು ಸಚಿವರಾದ ನಂತರ…
ಮಂಗಳೂರು:- ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ದ.ಕ.ಜಿಲ್ಲೆಯ ಆಶಾ ಕಾರ್ಯಕರ್ತೆಯರು ಭಾಗವಹಿಸದಿರಲು ತೀರ್ಮಾನಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ ಈ ಹಿಂದೆ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯ ಸಮೀಕ್ಷೆಗೆ 1 ಸಾವಿರ ರೂ ನೀಡುವುದಾಗಿ ಹೇಳಿ ಬಳಿಕ ಯಾವುದೇ ಒಂದು ಪೈಸೆಯನ್ನು ನೀಡಿಲ್ಲ ಈಗಾಗಿ ಈ ಭಾರಿಯ ಸಾಮಾಜಿಕ ಸಮೀಕ್ಷೆಯಲ್ಲಿ ಭಾಗವಹಿಸದಿರಲು ದ.ಕ.ಜಿಲ್ಲೆಯ ಆಶಾ ಕಾರ್ಯಕರ್ತೆಯರು ನಿರ್ಧಾರ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ
ಪುತ್ತೂರು:- ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ನೂತನ ಕಾರ್ಯಾಧ್ಯಕ್ಷರು ಕಾಂಗ್ರೆಸ್ ಪಕ್ಷದ ಜನಪ್ರಿಯ ನಾಯಕಿ ಪಕ್ಷದ ಸಂಘಟಕರು ವಿದ್ಯಾವಂತ ಯುವ ನಾಯಕಿ ಆಗಿರುವ ಶ್ರೀಮತಿ ಚಂದ್ರಪ್ರಭಾ ಗೌಡ ಇವರ ಪದಗ್ರಹಣ ಸಮಾರಂಭವು ಸೆ.21 ಭಾನುವಾರ ದಿವಸ ಪುತ್ತೂರು ಕಾಂಗ್ರೆಸ್ ಕಚೇರಿಯ ಮೇಲ್ಚಾವಣಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪಧಾದಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ, ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಟಿ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕೃಷ್ಣಪ್ರಸಾದ್ ಆಳ್ವ, ದಕ್ಷಿಣ ಕನ್ನಡ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಕುಮಾರಿ ಅಪ್ಪಿ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ಶ್ರೀಮತಿ ಉಷಾ ಅಂಚನ್, ಉದ್ಯಮಿಯಾದ ಶ್ರೀಮತಿ ಸುಮಾ ಅಶೋಕ್ ರೈ, ಮಾಜಿ ಜಿ.ಪಂ.ಸದಸ್ಯರಾದ ಶ್ರೀಮತಿ ಅನಿತಾ ಹೇಮನಾಥ್ ಶೆಟ್ಟಿ, ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್…
ಕರ್ನಾಟಕ ರಾಜ್ಯದ ಶಾಲಾ ಮಕ್ಕಳಿಗೆ 2025 ರ ಸೆಪ್ಟೆಂಬರ್ 20 ಇಂದಿನಿಂದ ದಸರಾ ರಜೆ ಆರಂಭವಾಗಲಿದೆ. ಈ ರಜೆಯು ಸೆಪ್ಟೆಂಬರ್ ನಿಂದ ಅಕ್ಟೋಬರ್ ವರೆಗೆ ಒಟ್ಟು 18 ದಿನಗಳವರೆಗೆ ಇರಲಿದೆ. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ಈ ಬಗ್ಗೆ ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಿದ್ದು ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ರಜೆಗಳು ಮತ್ತು ಶಾಲಾ ಚಟುವಟಿಕೆಗಳ ಸಂಪೂರ್ಣ ವೇಳಾಪಟ್ಟಿಯನ್ನು ಘೋಷಿಸಿದೆ ಈ ವೇಳಾಪಟ್ಟಿಯ ಪ್ರಕಾರ ದಸರಾ ರಜೆಯು ಸೆಪ್ಟೆಂಬರ್ 20. 2025 ರಿಂದ ಆರಂಭವಾಗಿ ಅಕ್ಟೋಬರ್ 7. 2025 ರವರೆಗೆ ಮುಂದುವರಿಯಲಿದೆ. ಈ ಅವಧಿಯಲ್ಲಿ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ..
ದಿನಾಂಕ 19/09/2025ರಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು ಹಾಗೂ ತಾಲೂಕು ಪಂಚಾಯತ್ ಬಂಟ್ವಾಳ, ವತಿಯಿಂದ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಬಂಟ್ವಾಳ ಉಪವಿಭಾಗ, ಪೂಂಜಾಲಕಟ್ಟೆ ಪೊಲೀಸ್ ಠಾಣೆ ಸಹಯೋಗದೊಂದಿಗೆ ವಾಮದಪದವು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯ ವ್ಯಸನ ಮುಕ್ತ ಸಮಾಜ ಜನಜಾಗೃತಿ ಕಾರ್ಯಕ್ರಮ, ನಶಮುಕ್ತ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು ಅಧ್ಯಕ್ಷರಾದ ಜಯಂತಿ ವಿ.ಪೂಜಾರಿ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಧರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಚಿನ್ ಕುಮಾರ್, ಸಂಪನ್ಮೂಲ ವ್ಯಕ್ತಿಗಳಾಗಿ ವಕೀಲರಾದ ಅಶ್ವಿನ್ ಕುಮಾರ್ ರೈ, ಆಶಾಮಣಿ ರೈ ಭಾಗವಹಿಸಿದ್ದರು. ಪೂಂಜಾಲಕಟ್ಟೆ ಪೊಲೀಸ್ ಠಾಣೆ ಎಎಸ್‌ಐ ಚೋಮ, ಸಿಬ್ಬಂದಿಗಳಾದ ಶಿವಕುಮಾರ್, ಲತಾ, ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ಸುಧಾಕರ ಪ್ರಭು ಸ್ವಾಗತಿಸಿ, ವಂದಿಸಿದರು.
ಕಡಬ:- ಪ್ರತಿಷ್ಠಿತ ಕಡಬ ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ ಹೊರಬೀಳುವ ಮೂಲಕ ಕಾಂಗ್ರೆಸ್ ಪಕ್ಷ 13 ಸ್ಥಾನಗಳಲ್ಲಿ 8 ಸ್ಥಾನ ಪಡೆಯುವ ಮೂಲಕ ಪಟ್ಟಣ ಪಂಚಾಯತ್ ನಲ್ಲಿ ಮೊದಲ ಭಾರಿಗೆ ಅಧಿಕಾರದ ಗದ್ದುಗೆ ಏರಲಿದೆ ಇತ್ತ ಕಾಂಗ್ರೆಸ್ ಪಕ್ಷದ ಉಸ್ತುವಾರಿಗಳಾಗಿ ನಿರಂತರವಾಗಿ ಕಡಬ ಪಟ್ಟಣದಲ್ಲಿ 15 ದಿವಸ ಪಕ್ಷದ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಬೇಕಾದ ಎಲ್ಲಾ ರಣತಂತ್ರ ರೂಪಿಸಿ ಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್ ಹಾಗೂ ದ.ಕ.ಜಿಲ್ಲಾ ಕಾಂಗ್ರೆಸ್ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷರಾದ ಶ್ರೀ ಸುಭಾಷ್ ಚಂದ್ರ ಶೆಟ್ಟಿ ಕುಳಾಲು ಅವರ ಕೆಲಸ ಕಾರ್ಯಗಳಿಗೆ ಕಾಂಗ್ರೆಸ್ ಪಕ್ಷ ಹಾಗೂ ಕಾರ್ಯಕರ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಹಾಗೂ ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿ ಸೂಚನೆ ಮೇರೆಗೆ *ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್* ಸಮಿತಿಯ ಅಧ್ಯಕ್ಷರಾದ *ಇಬ್ರಾಹಿಂ ನವಾಝ್* ಅವರ ನೇತೃತ್ವದಲ್ಲಿ ಮಲ್ಲಿಕಟ್ಟೆ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರುಗಡೆ ರಾಷ್ಟ್ರ ವ್ಯಾಪಿ ನಡೆಯುತ್ತಿರುವಂತಹ *”ಸ್ಟಾಪ್ ವೋಟ್ ಚೂರಿ”* ಸ್ಟಿಕರ್ ಅಭಿಯಾನಕ್ಕೆ ಮಾಜಿ ಶಾಸಕ ಜಿ.ಆರ್. ಲೋಬೊರವರು ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಕೆಪಿಸಿಸಿ ವಕ್ತಾರರಾದ ಎಂ. ಜಿ ಹೆಗ್ಡೆ, ಪಾಲಿಕೆ ಮಾಜಿ ಸದಸ್ಯ ನವೀನ್ ಡಿಸೋಜ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಟಿಕೆ ಸುದೀರ್, ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಮೊಹಮ್ಮದ್ ಬಶೀರ್ , ದೀಕ್ಷಿತ್ ಅತ್ತಾವರ್, ವೆಲ್ವಿನ್ ಜೇಸನ್ ಕ್ಯಾಸ್ಟಲೀನೋ, ಪೃಥ್ವಿರಾಜ್ ಪೂಜಾರಿ , ಮುಫೀದ್ ಗುರುಪುರ, ಮಂಗಳೂರು ದಕ್ಷಿಣ ವಿಧಾನ ಸಭಾ NSUI ಅಧ್ಯಕ್ಷ ಕ್ರಿಸ್ಟನ್ ಮೆನೇಜಸ್, ಫೈಝಲ್ ಮರಕಡ, ಸಮರ್ಥ್ ಭಟ್ ಹಾಗೂ ಪದಾಧಿಕಾರಿಗಳು ಇನ್ನಿತರರು ಉಪಸ್ಥಿತರಿದ್ದರು.
ದ.ಕ.ಜಿ.ಪಂ.ಹಿ.ಪ್ರಾಥಮಿಕ ಶಾಲೆ ನಾರ್ಶ ಮೈದಾನದಲ್ಲಿ ಬಹಳಷ್ಟು ವಿಜೃಂಭಣೆಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಶಾಲೆಗೆ ಹೊಸದಾಗಿ ಕೈತೋಟ ರಚನೆ ಕಾರ್ಯಕ್ರಮ ನಡೆಯಿತು, ಕಾರ್ಯಕ್ರಮವು ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಅಬ್ದುಲ್ ಖಾದರ್ ನಾರ್ಶ ಇವರ ಅಧ್ಯಕ್ಷತೆಯಲ್ಲಿ ನಡೆಯಿತು, ಬಿಳಿಗ್ಗೆ 9:15 ಗಂಟೆಗೆ ಧ್ವಜಾರೋಹಣ ಮತ್ತು ಮಕ್ಕಳಿಗೆ ಶೂಸ್ ವಿತರಣೆ ಕಾರ್ಯಕ್ರಮ ಮತ್ತು ಶಾಲೆಗೆ ಕೈತೋಟ ರಚನೆಯ ಆರಂಭಿಕ ಕಾರ್ಯಕ್ರಮ ನಡೆಯಿತು, ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶಂಕರ್ ಮಾಸ್ಟರ್,ಮಾಜಿ ಅಧ್ಯಕ್ಷರಾದ ಹಮೀದ್ ನಾರ್ಶ, ಯಾಕುಬ್ ನಾರ್ಶ, ಹಳೆಯ ವಿಧ್ಯಾರ್ಥಿ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಸೆರ್ಕಳ, ಕೆ.ಪಿ ಬೈಲ್ ಮಸೀದಿಯ ಅಧ್ಯಕ್ಷರಾದ ರಫೀಕ್ ಪವಿತ್ರ, ಅಕ್ಷಯ ಚಾರಿಟಿಯ ಕರೀಂ ಕದ್ಕಾರ್, ಶಾಕೀರ್ ಬಡಕಬೈಲ್, ಸಹ ಶಿಕ್ಷಕರು, ಶಾಲಾಭಿವೃದ್ದಿ ಸಮಿತಿ ಸದಸ್ಯರು, ಹಳೆಯ ವಿಧ್ಯಾರ್ಥಿಗಳು, ಮಕ್ಕಳ ಹೆತ್ತವರು, ಊರಿನ ನಾಗರಿಕರು ಭಾಗವಹಿಸಿದರು….


