Author: PrasakthaNews

Kannada news website from coastal Karnataka

ದ.ಕ.ಮತ್ತು ಉಡುಪಿ ಜಿಲ್ಲಾ ದಫ್ ಅಸೋಸಿಯೇಷನ್ ಅಧ್ಯಕ್ಷ ಲತೀಫ್ ನೇರಳಕಟ್ಟೆ* ವಿಟ್ಲ : ಬ್ಯಾರಿ ಜನಾಂಗ ಪ್ರಾಚೀನ ಕಾಲದಿಂದಲೂ ನೆಚ್ಚಿಕೊಂಡು ಬಂದಿರುವ ಸಾಂಸ್ಕೃತಿಕ ಕಲೆಯಾಗಿದೆ ದಫ್ ಕಲೆ ಎಂದು ದ.ಕ.ಮತ್ತು ಉಡುಪಿ ಜಿಲ್ಲಾ ದಫ್ ಅಸೋಸಿಯೇಷನ್ ಅಧ್ಯಕ್ಷ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಲತೀಫ್ ನೇರಳಕಟ್ಟೆ ಅಭಿಪ್ರಾಯಪಟ್ಟರು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ವಿಟ್ಲ ಸಮೀಪದ ಒಕ್ಕೆತ್ತೂರು ನೂರುಲ್ ಹುದಾ ಸಮುದಾಯ ಭವನದಲ್ಲಿ ಗುರುವಾರ ನಡೆದ ಬಂಟ್ವಾಳ ತಾಲೂಕು ಮಟ್ಟದ ದಫ್ ಸ್ಪರ್ದಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಒಂದು ಜನಾಂಗದ ಅಳಿವು – ಉಳಿವು ಅವರ ಭಾಷೆ , ಸಾಹಿತ್ಯ, ಸಂಸ್ಕೃತಿಯ ಬಳಕೆಯನ್ನು ಅವಲಂಬಿಸಿರುತ್ತದೆ ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಒಕ್ಕೆತ್ತೂರು ಬದ್ರಿಯಾ ಜುಮಾ ಮಸೀದಿ ಖತೀಬ್ ಮಹಮ್ಮದ್ ರಫೀಕ್ ಅಹ್ಸನಿ ಮಾತನಾಡಿ, ದಫ್ ಕಲೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬ್ಯಾರಿ ಅಕಾಡೆಮಿ ಹಮ್ಮಿಕೊಂಡಿರುವ ಇಂತಹ ದಫ್ ಸ್ಪರ್ದಾ ಕಾರ್ಯಕ್ರಮಗಳು ಶ್ಲಾಘನೀಯ, ಅಕಾಡೆಮಿ ಅಧ್ಯಕ್ಷ…

Read More

ಸಿಎಂ ಸಿದ್ದರಾಮಯ್ಯ ಸಂತಾಪ ಬೆಂಗಳೂರು:- ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು 14 ರ ಸಂಜೆ ವಿಧಿವಶರಾಗಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ 94 ವರ್ಷದ ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆಯಲ್ಲಿ ಇಂದು ದಾವಣಗೆರೆ ನಗರ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಜಿ.ಎಂ ಗಂಗಾಧರಸ್ವಾಮಿ ರಜೆ ಘೋಷಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರ ಈಗಾಗಲೇ ದಾವಣಗೆರೆ ತಲುಪಿದ್ದು ಎಸ್ ಎಸ್ ಮಲ್ಲಿಕಾರ್ಜುನ ಅವರ ಮನೆಯಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಇಡಲಾಗುತ್ತದೆ ಸ್ಕೂಲ್ ಮೈದಾನದಲ್ಲಿ ಸಂಜೆ 4 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ಸಂಜೆಯೊಳಗೆ ಕಲ್ಲೇಶ್ವರ ರೈಸ್ ಮಿಲ್ ಜಾಗದಲ್ಲಿ ವೀರಶೈವ ಲಿಂಗಾಯುತ ಸಂಪ್ರದಾಯದಂತೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ ನಡೆಸಲಾಗುತ್ತದೆ.…

Read More

ಇಬ್ಬರು ಮಂಗಳೂರಿನ ಆಸ್ಪತ್ರೆಗೆ ರವಾನೆ ವಿಟ್ಲ:- ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಮಾಣಿಲ ರಸ್ತೆಯ ಮುಳಿಯ ಎಂಬಲ್ಲಿ ನಡೆದಿದೆ. ಘಟನೆಯ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಕೇಪು ಗ್ರಾಮದ ಕುಕ್ಕೆಬೆಟ್ಟು ಮೋನಪ್ಪ ಕುಳಾಲ್ ಯಾನೆ ಅಣ್ಣು ಕುಲಾಲ್ (65) ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇನ್ನುಳಿದ ಇಬ್ಬರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ

Read More

ಮುಖ್ಯಮಂತ್ರಿಗಳಿಂದ ಕೆಐಎಡಿಬಿ ಹೊಸ ಬಹುಮಹಡಿ ಕಟ್ಟಡ ಉದ್ಘಾಟನೆ ಬೆಂಗಳೂರು: ನಗರದ ಗಾಂಧಿನಗರದಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹೊಸ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಶುಕ್ರವಾರ ಉದ್ಘಾಟಿಸಿದರು. ಗಾಂಧಿನಗರದ ಆಚಾರ್ಯ ತುಳಸಿ ಮಾರ್ಗದಲ್ಲಿ ರೂ 32 ಕೋಟಿ ವೆಚ್ಚದಲ್ಲಿ ಈ ಬಹುಮಹಡಿ ಕಟ್ಟಡವನ್ನು ನಿರ್ಮಿಸಲಾಗಿದೆ. ಒಟ್ಟು 2,618 ಚದರ ಮೀಟರ್ ಅಳತೆಯ ನಿವೇಶನದಲ್ಲಿ ತಲೆಯೆತ್ತಿರುವ ಈ ಕಟ್ಟಡವು ಎರಡು ನೆಲ ಅಂತಸ್ತುಗಳು, ನೆಲ ಅಂತಸ್ತು, ಐದು ಮಹಡಿಗಳು ಹಾಗೂ ತಾರಸಿ ಮಹಡಿಯನ್ನು ಒಳಗೊಂಡಿದೆ. ಲೋಯರ್ ಬೇಸ್ ಮೆಂಟ್ ನಲ್ಲಿ 58 ಕಾರುಗಳು ಹಾಗೂ ಅಪ್ಪರ್ ಬೇಸ್ ಮೆಂಟ್ ನಲ್ಲಿ 38 ಕಾರುಗಳ ನಿಲುಗಡೆಗೆ ಜಾಗ ಕಲ್ಪಿಸಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಈ ಸಂದರ್ಭದಲ್ಲಿ ಇದ್ದರು. ಇದೇ ವೇಳೆ, ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ ಅವರು ಕೆ.ಐ.ಎ.ಡಿ.ಬಿ.ಯ ರೂ 2 ಕೋಟಿ ಲಾಭಾಂಶವನ್ನು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗೆ ಹಸ್ತಾಂತರಿಸಿದರು. ಹಿಂದೆ…

Read More

ಯು.ಇ.ಎ. ವತಿಯಿಂದ ಕಬಡ್ಡಿ, ವಾಲಿಬಾಲ್ ಆಟಗಾರರ ಆಯ್ಕೆ ಪಂದ್ಯಾಟ ಮಂಗಳೂರು : ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ ವತಿಯಿಂದ 2026 ಜನವರಿ 26 ರಿಂದ ಫೆಬ್ರವರಿ 01 ರ ತನಕ ವೈಟ್ ಸ್ಟೋನ್ ಪ್ರೀಮಿಯಂ ಕಮ್ಯೂನಿಟಿ ಫೆಸ್ಟ್ ಇದರ ಅಂಗವಾಗಿ ಉಳ್ಳಾಲದ ಸೀ ಗ್ರೌಂಡ್ ನಲ್ಲಿ ನಡೆಯಲಿರುವ ಅಲ್ ಮುಝೈನ್ ಯುನೈಟೆಡ್ ಕಬಡ್ಡಿ ಲೀಗ್ ಹಾಗೂ ಎಕ್ಸಪರ್ಟೀಸ್ ಯುನೈಟೆಡ್ ವಾಲಿಬಾಲ್ ಲೀಗ್ ಪಂದ್ಯಾಟದ ಪೂರ್ವಭಾವಿಯಾಗಿ ಆಟಗಾರರ ಆಯ್ಕೆ ಪ್ರಕ್ರಿಯೆಯು ನಾಟೆಕಲ್ ನ ಗ್ರಿಫ್ಫಿನ್ಸ್ ಪ್ಲೇಸ್ ನಲ್ಲಿ ಶುಕ್ರವಾರ ಸಂಜೆ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ ರಾಜ್ಯ ಕಾರ್ಯದರ್ಶಿ ಇಮ್ತಿಯಾಜ್ ಗೋಳ್ತಮಜಲು ಮಾತನಾಡಿ, ಕ್ರೀಡೆಯ ಮೂಲಕ ಮಾದಕ ವ್ಯಸನ ಮುಕ್ತ ಸಮಾಜದ ನಿರ್ಮಾಣದ ಪ್ರಯತ್ನಕ್ಕೆ ಮುಂದಡಿ ಇಟ್ಟಿದ್ದೇವೆ. “ಪ್ರಯತ್ನ ನಮ್ಮದು, ಸಹಕಾರ ನಿಮ್ಮದು” ಈ ನಿಟ್ಟಿನಲ್ಲಿ ಕ್ರೀಡಾ ಪಟುಗಳು ಹಾಗೂ ಸಾರ್ವಜನಿಕರ ಸಹಕಾರ ಅತೀ ಅಗತ್ಯ ಎಂದ ಅವರು ಅಸೋಸಿಯೇಷನ್ ನ ಧ್ಯೇಯೋದ್ದೇಶಗಳು ಹಾಗೂ ಮುಂದಿನ ಗುರಿಯ ಬಗ್ಗೆ ವಿವರಿಸಿದರು.…

Read More

ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್ ಅವರಿಂದ ಶೋಕಾಸ್ ನೋಟಿಸ್ ಜಾರಿ ಬೆಂಗಳೂರು:- ಕಾಂಗ್ರೆಸ್ ನಲ್ಲಿ ಕಳೆದ ಕೆಲ ತಿಂಗಳಿನಿಂದ ಸಿಎಂ ಗದ್ದುಗೆ ಗುದ್ದಾಟ ಮೀತಿ ಮೀರಿದೆ ಸಿಎಂ- ಡಿಸಿಎಂ‌ ಬ್ರೇಕ್ ಪಾಸ್ಟ್ ಸಭೆ ಮಾಡಿ ಸಂಧಾನ ಮಾಡಿದ್ರೂ ಇದು ನಿಲ್ಲದಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಜ್ಯಕ್ಕೆ ಭೇಟಿ ನೀಡಿದ್ದ ವೇಳೆ ಸಿಎಂ ಘೋಷಣೆ ಕೂಗಿದ್ದವರಿಗೆ ಎಐಸಿಸಿ ಶಾಕ್ ನೀಡಿದೆ. ನಾರಾಯಣ ಗುರು ಹಾಗೂ ಮಹಾತ್ಮ ಗಾಂಧಿ ನಡುವಿನ ಸಂವಾದದ ಶತಮಾನೋತ್ಸವ ಕಾರ್ಯಕ್ರಮ ಇತ್ತೀಚೆಗೆ ಮಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕೆ.ಸಿ ವೇಣುಗೋಪಾಲ್ ಕೇರಳದಿಂದ ಮಂಗಳೂರಿಗೆ ಆಗಮಿಸಿದ್ದರು ವೇಣುಗೋಪಾಲ್ ಮಂಗಳೂರು ವಿಮಾನ ನಿಲ್ದಾಣದಿಂದ ಆಚೆ ಬರುತ್ತಿದ್ದಂತೆಯೇ ಕಾಂಗ್ರೆಸ್ ಮುಖಂಡ ಮಿಥುನ್ ರೈ ಹಾಗೂ ಅವರ ಬೆಂಬಲಿಗರು ಡಿಕೆಶಿ ಪರವಾಗಿ ಡಿಕೆ ಡಿಕೆ ಎಂದು ಘೋಷಣೆ ಕೂಗಿದ್ದಲ್ಲದೇ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಬೇಕೆಂದು ಆಗ್ರಹಿಸಿದ್ರು ಸಿಎಂ ಡಿಸಿಎಂ ಕದನ ಶಾಂತವಾಗಿರುವಾಗಲೇ ಈ ರೀತಿ ಘೋಷಣೆ ಕೂಗಿರುವುದು ಹೈಕಮಾಂಡ್ ಕೆಂಗಣ್ಣಿಗೆ…

Read More

ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್ ಅವರಿಂದ ಶೋಕಾಸ್ ನೋಟಿಸ್ ಜಾರಿ ಬೆಂಗಳೂರು:- ಕಾಂಗ್ರೆಸ್ ನಲ್ಲಿ ಕಳೆದ ಕೆಲ ತಿಂಗಳಿನಿಂದ ಸಿಎಂ ಗದ್ದುಗೆ ಗುದ್ದಾಟ ಮೀತಿ ಮೀರಿದೆ ಸಿಎಂ- ಡಿಸಿಎಂ‌ ಬ್ರೇಕ್ ಪಾಸ್ಟ್ ಸಭೆ ಮಾಡಿ ಸಂಧಾನ ಮಾಡಿದ್ರೂ ಇದು ನಿಲ್ಲದಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಜ್ಯಕ್ಕೆ ಭೇಟಿ ನೀಡಿದ್ದ ವೇಳೆ ಸಿಎಂ ಘೋಷಣೆ ಕೂಗಿದ್ದವರಿಗೆ ಎಐಸಿಸಿ ಶಾಕ್ ನೀಡಿದೆ. ನಾರಾಯಣ ಗುರು ಹಾಗೂ ಮಹಾತ್ಮ ಗಾಂಧಿ ನಡುವಿನ ಸಂವಾದದ ಶತಮಾನೋತ್ಸವ ಕಾರ್ಯಕ್ರಮ ಇತ್ತೀಚೆಗೆ ಮಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕೆ.ಸಿ ವೇಣುಗೋಪಾಲ್ ಕೇರಳದಿಂದ ಮಂಗಳೂರಿಗೆ ಆಗಮಿಸಿದ್ದರು ವೇಣುಗೋಪಾಲ್ ಮಂಗಳೂರು ವಿಮಾನ ನಿಲ್ದಾಣದಿಂದ ಆಚೆ ಬರುತ್ತಿದ್ದಂತೆಯೇ ಕಾಂಗ್ರೆಸ್ ಮುಖಂಡ ಮಿಥುನ್ ರೈ ಹಾಗೂ ಅವರ ಬೆಂಬಲಿಗರು ಡಿಕೆಶಿ ಪರವಾಗಿ ಡಿಕೆ ಡಿಕೆ ಎಂದು ಘೋಷಣೆ ಕೂಗಿದ್ದಲ್ಲದೇ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಬೇಕೆಂದು ಆಗ್ರಹಿಸಿದ್ರು ಸಿಎಂ ಡಿಸಿಎಂ ಕದನ ಶಾಂತವಾಗಿರುವಾಗಲೇ ಈ ರೀತಿ ಘೋಷಣೆ ಕೂಗಿರುವುದು ಹೈಕಮಾಂಡ್ ಕೆಂಗಣ್ಣಿಗೆ…

Read More

ಹೆಚ್ಚಿನ ಚಿಕಿತ್ಸೆಗಾಗಿ ಅಸ್ವಸ್ಥ ಮಹಿಳೆಯನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲು ನೆರವಾದ ಕಾಂಗ್ರೆಸ್ ಪಕ್ಷದ ಪ್ರಮುಖರು ಪುತ್ತೂರು:- ತಿಂಗಳಾಡಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರು ಸಡನ್ ಆಗಿ ಕುಸಿದು ಬಿದ್ದು ಅಸ್ವಸ್ಥರಾಗಿದ್ದು ಅಸ್ವಸ್ಥ ಮಹಿಳೆ ತಿಮ್ಮಕ್ಕ (68) ಎಂದು ಗುರುತಿಸಲಾಗಿದೆ. ಇದನ್ನು ನೋಡಿದ ಮಹಿಳೆಯ ಸಂಬಂಧಿಕರು ತಕ್ಷಣ ಅಸ್ವಸ್ಥ ಮಹಿಳೆಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು ಈ ಸಂದರ್ಭದಲ್ಲಿ ಮಹಿಳೆಯ ತಲೆಗೆ ಹೆಚ್ಚಿನ ಗಾಯ ಆಗಿರುವುದರಿಂದ ಮಹಿಳೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲು ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಪ್ರವೀಣ್ ಆಚಾರ್ಯ , ಆರ್ಯಾಪು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಗರೀಶ್ ರೈ , ಪ್ರಮುಖರಾದ ಸತೀಶ್ , ಹರೀಶ್ ನಿಡ್ಪಳ್ಳಿ , ಉಪ್ಪಿನಂಗಡಿ ಆರೋಗ್ಯ ರಕ್ಷಾ ಸಮಿತಿಯ ಸದಸ್ಯೆ ಶ್ರೀಮತಿ ಜಯಶೀಲ, ಮುಂಡೂರು ಗ್ರಾಮ ಗ್ರಾಮ ಪಂಚಾಯತ್ ಸದಸ್ಯರಾದ ಮಹಮ್ಮದ್ ಅಲಿ , ಜಿಲ್ಲಾ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ದಾಮೋದರ ಮುರ, ಅಕ್ರಮ…

Read More

SSF ಸವಣೂರು ಶಾಖೆಯ ವಾರ್ಷಿಕ ಮಹಾಸಭೆಯು 29-11-2025 ರಂದು ಇಶಾ ನಮಾಝಿನ ಬಳಿಕ ಕಛೇರಿಯ ಲ್ಲಿ ನಡೆಯಿತು. ಅಧ್ಯಕ್ಷ ತೆಯನ್ನು ಅಬೂಬಕ್ಕರ್ ಮುಸ್ಲಿಯಾರ್ ಕಾಯರ್ಗ ವಹಿಸಿದರು ನೌಫಲ್ ಸವಣೂರು ರವರು ಸ್ವಾಗತ ಭಾಷಣ ಹಾಗೂ ಸಾದಾತ್ ಕಾಯರ್ಗ ರವರು ಉದ್ಘಾಟನೆ ಗೈದು ಫಾರಿಸ್ ಕಾಯರ್ಗ ರವರು ಪ್ರಾಸ್ತಾವಿಕ ಭಾಷಣ ಮಾಡಿದರು. ವೀಕ್ಷಣಾ ಧಿಕಾರಿಯಾಗಿ ಆಗಮಿಸಿದ ಸಿನಾನ್ ಪಲ್ಲತ್ತಾರು ಅವರ ನಿರ್ದೇಶನ ಹಾಗೂ ಕಾರ್ಯಕರ್ತರ ಒಮ್ಮತಾಭಿಪ್ರಾಯದ ಪ್ರಕಾರ ಸಮಿತಿಯನ್ನು ಬರ್ಖಾಸ್ತು ಮಾಡದೆ 2026- 027 ಸಾಲಿನ ಅಧ್ಯಕ್ಷರಾಗಿ ಮುಹಮ್ಮದ್ ಫಾರಿಸ್ ಕಾಯಾರ್ಗ, ಉಪಾಧ್ಯಕ್ಷರಾಗಿ ಸಯ್ಯಿದ್ ಅಬ್ದುರ್ರಹ್ಮಾನ್ ತಂಙಳ್ ಮಾಂತೂರು, ಕಾರ್ಯದರ್ಶಿಯಾಗಿ ಮುಹಮ್ಮದ್ ನೌಫಲ್ ಶಾಂತಿನಗರ, ಜೊತೆಗೆ ಕಾರ್ಯದರ್ಶಿಯಾಗಿ ಸಾದಾತ್ ಕಾಯಾರ್ಗ, ಖಜಾಂಜಿಯಾಗಿ ಅಲಿ ಅಸ್ಗರ್ ಅಲಿ ಮಾಂತೂರು, GD ಆಗಿ ಶಮ್ಮಾಸ್ ಮಾಂತೂರು, QD ಆಗಿ ಸಲ್ಮಾನ್ ಮಾಂತೂರು, ದಅ್‌ವಾಹ್‌ಗೆ ರುವೈದ್ ಸವಣೂರು, ರೈಂಬೋ ವಿಭಾಗಕ್ಕೆ ಉವೈಸ್ ಸವಣೂರು ಮತ್ತು ಕ್ಯಾಂಪಸ್ ವಿಭಾಗಕ್ಕೆ ಫುಹಾದ್ ಶಾಂತಿನಗರ ಹಾಗೂ ಕಾರ್ಯಾಕಾರಿ ಸಮಿತಿ ಸದಸ್ಯರಾಗಿ ಫೈಝಲ್…

Read More

ರಾಜ್ಯಾಧ್ಯಕ್ಷರನ್ನು ಭೇಟಿಯಾಗಿ ಅಭಿನಂದಿಸಿದ ಕೆಪಿಸಿಸಿ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀ ಹನೀಫ್ ಬಗ್ಗುಮೂಲೆ ಹಾಗೂ ಕಾಂಗ್ರೆಸ್ ಯುವ ಮುಖಂಡ ಸಿದ್ದೀಕ್ ಸೂರ್ಯ ಬೆಂಗಳೂರು:-ಕೆಪಿಸಿಸಿ ಮೀನುಗಾರ ವಿಭಾಗದ ರಾಜ್ಯ ಅಧ್ಯಕ್ಷರಾದ ಶ್ರೀ ಮಂಜುನಾಥ ಸುಣಗಾರ ಅವರನ್ನು ಕೆಪಿಸಿಸಿ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀ ಹನೀಫ್ ಬಗ್ಗುಮೂಲೆ ಅವರ ನೇತೃತ್ವದಲ್ಲಿ ಬೆಂಗಳೂರಿನ ಕಚೇರಿಯಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸಾಮಾಜಿಕ ನಾಯಕ ಸಿದ್ದೀಕ್ ಸೂರ್ಯ ಅವರನ್ನು ಮೀನುಗಾರ ವಿಭಾಗದ ರಾಜ್ಯಾಧ್ಯಕ್ಷರಾದ ಶ್ರೀ ಮಂಜುನಾಥ ಸುಣಗಾರ ಅವರು ಅಭಿನಂಧಿಸಿದರು ಈ ಸಂದರ್ಭದಲ್ಲಿ ಮೀನುಗಾರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಗಾಯತ್ರಿ ಅವರು ಉಪಸ್ಥಿತರಿದ್ದರು

Read More