Author: PrasakthaNews

Kannada news website from coastal Karnataka

ಪ್ರವಾಸಿಗರಿಗಾಗಿ ಕೈಗೊಳ್ಳುವ ಸಫಾರಿಗಳ ಸಂಖ್ಯೆಯನ್ನು ಕಡಿಮೆ ಮಾಡಲು ಸೂಚನೆ ಬೆಂಗಳೂರು:- ಅಕ್ರಮವಾಗಿ ರೆಸಾರ್ಟ್ ಗಳನ್ನು ನಡೆಸುತ್ತಿರುವವರ ವಿರುದ್ದವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಪ್ರವಾಸಿಗರಿಗಾಗಿ ಕೈಗೊಳ್ಳುವ ಸಫಾರಿಗಳ ಸಂಖ್ಯೆಯನ್ನೂ ಕಡಿಮೆ ಮಾಡಲು ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಭಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಸಲ ಪ್ರಶಸ್ತಿಗಾಗಿ ಅರ್ಜಿಯನ್ನು ಕರೆಯದೇ ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮಾನತೆಯನ್ನು ಗಮನದಲ್ಲಿರಿಸಿ ಪ್ರತಿ ಜಿಲ್ಲೆಯಿಂದಲೂ ಸಾಧಕರನ್ನು ಗುರುತಿಸಿ ಗೌರವಿಸಲಾಗಿದೆ. ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೆಸಾರ್ಟ್ ಗಳು ಎತ್ತುತ್ತಿದ್ದು ಸಫಾರಿಗಳು ಸೇರಿದಂತೆ ಜನರ ಸಂಚಾರ ಹೆಚ್ಚುತ್ತಿದೆ ನೀರು ಮತ್ತು ಮೇವಿನ ಕೊರತೆ ಹಾಗೂ ಹುಲಿ ಚಿರತೆಗಳ ಹಾವಳಿಯಿಂದ ಕಾಡುಪ್ರಾಣಿಗಳು ಜನವಸತಿ ಪ್ರದೇಶಕ್ಕೆ ಬರುತ್ತಿವೆ ಈ ಬಗ್ಗೆ ಸಂಬಂಧಪಟ್ಟ ಸಚಿವರು ಈಗಾಗಲೇ ಸಭೆ ನಡೆಸಿದ್ದು ನನ್ನ ಅಧ್ಯಕ್ಷತೆಯಲ್ಲಿಯೂ ಸಭೆ ನಡೆಯಲಿದೆ ಅಲ್ಲದೇ ಅಕ್ರಮವಾಗಿ ರೆಸಾರ್ಟ್ ಗಳನ್ನು ನಡೆಸುತ್ತಿರುವವರ ವಿರುದ್ದವೂ ಕಾನೂನು…

Read More

ಸಿಎಂ ಸಿದ್ದರಾಮಯ್ಯ ಘೋಷಣೆ ಕನ್ನಡಿಗರ ಭಾಷೆ ಕನ್ನಡಿಗರ ಹಿತವೇ ನಮ್ಮ ಮೊದಲ ಆದ್ಯತೆ ಬೆಂಗಳೂರು:- ವಾರದಲ್ಲಿ 2 ದಿನ ಮದರಸಗಳಲ್ಲಿ ಕನ್ನಡ ಕಲಿಕೆ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಧ್ವಜಾರೋಹಣ ನೆರವೆರಿಸಿದ ಬಳಿಕ ಮಾತನಾಡಿದ ಸಿಎಂ ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಿಸಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಬ್ದಾರಿಯಾಗಿದೆ ಈ ನಿಟ್ಟಿನಲ್ಲಿ ನಮ್ಮ ಸರ್ಕಾರವು ಕೆಲಸ ಮಾಡುತ್ತಿದೆ ಎಂದರು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯಡಿ ಕಲಾವಿದರ ಮಾಸಾಶನ 2000ರೂ ನಿಂದ 2500 ರೂಗೆ ಹೆಚ್ಚಳ ಮಾಡಿದ್ದೇವೆ ಕರ್ನಾಟಕದಲ್ಲಿ ತಯಾರಾಗುವ ಮತ್ತು ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಬಳಕೆ ಕಡ್ಡಾಯಗೊಳಿಸಿದ್ದೇವೆ ರಾಜ್ಯದ ಮದರಾಸಗಳಲ್ಲಿ ವಾರದಲ್ಲಿ 2 ದಿನ ಕನ್ನಡ ಕಲಿಕೆ ಆರಂಭಿಸಲಾಗಿದೆ ಎಂದರು ಕನ್ನಡ ಭಾಷೆ ಮತ್ತು ಕನ್ಮಡಿಗರ ಹಿತವೇ ನಮ್ಮ ಮೊದಲ ಆದ್ಯತೆ ಎಂದು ಅವರು ತಿಳಿಸಿದರು

Read More

ಹೋಮ್ ಪ್ರೋಡೆಕ್ಟ್ ಸ್ವಾದಿಸ್ಟಕರ ಸಿಹಿತಿಂಡಿಗಳು ಲಭ್ಯ ಪುಣಚ:- ಅಜ್ಜಿನಡ್ಕದ ಹೃದಯ ಭಾಗದಲ್ಲಿ ನೂತನ ಶ್ರೀ ದುರ್ಗಾ ಬೇಕರಿಯು ಅ.3 ರಂದು ಶುಭಾರಂಭಗೊಂಡಿತು ನೂತನ ಶ್ರೀ ದುರ್ಗಾ ಬೇಕರಿಗೆ ಧಾರ್ಮಿಕ ಗುರುಗಳು ಸಾಮಾಜಿಕ ಶೈಕ್ಷಣಿಕ, ಮತ್ತು ವಿವಿಧ ಕ್ಷೇತ್ರದಲ್ಲಿ ತೊಡಗಿಸಿಕೊಂಡವರು ಆಗಮಿಸಿ ಶುಭ ಹಾರೈಸಿದರು ನೂತನ ಬೇಕರಿ ಸಂಸ್ಥೆಯಲ್ಲಿ ಎಲ್ಲಾ ಬಗೆಯ ಬೇಕರಿ ತಿಂಡಿ ತಿನಿಸುಗಳು ಐಸ್ ಕ್ರೀಂ ಮುಂತಾದವುಗಳು ಹೋಮ್ ಪ್ರಾಡಕ್ಟ್ ಲಭ್ಯವಿದೆ ಎಂದು ನೂತನ ಶ್ರೀ ದುರ್ಗಾ ಬೇಕರಿಯ ಮಾಲಕರಾದ ಶ್ರೀ ಸತೀಶ್ ಎನ್ ಅವರು ತಿಳಿಸಿದ್ದಾರೆ

Read More

ಚೊಚ್ಚಲ ಏಕದಿನ ವಿಶ್ವಕಪ್ ಗೆದ್ದ ಮಹಿಳಾ ಪಡೆ ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯ ಮುಂಬೈ:- ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಭಾರತ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. 2025ರ ಮಹಿಳಾ ವಿಶ್ವಕಪ್ ಫೈನಲ್‌ನಲ್ಲಿ ಅತಿಥೇಯ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದು ಇತಿಹಾಸ ಬರೆದಿದೆ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ ಗಳ ಅಂತರದಲ್ಲಿ ಮಣಿಸಿ ಭರ್ಜರಿ ಜಯ ದಾಖಲಿಸಿತು. ಭಾರತ ನೀಡಿದ್ದ 299 ರನ್ ಗಳ ಬ್ರಹತ್ ಗುರಿಯನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡ 45.3 ಓವರ್ ಗಳಲ್ಲಿ 246 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 52 ರನ್ ಗಳ ಅಂತರದಿಂದ ಭಾರತದ ಎದುರು ಮಂಡಿಯೂರಿತು.

Read More

ಪ್ರಕರಣ ದಾಖಲು ಪುತ್ತೂರು:- ಕಡಬ ಸಂತೆಕಟ್ಟೆ ಬಳಿ ಮೀನು ಮಾರುಕಟ್ಟೆಯಲ್ಲಿ ನ.01 ರಂದು ಬೆಳಿಗ್ಗೆ ಮೀನು ಮಾರಾಟದ ವಿಚಾರದಲ್ಲಿ ಎರಡು ಅಂಗಡಿಯವರಿಗೆ ಮಾತಿನ ಚಕಮಕಿ ನಡೆದು ಬಳಿಕ ಪರಸ್ಪರ ಹೊಡೆದಾಟ ನಡೆದಿರುವ ಬಗ್ಗೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಂಡು ಬಂದಿದ್ದು ಈ ಕುರಿತು ಕಡಬ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜು ಮ್ಯಾಥ್ಯೂ, ಆದಂ, ಪಯಾಝ್, ರಕ್ಷಿತ್ ಮಾಣಿ, ನೌಫಲ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಮೀನು ಮಾರಾಟದ ವಿಚಾರಕ್ಕೆ ರಾಜು ಮ್ಯಾಥ್ಯೂ ಹಾಗೂ ಆದಂ ಎಂಬ ಎರಡು ಅಂಗಡಿಯವರ ನಡುವೆ ಮಾತಿನ ಚಕಮಕಿ ನಡೆದು ಬಳಿಕ ಸಾರ್ವಜನಿಕ ಸ್ಥಳದಲ್ಲಿ ರಾಜು ಮ್ಯಾಥ್ಯೂ , ಆದಂ, ಫಯಾಝ್, ರಕ್ಷಿತ್ ಮಾಣಿ, ನೌಫಲ್ ಎಂಬುವರು ಪರಸ್ಪರ ಹೊಡೆದಾಡಿಕೊಂಡು ಸಾರ್ವಜನಿಕರ ಶಾಂತಿಗೆ ಭಂಗ ಉಂಟಾಗುವಂತೆ ಮಾಡಿದ್ದು ಆದ್ದರಿಂದ ಸದ್ರಿ ವ್ಯಕ್ತಿಗಳ ವಿರುದ್ಧ ಕಡಬ ಪೋಲಿಸ್ ಠಾಣೆಯಲ್ಲಿ ಅ.ಕ್ರ 73/2025 ಕಲಂ 194(2) BNS -2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ…

Read More

ಮೃತ ಯುವಕ ಅಳಿಕೆ ಗ್ರಾಮದ ಇಸ್ಮಾಯಿಲ್ (37) ವಿಟ್ಲ :- ತೆಂಗಿನಕಾಯಿ ಕೀಳುತ್ತಿದ್ದಾಗ ಕರೆಂಟ್ ಶಾಕ್ ಹೊಡೆದು ಯುವಕ ಮೃತಪಟ್ಟ ಘಟನೆ ಅಳಿಕೆಯಲ್ಲಿ ನಡೆದಿದೆ ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್ ( 37) ಮೃತಪಟ್ಟ ಯುವಕ ತೆಂಗಿನ ಮರದಿಂದ ಕಬ್ಬಿಣದ ದೋಟಿ ಬಳಸಿ ಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕರೆಂಟ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ಸಾಗಿಸಿದರೂ ಬದುಕಿ ಉಳಿಯಲಿಲ್ಲ ಮೃತರಿಗೆ ಪತ್ನಿ ಪುತ್ರಿ ಪುತ್ರ ಇದ್ದಾರೆ

Read More

ಅಪಘಾತದಲ್ಲಿ ಇಬ್ಬರೂ ಮೃತ್ಯು ಗಾಯಗೊಂಡ ಮಗುವಿನ ರಕ್ಷಣೆಗೆ ಧಾವಿಸಿ ಮಾನವೀಯತೆ ಮೆರೆದ ಪುತ್ತೂರು ಮಹಿಳಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಶ್ರೀಮತಿ ಚಂದ್ರಪ್ರಭಾ ಗೌಡ ಪುತ್ತೂರು:- ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಎಂಬಲ್ಲಿ ಆಟೋ ರಿಕ್ಷಾ ಮತ್ತು ಕಾರು ನಡುವೆ ನ.1 ರಂದು ಸಂಜೆ ಬೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ರಿಕ್ಷಾದಲ್ಲಿದ್ದವರಿಗೆ ಗಂಭೀರ ಗಾಯವಾಗಿದ್ದು ಇಬ್ಬರೂ ಮೃತರಾಗಿದ್ದು ಉಳಿದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ ಘಟನೆ ನಡೆದ ತಕ್ಷಣ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಹಿಳಾ ಕಾರ್ಯಾಧ್ಯಕ್ಷರಾದ ಶ್ರೀಮತಿ ಚಂದ್ರಪ್ರಭಾ ಗೌಡ ಅವರಿಗೆ ಪ್ರತ್ಯಕ್ಷದರ್ಶಿಗಳು ಪೋನ್ ಮೂಲಕ ವಿಷಯ ತಿಳಿಸಿದ್ದು ತಕ್ಷಣ ಚಂದ್ರಪ್ರಭಾ ಗೌಡ ಅವರು ಕಾರ್ಯಪ್ರತರಾಗಿ ಸಂಪ್ಯದ ಆಸ್ಪತ್ರೆಗೆ ದಾವಿಸಿ ಮಗುವಿಗೆ ಬೇಕಾದ ಎಲ್ಲಾ ಸಕಲ ವ್ಯವಸ್ಥೆಯನ್ನು ಮಾಡುವ ಮೂಲಕ ಮಗುವಿನ ಜೀವ ಉಳಿಸುವಲ್ಲಿ ಯಶಸ್ವಿಯಾಗುವ ಮೂಲಕ ಮಾನವೀಯತೆ ಮೆರೆದರು ಇವರ ಮಾನವೀಯ ಜೀವಕಾರುಣ್ಯ ಕೆಲಸ ಕಾರ್ಯಗಳಿಗೆ ಸಮಾಜದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ

Read More

ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ ಬೆಂಗಳೂರು:-70ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ನಾಡಿನಾದ್ಯಂತ ಮನೆ ಮಾಡಿದ್ದು ಈ ಹಿನ್ನಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು ಇಂದು ನಾವು ಕನ್ನಡ ರಾಜ್ಯೋತ್ಸವನ್ನು ಆಚರಿಸುತ್ತಿರುವಾಗ ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ ಸಾಹಿತ್ಯ ಕಲೆ ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕ್ರತಿಯನ್ನು ಸಹ ನಾವು ಆಚರಿಸುತ್ತೇವೆ ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾಥಿಸುತ್ತೇನೆಂದು ಹೇಳಿದ್ದಾರೆ

Read More

ಸಿಎಂ ಹುದ್ದೆ ಕನಸು ತ್ಯಾಗದ ಸುಳಿವು ನೀಡಿದ್ರಾ ಡಿಕೆ ಶಿವಕುಮಾರ್ ಬೆಂಗಳೂರು:- ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಚರ್ಚೆಯಾಗುತ್ತಿರುವಾಗಲೇ ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಸೋನಿಯಾ ಗಾಂಧಿಯವರು ಹಿಂದೆ ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದರು ಇನ್ನು ನಾನ್ಯಾವ ಲೆಕ್ಕ ಎಂಬ ಡಿಕೆ ಶಿವಕುಮಾರ್ ಹೇಳಿಕೆ ಈಗ ರಾಜ್ಯಾದ್ಯಂತ ಚರ್ಚೆಯಾಗುತ್ತಿದೆ. ನವೆಂಬರ್ ನಲ್ಲಿ ಸಿಎಂ ಬದಲಾವಣೆಯಾಗಲಿದೆ ಎಂಬ ಚರ್ಚೆಗಳ ನಡುವೆ ಡಿಕೆ ಶಿವಕುಮಾರ್ ತ್ಯಾಗದ ಮಾತು ಮಹತ್ವ ಪಡೆದುಕೊಂಡಿದೆ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಡಿಕೆ ಶಿವಕುಮಾರ್ ಇಂದಿರಾಗಾಂಧಿಯವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು ಸೋನಿಯಾ ಗಾಂಧಿಯವರಿಗೆ ಪ್ರಧಾನಿಯಾಗುವ ಅವಕಾಶವಿತ್ತು ಯುಪಿಎ ಒಕ್ಕೂಟದ ಬೆಂಬಲವು ಇತ್ತು ಆದರೆ ಅವರು ಪ್ರಧಾನಿ ಹುದ್ದೆ ಮುಖ್ಯವಲ್ಲ ಎಂದರು ಆರ್ಥಿಕ ತಜ್ಞ ಡಾ ಮನಮೋಹನ್ ಸಿಂಗ್ ಅವರಿಗೆ ಪ್ರಧಾನಿ ಹುದ್ದೆ ಬಿಟ್ಟುಕೊಟ್ಟಿದ್ದರು. ಈ ದೇಶಕ್ಕೆ ಗಾಂಧಿ ಕುಟುಂಬದ ಕೊಡುಗೆ ದೊಡ್ಡದು ಎಂದರು ಅಧಿಕಾರ ಹಂಚಿಕೆ ಚರ್ಚೆಗಳ…

Read More

*ದಿನವಿಡೀ ಸಮಾಜದ ಜನರ ಸೇವೆಯಲ್ಲಿದ್ದ ಚಾರಿಟೇಬಲ್ ಟ್ರಸ್ಟ್ ನ್ನು ನಿರ್ಲಕ್ಷ್ಯ ಮಾಡಿರುವುದು ಎಷ್ಟು ಸರಿ* ಇಂದು ಕನ್ನಡ ರಾಜ್ಯೋತ್ಸವದ ಸುದಿನ. ರಾಜ್ಯ ಮತ್ತು ಜನತೆ ಸಡಗರದಲ್ಲಿ ಮುಳುಗಿರುವಾಗ, ಹೆಚ್ಚು ಚರ್ಚೆಯಾಗುತ್ತಿರುವ ವಿಷಯ — ಪ್ರಶಸ್ತಿ ಯಾರಿಗೆ ಸಿಕ್ಕಿತು, ಹೇಗೆ ಸಿಕ್ಕಿತು? ಇದು ಆ ಪ್ರಶಸ್ತಿಯ ಪ್ರಶಸ್ತಿಯನ್ನೇ ಸಂಶಯದ ಮೊನೆಯಲ್ಲಿ ನಿಲ್ಲಿಸಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ಬಹುತೇಕ ಪ್ರಶಸ್ತಿಗಳು ರಾಜಕೀಯ ಕೃಪಾಕಟಾಕ್ಷದಿಂದ ಹಂಚಲ್ಪಟ್ಟಿದೆ. ಈ ಬಾರಿ ಪ್ರಶಸ್ತಿಗಿಂತ, ರಾಜಕೀಯ ಪ್ರಭಾವವೇ ಹೆಚ್ಚಾಗಿ ಕಂಗೊಳಿಸಿದೆ. ಜನಸೇವಕರು ರಾಜಕೀಯ ಬಲಸುವಷ್ಟು ಶಕ್ತರಲ್ಲದೇ ಇದ್ದರೆ ಪ್ರಶಸ್ತಿ ಮರಿಚಿಕೆಯೇ ಆಗುವ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ. ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ದುಡಿಯುವ ಒಬ್ಬ ನಿಸ್ವಾರ್ಥ ಸೇವಕನಿಗಿಂತ, ವಾಟ್ಸಪ್‌ ಶೀರ್ಷಿಕೆ ಬದಲಾಯಿಸುವವರಿಗೆ ಮೆಚ್ಚುಗೆ ದೊರೆಯುತ್ತಿವೆ. ಪದವಿಗಿಂತ ಪ್ರಭಾವ ಮುಖ್ಯವಾಗಿದೆಯೆನ್ನಿಸುವ ಚಿತ್ರ! ನಮ್ಮ ಕಣ್ಣ ಮುಂದೆಯೇ ಕಾಣುತ್ತಿದೆ *ಜನತೆಯ ಪ್ರಶ್ನೆ ಗೆ ಉತ್ತರಿಸಿ*. ಪ್ರಶಸ್ತಿಗಳು ಕಲೆಯ ಗುರುತಿಗೋ ? ಸಾಮಾಜಿಕ ಕೆಲಸಕ್ಕೋ? ಜನರ ಕಷ್ಟ ಕಾರ್ಪಣ್ಯಗಳಲ್ಲಿ…

Read More