Author: PrasakthaNews

Kannada news website from coastal Karnataka

ಶ್ರೀ ಜೋಸಫ್ ಮಥಾಯಸ್ ಸಮಾಜ ಸೇವೆ ಅಥವಾ ಕಲಾ ಕ್ಷೇತ್ರದ ಸೇವೆಗೆ ನೀಡಿರುವ ಕೊಡುಗೆ ಗುರುತಿಸಿ 2025-26ನೇ ಸಾಲಿನ ನೀಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಾಗಿದ್ದಾರೆ, ಶ್ರೀ ಜೋಸಫ್ ಮಥಾಯಸ್ ಶಿಬ್ರಿಕೆರೆ ಮಂಗಳೂರು (ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೆರಿಟ್ ಪ್ರೈಟ್ ಸ್ಟಿಸಂ. ಕಂ.ಎಲ್. ಎಲ್. ಸಿ )ರವರು ಕನ್ನಡ ಭಾಷೆ, ಸಂಸ್ಕೃತಿ ಕಲೆಗಳ ಬಗ್ಗೆ ಅಪಾರ ಕಾಳಜಿವುಳ್ಳವರು, ಕನ್ನಡ ಭಾಷೆ ಹಾಗೂ ಕಲೆಗಳ ಉಳಿವಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಕನ್ನಡ ಪರ ಸಂಘಟನೆಗಳಗೆ ಬೆನ್ನೆಲುಬಾಗಿ ನಿಂತು ಕನ್ನಡಪರ ಸಂಘಟಟನೆಗಳಿಗೆ ಸದಾ ಬೆಂಲ ನೀಡುತ್ತಾ ಬಂದಿರುತ್ತಾರೆ ಕಲಾ ಪೋಷಕರಾದ ಇವರು ಯಕ್ಷಗಾನ, ಸಾಂಸ್ಕೃತಿ ಇತರ ಕಲೆಗಳಾದ, ಕುರುಕುರು ಮಾಮ, ಬಾಳಸಂತ್ ಧಪ್ ಮುಂತಾದುವುಗಳಿಗೆ ಸದಾ ಪ್ರೋತ್ಸಾಹ ನೀಡುತ್ತಿದ್ದು ಸಮಾಜದ ಬಡವರ ಬಗ್ಗೆ ಅತೀವ ಕಾಳಜಿ ವಹಿಸಿ ಅನೇಕ ಸಾಮಾಜಿಕ ಕಾರ್ಯವನ್ನು ನಿರ್ವಹಿಸಿರುತ್ತಾರೆ. ಕರಾವಳಿ ವಿಭಾಗದ ಹಲವಾರು ಶಾಲೆ, ದೇವಾಲಯ, ರಂಗಮಂದಿರ ಹಾಗೂ ಸಾಂಸ್ಕೃತಿಕ ಸಂಸ್ಥೆಗಳ ಪೋಷಕರಾಗಿದ್ದು, ಇದರ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.…

Read More

ಮುಖ್ಯಮಂತ್ರಿ ರೇವಂತ ರೆಡ್ಡಿ ಸರ್ಕಾರದಲ್ಲಿ ಮೊದಲ ಬಾರಿಗೆ ಅಲ್ಪಸಂಖ್ಯಾತ ಸಮುದಾಯದ ನಾಯಕನಿಗೆ ಒಲಿದ ಸಚಿವ ಸ್ಥಾನ ಹೈದರಾಬಾದ್ :- ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಾಂಗ್ರೆಸ್ ಮುಖಂಡ ಮೊಹಮ್ಮದ್ ಅಜರುದ್ದೀನ್ ಅವರು ತೆಲಂಗಾಣ ಸರ್ಕಾರದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಜಿಷ್ಣುದೇವ್ ವರ್ಮಾ ಅವರು ಅಜರುದ್ದೀನ್ ಅವರಿಗೆ ಪ್ರಮಾಣ ವಚನ ಭೋದಿಸಿದರು ಪ್ರಮಾಣ ವಚನ ಸ್ಬೀಕರಿಸುವ ಮೂಲಕ ಅಜರುದ್ದೀನ್ ಅವರು ರೇವಂತ ರೆಡ್ಡಿ ಸರ್ಕಾರದಲ್ಲಿ ಸಚಿವರಾದ ಅಲ್ಪಸಂಖ್ಯಾತ ಸಮುದಾಯದ ಮೊದಲ ಸಚಿವರೆನಿಸಿದರು. ಒಂದು ಲಕ್ಷಕ್ಕೂ ಹೆಚ್ಚು ಮುಸ್ಲಿಂ ಮತದಾರರು ಇರುವ ಜುಬಿಲಿ ಹಿಲ್ಸ್ ಕ್ಷೇತ್ರದ ಉಪಚುನಾವಣೆ ನಡೆಯಲಿರುವ ಕಾರಣದಿಂದ ಅಜರುದ್ದೀನ್ ಅವರನ್ನು ಸಂಪುಟಕ್ಕೆ ನೇಮಕ ಮಾಡಲಾಗಿದೆ ಎನ್ನಲಾಗಿದೆ ಬಿಆರ್ ಎಸ್ ಶಾಸಕ ಮಾಗಂಟಿ ಗೋಪಿನಾಥ್ ಅವರು ಈ ವರ್ಷದ ಜೂನ್ ನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರಿಂದ ಈ ಕ್ಷೇತ್ರ ತೆರವು ಗೊಂಡಿತ್ತು

Read More

ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಗೆ ಪೋಲಿಸ್ ಬುಲಾವ್ ಮಂಗಳೂರು:- ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬ ಹಾಕಿದ್ದ ಆಕ್ಷೇಪಾರ್ಹ ಕಮೆಂಟ್ ಅನ್ನು ಶೇರ್ ಮಾಡಿದ ಕಾರಣಕ್ಕೆ ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಅನ್ನು ವಿಚಾರಣೆಗೆ ಪೋಲಿಸ್ ಠಾಣೆಗೆ ಕರೆಸಲಾಗಿದೆ ಎಂದು ಪೋಲಿಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ ಕದ್ರಿ ಪೋಲಿಸ್ ಠಾಣೆಗೆ ವಿಚಾರಣೆಗೆ ಕರೆಸಲಾಗಿದ್ದು ಶರಣ್ ಪಂಪ್ ವೆಲ್ ಶೇರ್ ಮಾಡಿದ್ದ ಕಮೆಂಟ್ ಈಗಾಗಲೇ ಡಿಲೀಟ್ ಆಗಿದೆ ವಿಕಾಸ್ ಎಂಬಾತ ಹಾಕಿದ್ದ ಕಮೆಂಟ್ ಅನ್ನು ಶರಣ್ ಪಂಪ್ ವೆಲ್ ಶೇರ್ ಮಾಡಿದ್ದರು ಈ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ಕಮೀಷನರ್ ತಿಳಿಸಿದರು

Read More

ಆಸ್ಟ್ರೇಲಿಯಾವನ್ನು ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಭಾರತ ಮುಂಬೈ;- ಅ.30 ಮಹಿಳೆಯರ ಏಕದಿನ ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾರತ ಫೈನಲ್ ಗೆ ಎಂಟ್ರಿ ಕೊಟ್ಟಿದೆ‌ ಗುರುವಾರ ರಾತ್ರಿ ಡಿ.ವೈ ಪಾಟೀಲ ಕ್ರೀಡಾಂಗಣದಲ್ಲಿ ನಡೆದ ಮಹಿಳೆಯರ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಎರಡನೇ ಸೆಮಿಫೈನಲ್ ನಲ್ಲಿ ಆಸ್ಟ್ರೇಲಿಯಾವನ್ನು 5 ವಿಕೆಟ್ ಅಂತರದಿಂದ ಸೋಲಿಸಿದ ಭಾರತ ಫೈನಲ್ ಗೆ ಅರ್ಹತೆಯನ್ನು ಪಡೆಯಿತು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಲಿಚ್ ಪೀಲ್ಡ್ ಅವರ ಭರ್ಜರಿ ಶತಕ (119) ನೆರವಿನಿಂದ 50 ಓವವರ್ ಗಳಲ್ಲಿ 338 ರನ್ ಕಲೆ ಹಾಕಿತು ಭಾರತದ ಪರ ಬೌಲರ್ ದೀಪ್ತಿ ಶರ್ಮಾ ಶ್ರೀ ಚಾರಣಿ ತಲಾ 2 ವಿಕೆಟ್ ಪಡೆದು ಮಿಂಚಿದರು ಅಮಾನ್ ಜೋತ್ ಕೌರ್, ರಾಧ ಯಾದವ್ , ಕ್ರಾಂತಿ ಗೌಡ್ ತಲಾ ಒಂದೂಂದು ವಿಕೆಟ್ ಪಡೆದು ಮಿಂಚಿದರು ಆಸೀಸ್ ಪಡೆ ನೀಡಿದ ಬೃಹತ್ ರನ್ ಬೆನ್ನತ್ತಿದ ಭಾರತದ ಪರ ಆರಂಭಿಕ ಆಟಗಾರರಾದ…

Read More

ಆರೋಪಿ ವಶಕ್ಕೆ ಸುಳ್ಯ:-ಫೇಸ್ಬುಕ್ ನಲ್ಲಿ purush acharya ಎಂಬ ಹೆಸರಿನ ಖಾತೆಯಿಂದ ದಸರಾ ಉದ್ಘಾಟನೆ ಮಾಡಿದ ಬಾನು ಮುಸ್ತಾಕ್ ರವರ ಬಗ್ಗೆ ಮತ್ತು ಮುಖ್ಯಮಂತ್ರಿಗಳ ಬಗ್ಗೆ ಅಸಭ್ಯ ಪದಗಳಲ್ಲಿ ನಿಂದಿಸಿ ಪೋಸ್ಟ್ ಮಾಡಿದ ಬಗ್ಗೆ ಸುಳ್ಯ ಪೋಲಿಸ್ ಠಾಣಾ ಅಕ್ರ 112/2025 ಕಲಂ 296,196,354, BNS ರಂತೆ ಪ್ರಕರಣಗಳು ದಾಖಲಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ಘಟಕದ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ನ ಸಹಕಾರದಿಂದ ಸುಳ್ಯ ಪೋಲಿಸರು ಪ್ರಕರಣದ ಆರೋಪಿ ಪುರುಷೋತ್ತಮ ಆಚಾರ್ಯ ಬರಿಮಾರು ಬಂಟ್ವಾಳ ತಾಲೂಕು ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿರುತ್ತದೆ‌. ಮುಂದಿನ ಕಾನೂನು ಕ್ರ‌ಮ ಕೈಗೊಳ್ಳಲಾಗುತ್ತದೆ ಎಂದು ಪೋಲಿಸರು ತಿಳಿಸಿದ್ದಾರೆ.

Read More

ಮಂಗಳೂರಿನ ಪ್ರತಿಷ್ಟಿತ ಉದ್ಯಮಿಗೆ ಒಲಿದ ಪ್ರಶಸ್ತಿ ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಕೊಡಮಾಡುವ 2025-26 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು ಸೌದಿ ಅರೇಬಿಯಾ ಜುಬೈಲ್ ನ ಅಲ್ ಮುಝೈನ್ ಕಂಪೆನಿ ಸಂಸ್ಥಾಪಕ ಹಾಗೂ ಮಂಗಳೂರಿನ ಪ್ರತಿಷ್ಟಿತ ಸಂಸ್ಥೆ ಎಂ‌.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಝಕರಿಯಾ ಜೋಕಟ್ಟೆ ಅವರು ಅನಿವಾಸಿ ಕನ್ನಡಿಗ ವಿಭಾಗದಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬಜ್ಪೆಗುತ್ತು ಹಾಜಿ ಬಿ.ಶೇಕುಂಞಿ ಹಾಗೂ ಕತೀಜಮ್ಮ ದಂಪತಿ ಪುತ್ರನಾಗಿರುವ ಝಕರಿಯಾ ಜೋಕಟ್ಟೆ 1958 ಮೇ 10 ರಂದು ಜೋಕಟ್ಟೆಯ ತೋಕೂರಿನಲ್ಲಿ ಜನಿಸಿದರು 5 ಮಕ್ಕಳಲ್ಲಿ ಹಿರಿಯರಾದ ಝಕರಿಯಾ ಪ್ರೌಢ ವಿದ್ಯಾಬ್ಯಾಸವನ್ನು ಮೊಟಕುಗೊಳಿಸಿ ಕಠಿಣ ಕೆಲಸ ಮಾಡಿ ಜೀವನ ಪ್ರಾರಂಭಿಸಿದರು ಬೀದಿ ಬೀದಿಗಳಲ್ಲಿ ಬೆಲ್ಲ ವ್ಯಾಪಾರ ವೆಲ್ಡಿಂಗ್ ಕೆಲಸ ಗೋಣಿ ಹೂರುವ ಕಾರ್ಮಿಕನಾಗಿ ವಿದೇಶದಲ್ಲಿ 28ನೇ ಮಹಡಿಗೆ ಸಿಮೆಂಟು ಹೊತ್ತು ಶ್ರಮಪಟ್ಟು ದುಡಿದಿದ್ದಾರೆ. ಹಲವಾರು ವರ್ಷಗಳ ಅವರ ಕಠಿಣ ಪರಿಶ್ರಮ ತ್ಯಾಗ ಹಾಗೂ ಆನುಭವದ ಫಲವಾಗಿ 2008…

Read More

ಪೂಂಜಾಲಕಟ್ಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಬಂಟ್ವಾಳ:- ಅ.29 ಸ್ಕೂಟರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರರಿಬ್ಬರು ಗಾಯಗೊಂಡ ಘಟನೆ ಪೂಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯ ಪಿಲಾತಬೆಟ್ಟು ಗ್ರಾಮದ ಮೂರ್ಜೆ ಆಟೋ ರಿಕ್ಷಾ ನಿಲ್ದಾಣದ ಬಳಿ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ತಾಲೂಕು ಓಡಿಲ್ನಾಳ ಗ್ರಾಮದ ಮರಿಕೆ ನಿವಾಸಿ ಕಮಲಾಕ್ಷ 24 ಅವರು ಪೋಲಿಸ್ ಠಾಣೆಗೆ ದೂರು ನೀಡಿದ್ದು ಇವರು ತನ್ನ ಸ್ಕೂಟರಿನಲ್ಲಿ ಮಂಗಳೂರು ಕಡೆಯಿಂದ ಬಿಸಿರೋಡ್ – ಕಡೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಾ ಪಿಲಾತಬೆಟ್ಟು ಗ್ರಾಮದ ಮೂರ್ಜೆ ಆಟೋ ರಿಕ್ಷಾ ನಿಲ್ದಾಣದ ಬಳಿ ತಲುಪುತ್ತಿದ್ದಂತೆ ಸಂಜೆ ಸುಮಾರು 5:20 ರ ವೇಳೆಗೆ ನೇರಳಕಟ್ಟೆ ಕಡೆಯಿಂದ ಬರುತ್ತಿದ್ದ ಸ್ಕೂಟರನ್ನು ಅದರ ಸವಾರ ಅಜಾರುಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಮುಖ್ಯ ರಸ್ತೆಯಲ್ಲಿ ಬರುತ್ತಿದ್ದ ವಾಹನ ಗಮನಿಸದೇ ಕಮಲಾಕ್ಷ ಅವರು ಚಲಾಯಿಸುತ್ತಿದ್ದ ಸ್ಕೂಟರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಮೇತ ಅವರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ ಅಪಘಾತದಿಂದ ಸ್ಕೂಟರ್ ಸವಾರನಿಗೂ ಗಾಯವಾಗಿರುತ್ತದೆ ಈ ಬಗ್ಗೆ ಪೂಂಜಾಲಕಟ್ಟೆ ಪೋಲಿಸ್…

Read More

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಅವರಿಂದ ಉದ್ಘಾಟನೆ- ನೀರ್ಕಜೆ:- ಕೇಪು ಗ್ರಾಮದ ನೀರ್ಕಜೆಯಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿಯ ಅನುದಾನದಲ್ಲಿ ನಿರ್ಮಿಸಲಾಗಿರುವ ರಿಕ್ಷಾ ತಂಗುದಾಣವನ್ನು ಮತ್ತು ಕೇಪು ಉಳ್ಳಾಲ್ತಿ ದೇವಸ್ಥಾನ ರಸ್ತೆಗೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರೀಜೆಶ್ ಚೌಟ ಅವರ ಅನುದಾನ ರೂ 5 ಲಕ್ಷದಲ್ಲಿ ನಿರ್ಮಾಣವಾಗಿರುವ ಕಾಂಕ್ರೀಟ್ ರಸ್ತೆಯನ್ನು ಮಾನ್ಯ ವಿಧಾನ ಪರಿಷತ್ತಿನ ಶಾಸಕರಾದ ಕಿಶೋರ್ ಕುಮಾರ್ ಬೊಟ್ಯಾಡಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಘವ ಮಣಿಯಾಣಿ, ಉಪಾಧ್ಯಕ್ಷರಾದ ಹೇಮಾವತಿ, ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಹಾಲಿಂಗ ನಾಯ್ಕ ಅಮೈ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀ ದಯಾನಂದ ಶೆಟ್ಟಿ ಉಜಿರೆಮಾರ್, ಉಪಾಧ್ಯಕ್ಷರಾದ ಶ್ರೀ ಹರಿಪ್ರಸಾದ್ ಯಾದವ್, ಸುನಿಲ್ ದಡ್ಡು, ವಿದ್ಯಾದರ್ ಜೈನ್, ಪುಣಚ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ರಾಜೇಶ್ ಬಾಳೆಕಲ್ಲು, ಮಹಿಳಾ ಮೋರ್ಚಾ…

Read More

ನೇತ್ರಾವತಿ ನದಿಗೆ ಹಾರಿರುವ ಶಂಕೆ ಬಂಟ್ವಾಳ:- ಅ.29 ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕನೂರ್ವ ಕಾಣೆಯಾದ ಘಟನೆ ನಡೆದಿದ್ದು ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಮಾರ್ನಬೈಲು ನಿವಾಸಿ ಪ್ರೀತಂ ಲೋಬೋ ಎಂಬವರು ಕಾಣೆಯಾಗಿರುವ ವ್ಯಕ್ತಿ ಬೆಳಿಗ್ಗೆ ಸುಮಾರು 8 ಗಂಟೆ ವೇಳೆಗೆ ತನ್ನ ಬ್ಯಾಟರಿ ಚಾಲಿತ ರಿಕ್ಷಾವನ್ನು ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ನಿಲ್ಲಿಸಿ ನಾಪತ್ತೆಯಾಗಿದ್ದು ಈ ಬಗ್ಗೆ ಸ್ಥಳೀಯರು ಪೋಲಿಸರಿಗೆ ಮಾಹಿತಿ ನೀಡಿದ್ದಾರೆ. ಇದೀಗ ರಿಕ್ಷಾದ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಇವರು ರಿಕ್ಷಾ ನಿಲ್ಲಿಸಿ ನದಿಗೆ ಹಾರಿರಬಹುದು ಎಂಬ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ ಬಂಟ್ವಾಳ ನಗರ ಠಾಣಾ ಪೋಲಿಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ನೇತ್ರಾವತಿ ನದಿಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

Read More

ಎಲ್ಲಾ ಅಭಿವೃದ್ಧಿ ಕೆಲಸಗಳು ನೀತಿ ನಿಯಮಗಳ ಪ್ರಕಾರವೇ ನಡೆದಿದೆ ಖಾದರ್ ಹೇಳಿಕೆ ಬೆಂಗಳೂರು:- ಸಂಸದ ವಿಶ್ವೇಶರ ಹೆಗೆಡೆ ಕಾಗೆರಿ ತನ್ನ ವಿರುದ್ಧ ಮಾಡಿರುವ ಆರೋಪ ದುರುದ್ದೇಶಪೂರಿತ ಮತ್ತು ಆಧಾರರಹಿತ ಎಂದು ವಿಧಾನ ಸಭಾ ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ. ಯುಟಿ ಖಾದರ್ ವಿಧಾನಸಭೆಯ ಸ್ಪೀಕರ್ ಆಗಿರುವ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಮಾಜಿ ಸ್ಪೀಕರ್ ಹಾಗೂ ಹಾಲಿ ಸಂಸದ ಕಾಗೇರಿ ಮಾಡಿರುವ ಆರೋಪಕ್ಕೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ ವಿಶ್ವೇಶರ ಹೆಗಡೆ ಆರೋಪ ಮಾಡಿರುವಂತಹ ಯಾವುದೇ ಅಕ್ರಮ ನಡೆದಿಲ್ಲ ಎಲ್ಲಾ ಅಭಿವೃದ್ಧಿ ಕೆಲಸಗಳು ನೀತಿ ನಿಯಮಗಳು ಪ್ರಕಾರವೇ ನಡೆದಿವೆ ಅಭಿವೃದ್ಧಿ ಕೆಲಸಗಳು ಬಗ್ಗೆ ಯಾವುದೇ ತನಿಖೆಯನ್ನು ಬೇಕಿದ್ದರೂ ಮಾಡಿಸಬಹುದು ನಾನು ಇದನ್ನು ಸಕಾರಾತ್ಮಕವಾಗಿ ಸ್ವೀಕರಿಸುತ್ತೇನೆ ಎಂದು ಯುಟಿ ಖಾದರ್ ಹೇಳಿದ್ದಾರೆ

Read More